ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಫಾಸ್ಟ್ ಫುಡ್ ಮಾಲಕನಿಗೆ ದುಷ್ಕರ್ಮಿಗಳಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 18. ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಫಾಸ್ಟ್ ಫುಡ್ ಅಂಗಡಿಯೊಂದರ ಮಾಲೀಕನಿಗೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ಆದರ್ಶ ನಗರದ ಫಾಸ್ಟ್ ಫುಡ್ ಅಂಗಡಿ ಮಾಲಕ ಬಾತೀಶ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ಬುಧವಾರ ರಾತ್ರಿ ಇನೋವಾ ಹಾಗೂ ರಿಡ್ಜ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಣ್ಣ ಪುಟ್ಟ ಕಾರಣಕ್ಕೆ ಬಾತೀಶ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. […]

ಉಪ್ಪಿನಂಗಡಿ: ಫಾಸ್ಟ್ ಫುಡ್ ಮಾಲಕನಿಗೆ ದುಷ್ಕರ್ಮಿಗಳಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಇನ್ನೂ ಪತ್ತೆಯಾಗದ ಆರೋಪಿ ರಾಜೇಶ್ ಭಟ್ ➤ ವಕೀಲರ ಮನೆಯಲ್ಲಿ ಶೋಧ ಕಾರ್ಯ..!

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 18. ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿ ರಾಜೇಶ್ ಭಟ್ ಅವರ ಮನೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದಲ್ಲಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಪಂಚರ ಸಮಕ್ಷಮದಲ್ಲಿ ಈ ಶೋಧ ಕಾರ್ಯ ನಡೆದಿದ್ದು, ಪರಾರಿಯಾಗಿರುವ ಆರೋಪಿ ರಾಜೇಶ್ ಭಟ್‌ಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆಹಾಕಿದ್ದಾರೆ. ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರ ಕಚೇರಿಗೆ ಇಂಟರ್ನ್‌ಶಿಪ್‌ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ

ಮಂಗಳೂರು: ಇನ್ನೂ ಪತ್ತೆಯಾಗದ ಆರೋಪಿ ರಾಜೇಶ್ ಭಟ್ ➤ ವಕೀಲರ ಮನೆಯಲ್ಲಿ ಶೋಧ ಕಾರ್ಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಮುದ್ರದ ಅಲೆಗಳ ಹೊಡೆತಕ್ಕೆ ಬೋಟ್ ಮುಳುಗಡೆ ➤ ಏಳು ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರವಾರ, ನ. 18. ಮೀನುಗಾರಿಕೆಗೆಂದು ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಹವಾಮಾನ ವೈಪರೀತ್ಯದಿಂದಾಗಿ ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗಡೆಯಾದ ಘಟನೆ ನಡೆದಿದೆ. ಮಲ್ಪೆಯಿಂದ ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೂರು ಬೋಟ್‌ಗಳು ಅಲೆಗಳ ಹೊಡೆತಕ್ಕೆ ಸಿಲುಕಿದ್ದು, ಈ ವೇಳೆ ಇಂಜಿನ್ ಸಹ ಕೈ ಕೊಟ್ಟಿದೆ ಎನ್ನಲಾಗಿದೆ. ಮಾತಾ ಜಟಗೇಶ್ವರ ಮತ್ತು ಪಲ್ಲಕ್ ಎಂಬ ಹೆಸರಿನ ಬೋಟ್ ಮುಳುಗಡೆಯಾಗಿದ್ದು, ಇದರಲ್ಲಿದ್ದ ಏಳು ಮಂದಿಯನ್ನು, ಸ್ಥಳೀಯ ಮೀನುಗಾರರು ಹಾಗೂ ಗೋವಾದ ಕೋಸ್ಟ್

ಸಮುದ್ರದ ಅಲೆಗಳ ಹೊಡೆತಕ್ಕೆ ಬೋಟ್ ಮುಳುಗಡೆ ➤ ಏಳು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರುಪಾಲು..!

(ನ್ಯೂಸ್ ಕಡಬ) newskadaba.com ತೆಲಂಗಾಣ, ನ. 17. ಈಜಲಂದು ನೀರಿಗಿಳಿದ 6 ವಿದ್ಯಾರ್ಥಿಗಳು ನೀರುಪಾಲಾದ ಮನಕಲುಕುವ ಘಟನೆ ತೆಲಂಗಾಣದ ಸಿರ್ಸಿಲ್ಲಾ ಮನೈರ್ ನದಿಯಲ್ಲಿ ನಡೆದಿದೆ. ವೆಂಕೆಂಪೇಟ ಸರ್ಕಾರಿ ಶಾಲೆಯ ಆರು ಮಂದಿ ವಿದ್ಯಾರ್ಥಿಗಳು ಈಜಲೆಂದು ನೀರಿಗಿಳಿದಿದ್ದು, ಆರು ವಿದ್ಯಾರ್ಥಿಗಳು ಕೂಡಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಎನ್ ಡಿಆರ್ ಫ್ ತಂಡ ಆರು ಮಂದಿ ವಿದ್ಯಾರ್ಥಿಗಳ ಮೃತದೇಹವನ್ನು ಪತ್ತೆಹಚ್ಚಿದೆ.

ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರುಪಾಲು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದತ್ತ ಮಾಲಾಧಾರಿಗಳ ಬಸ್ ಗೆ ಕಲ್ಲೆಸೆತ ಪ್ರಕರಣ ಹಿನ್ನೆಲೆ ➤ ಬಂದ್ ಗೆ ಕರೆಕೊಟ್ಟ ಹಿಂದೂಸಂಘಟನೆ

(ನ್ಯೂಸ್ ಕಡಬ) newskadaba.com ಕೋಲಾರ, ನ. 17. ದತ್ತಪೀಠಕ್ಕೆ ತೆರಳುತ್ತಿದ್ದ ದತ್ತ ಮಾಲಾಧಾರಿಗಳ ಬಸ್ಸಿಗೆ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ನಾಳೆ (ನ. 18) ಕೋಲಾರ ಬಂದ್ ಗೆ ಕರೆ ನೀಡಿದೆ. ಇದರ ಜೊತೆಗೆ ಹಿಂದೂಪರ ಸಂಘಟನೆಗಳು ಮಹಾತ್ಮಾ ಗಾಂಧಿ ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಲಿದೆ. ಕಳೆದ ಶನಿವಾರದಂದು ನಗರದ ಎಂ.ಬಿ ರಸ್ತೆಯ ವಿಶಾಲ್ ಮಾರ್ಟ್ ಎದುರು ಚಿಕ್ಕಮಗಳೂರಿನ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆದಿತ್ತು.

ದತ್ತ ಮಾಲಾಧಾರಿಗಳ ಬಸ್ ಗೆ ಕಲ್ಲೆಸೆತ ಪ್ರಕರಣ ಹಿನ್ನೆಲೆ ➤ ಬಂದ್ ಗೆ ಕರೆಕೊಟ್ಟ ಹಿಂದೂಸಂಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಡಮಂಗಲ: ನಾಯಿ ಅಡ್ಡಬಂದ ಪರಿಣಾಮ ಮಗುಚಿಬಿದ್ದ ಸ್ಕೂಟರ್ ➤ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ. 17. ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಪರಿಣಾಮ ಅಪಘಾತ ಸಂಭವಿಸಿ ಸಹಸವಾರ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಸುರೇಶ್ (53) ಎಂದು ಗುರುತಿಸಲಾಗಿದೆ. ಇವರು ಎಡಮಂಗಲದಿಂದ ಕೊಳಂಬೆ ಎಂಬಲ್ಲಿಗೆ ಟ್ಯಾಪಿಂಗ್ ಗೆ ಮಾಡಲು ತಮ್ಮ ಸಂತೋಷ್ ಎಂಬವರೊಂದಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಸುರೇಶ್ ಎಂಬವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ

ಎಡಮಂಗಲ: ನಾಯಿ ಅಡ್ಡಬಂದ ಪರಿಣಾಮ ಮಗುಚಿಬಿದ್ದ ಸ್ಕೂಟರ್ ➤ ಸಹಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನದಿಗೆ ಉರುಳಿಬಿದ್ದ ಪೊಲೀಸ್ ವಾಹನ ➤ ಇಬ್ಬರು ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಪೂಂಚ್, ನ. 17. ಪೊಲೀಸ್ ಬೆಂಗಾವಲು ವಾಹನವೊಂದು ಸ್ಕಿಡ್ ಆಗಿ ನದಿಗೆ ಉರುಳಿಬಿದ್ದ ಪರಿಣಾಮ ಇಬ್ಬರು ಪೊಲೀಸ್ ಸಿನ್ಬಂದಿಗಳು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ನಡೆದಿದೆ. ಬುಫ್ಲಿಯಾಜ್ ಪ್ರದೇಶದ ಡ್ರೋಗ್ಜಿಯಾನ್ ಗ್ರಾಮದಲ್ಲಿ ಪೂಂಚ್‌ನ ಹಿರಿಯ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿದ್ದ ಆರು ಪೊಲೀಸರನ್ನು ರಕ್ಷಿಸಿ ಆಸ್ಪತ್ರೆಗೆ

ನದಿಗೆ ಉರುಳಿಬಿದ್ದ ಪೊಲೀಸ್ ವಾಹನ ➤ ಇಬ್ಬರು ಮೃತ್ಯು, ನಾಲ್ವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಬೈಕ್ ಲಾರಿ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 17. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ಸವಾರನನ್ನು ಮಂಗಳೂರು ನಿವಾಸಿ ಗಣೇಶ್(36) ಎಂದು ಗುರುತಿಸಲಾಗಿದೆ. ಗಣೇಶ್ ಅವರು ಬೈಕ್ ನಲ್ಲಿ ಮೆಲ್ಕಾರ್ ನಿಂದ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿಯು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.‌ ತಕ್ಷಣ ಅವರನ್ನು

ಬಂಟ್ವಾಳ: ಬೈಕ್ ಲಾರಿ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಸಿನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ನ. 17. ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸವಣೂರಿನಲ್ಲಿ ನಡೆದಿದೆ. ಮೃತರನ್ನು ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60 ವ.)ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ನ.15 ರಂದು ಸಂಜೆ ಸ್ನಾನಕ್ಕೆಂದು ಕಾಯಿಸಿಟ್ಟಿದ್ದ ಬಿಸಿನೀರಿನ ಪಾತ್ರೆಯನ್ನು ಎತ್ತಿಕೊಂಡು ಬಚ್ಚಲು ಕೋಣೆಗೆ ಒಯ್ಯುತ್ತಿದ್ದಾಗ ಆಕಸ್ಮಿಕವಾಗಿ ಬಿಸಿನೀರು ತುಂಬಿದ್ದ ಪಾತ್ರೆ ಕೈ ಹಿಡಿತದಿಂದ ಜಾರಿ ಬಿಸಿ

ಬಿಸಿನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ ಒಂದು ಪ್ರಯೋಗವನ್ನು ನೀವು ಮಾಡುವುದರಿಂದ ಜೀವನದ ಸರ್ವ ಸಮಸ್ಯೆಗಳಿಂದ ನೀವು ಮುಕ್ತಿಯನ್ನು ಪಡೆಯಬಹುದು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಈ ಒಂದು ಪ್ರಯೋಗವನ್ನು ನೀವು ಮಾಡುವುದರಿಂದ ಜೀವನದ ಸರ್ವ ಸಮಸ್ಯೆಗಳಿಂದ ನೀವು ಮುಕ್ತಿಯನ್ನು ಪಡೆಯಬಹುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top