ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿದ್ದ ಶಿಕ್ಷಕಿ ಆತ್ಮಹತ್ಯೆ..!
(ನ್ಯೂಸ್ ಕಡಬ) newskadaba.com ಮಣಿಪಾಲ, ನ. 23. ಕೆಲಸದ ಒತ್ತಡದಿಂದ ಬೇಸತ್ತಿದ್ದ ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಮೃತಾ ಎಂದು ಗುರುತಿಸಲಾಗಿದೆ. ಇವರು ಕಳೆದ 8 ವರ್ಷಗಳಿಂದ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ಒತ್ತಡದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿದ್ದ ಶಿಕ್ಷಕಿ ಆತ್ಮಹತ್ಯೆ..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







