ಕ್ರೈಮ್ ನ್ಯೂಸ್

ಪ್ರೀತಿಸಿ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 05. ಪ್ರಿಯಕರನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿಯೋರ್ವಳು ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ನಗರದ ರಾಜಾಪುರ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ರಮಾಬಾಯಿ ಎಂದು ಗುರುತಿಸಲಾಗಿದೆ. ಈಕೆ ರಾಹುಲ್ ಎಂಬ ಯುವಕನನ್ನು ಪ್ರೀತಿಸಿ, ಮೂರು ತಿಂಗಳ ಹಿಂದೆ ಓಡಿಹೋಗಿ ಮದುವೆಯಾಗಿದ್ದ. ಬಳಿಕ ಗಂಡನ ಮನೆಯಲ್ಲಿ ಜಾತಿ ನಿಂದನೆ ಮಾಡಿ ಅತ್ತೆ, ಮಾವ ಹಾಗೂ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ.

ಪ್ರೀತಿಸಿ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡಿಕೆ ಕದಿಯಲು ಮರಗಳನ್ನೇ ಕತ್ತರಿಸಿದ ಕಿಡಿಗೇಡಿಗಳು..!

(ನ್ಯೂಸ್ ಕಡಬ) newskadaba.com ಹಾಸನ, ಜ. 05. ಅಡಿಕೆ ಕಳವಿಗೆ ಬಂದ ದುಷ್ಕರ್ಮಿಗಳು ಅಡಿಕೆ ಮರವನ್ನೇ ಕತ್ತರಿಸಿ ಅಡಿಕೆ ಕದ್ದೊಯ್ದ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಸಕಲೇಶಪುರ ರೈಲ್ವೇ ಸೇತುವೆಯ ಸಮೀಪ ಸುಬ್ರಹ್ಮಣ್ಯ ಎಂಬವರಿಗೆ ಸೇರಿದ ಮೂರು ಎಕರೆ ಪ್ರದೇಶದಲ್ಲಿ ಕಾಫಿ ಹಾಗೂ ಅಡಿಕೆ ತೋಟವಿದ್ದು, ಈ ತೋಟಕ್ಕೆ ನುಗ್ಗಿದ ಕಳ್ಳರು ಬೆಳೆದು ನಿಂತಿದ್ದ 15 ಅಡಿಕೆ ಮರಗಳನ್ನು ಕತ್ತರಿಸಿ, ಅಡಿಕೆ ಕದ್ದೊಯ್ದಿದ್ದಾರೆ. ಘಟನೆಯ ಕುರಿತು ಸಕಲೇಶಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡಿಕೆ ಕದಿಯಲು ಮರಗಳನ್ನೇ ಕತ್ತರಿಸಿದ ಕಿಡಿಗೇಡಿಗಳು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡ ಕುಸಿತ ➤ ಗುಜರಿ ವ್ಯಾಪಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಇಲ್ಲಿನ ಗಾಂಧಿನಗರದಲ್ಲಿರುವ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಕಬ್ಬಿಣ ಸಮಾಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಮಗುಚಿ ಬಿದ್ದ ಪರಿಣಾಮ ವ್ಯಾಪಾರಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಗುಜರಿ ವ್ಯಾಪಾರಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜರಿ ವ್ಯಾಪಾರ ನಡೆಸುತ್ತಿದ್ದ ಇವರು, ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದು, ಇಂದು ಬೆಳಗ್ಗೆ ತಮ್ಮ ಕೆಲಸದಾಳುಗಳ ಜೊತೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ

ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡ ಕುಸಿತ ➤ ಗುಜರಿ ವ್ಯಾಪಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಟಾಕಿ ತರಲೆಂದು ತೆರಳಿದ್ದ ಬಾಲಕನ ಹತ್ಯೆಗೈದ ದುಷ್ಕರ್ಮಿಗಳು..! ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 05. 4 ಲಕ್ಷ ರೂ. ಗೆ ಬೇಡಿಕೆ ಇಟ್ಟು, ಬಾಲಕನೋರ್ವನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳ ತಂಡವೊಂದು ಹಣ ದೊರಕುವುದಿಲ್ಲವೆಂದು ಖಚಿತವಾದ ಬಳಿಕ ಬಾಲಕನನ್ನು ಹತ್ಯೆ ಮಾಡಿ ಮೃತದೇಹವನ್ನು ಕೆರೆಯೊಂದರ ಬಳಿ ಬಿಸಾಡಿ ಹೋದ ಘಟನೆ ಹುಣಸೂರ ತಾಲೂಕಿನ ಹನಗೋಡಿನಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಹನಗೋಡು ಗ್ರಾಮದ ತರಕಾರಿ ವ್ಯಾಪಾರಿ ನಾಗರಾಜ್ ಎಂಬವರ ಪುತ್ರ ಕಾರ್ತಿಕ್ (9) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬುಧವಾರದಂದು ಸಂಜೆ 7.30ರ ವೇಳೆಗೆ ಪಟಾಕಿ ತರಲೆಂದು ಮನೆಯಿಂದ

ಪಟಾಕಿ ತರಲೆಂದು ತೆರಳಿದ್ದ ಬಾಲಕನ ಹತ್ಯೆಗೈದ ದುಷ್ಕರ್ಮಿಗಳು..! ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ನ. 05. ಗೆಳೆಯರ ಜೊತೆ ವಿಹಾರಕ್ಕೆಂದು ಬಂದು ಕಪ್ಪೆ ಚಿಪ್ಪಿ ಹೆಕ್ಕುತ್ತಿದ್ದ ಸಂದರ್ಭ ಸಮುದ್ರಪಾಲಾದ ಯುವಕನ ಮೃತದೇಹವು ಸುರತ್ಕಲ್ ಠಾಣೆಯ ಚಿತ್ರಾಪುರ ಕಡಲ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸರಿಪಳ್ಳ ನಿವಾಸಿ ತಿಲಕ್ ರಾಜ್ (20) ಎಂದು ಗುರುತಿಸಲಾಗಿದೆ. ವಿಹಾರಕ್ಕೆಂದು ಗೆಳೆಯರ ಜೊತೆ ಬಂದಿದ್ದ ಈತ, ಮಂಗಳೂರು ಹೊರವಲಯದ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದ ವೇಳೆ ಸಮುದ್ರ ಪಾಲಾಗಿದ್ದು, ಇದೀಗ ಆತನ ಮೃತದೇಹವು ಪತ್ತೆಯಾಗಿದೆ. ಈ ಕುರಿತು ಸುರತ್ಕಲ್

ಮಂಗಳೂರು: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ ➤ 10 ಮಂದಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಅಡಿಕೆ ಕದ್ದ ಆರೋಪದಲ್ಲಿ 16 ವರ್ಷದ ಬಾಲಕನೋರ್ವನಿಗೆ ಗುಂಪು ಹಲ್ಲೆ ನಡೆಸಿದ ಪ್ರಕರಣ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು, ಹಲ್ಲೆ ನಡೆಸಿದ ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ

ಸುಳ್ಯ: ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ ➤ 10 ಮಂದಿಯ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹ ➤ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೈದ ಕೇಂದ್ರ ಕಾರಾಗೃಹದ ವಾರ್ಡನ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 05. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಗೆ ವೀಡಿಯೋ ಕರೆ ಮಾಡಿ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲದ ನಿವಾಸಿಯಾದ ಇವರು ಕಳೆದ ಎರಡೂವರೆ ವರ್ಷದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದ

ಕೌಟುಂಬಿಕ ಕಲಹ ➤ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೈದ ಕೇಂದ್ರ ಕಾರಾಗೃಹದ ವಾರ್ಡನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಲಾರಿ ➤➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.05. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಡೆದಿದೆ. ಮೃತರನ್ನು ಮಂಗಳೂರಿನ ಕದ್ರಿ ನಿವಾಸಿ ಸಂದೇಶ್ (27)ಎಂದು ಗುರುತಿಸಲಾಗಿದೆ. ಸಂದೇಶ್ ತನ್ನ ಬೈಕ್‌ನಲ್ಲಿ ಬಜ್ಪೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ಹರಿದಿದ್ದು,

ಕಾರು- ಬೈಕ್ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಲಾರಿ ➤➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಕ್ಟಿವಾ ಹಾಗೂ ಬೈಕ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 05. ರಸ್ತೆಯಲ್ಲಿರುವ ಗುಂಡಿ ತಪ್ಪಿಸಲು ಹೋಗಿ ಆಕ್ಟಿವಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ ಎನ್ನಲಾಗಿದೆ.

ಪುತ್ತೂರು: ಆಕ್ಟಿವಾ ಹಾಗೂ ಬೈಕ್ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಕ್ಟರ್ ಚಕ್ರದಡಿ ಸಿಲುಕಿ ತಾಯಿ- ಮಗು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ನ. 04. ಟ್ರ್ಯಾಕ್ಟರ್ ನಡಿಗೆ ಸಿಲುಕಿ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಮನ್ಸಲಾಪುರ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಹಾರಾಷ್ಟ್ರ ಮೂಲದ ಕಾರ್ಮಿಕ ಮಹಿಳೆ ವೈಶಾಲಿ(26) ಹಾಗೂ ಸಮರ್ಥ(3) ಎಂದು ಗುರುತಿಸಲಾಗಿದೆ. ಹತ್ತಿ ತುಂಬಿದ್ದ ಟ್ರಾಕ್ಟರ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಗು ಟ್ರಾಕ್ಟರ್ ನಡಿಗೆ ಸಿಲುಕುವ ಭಯದಿಂದ ರಕ್ಷಣೆಗೆ ಮುಂದಾದ ತಾಯಿಯು ಮಗುವಿನ ಜೊತೆಗೆ ಟ್ರಾಕ್ಟರ್ ನಡಿಗೆ ಸಿಲುಕಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ

ಟ್ರಾಕ್ಟರ್ ಚಕ್ರದಡಿ ಸಿಲುಕಿ ತಾಯಿ- ಮಗು ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top