ಬಂಟ್ವಾಳ: ಬೈಕ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು
(ನ್ಯೂಸ್ ಕಡಬ) Newskadaba.com ಬಂಟ್ವಾಳ, ನ. 01. ಕಂಟೈನರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇರಾ ಪಂಜಾಜೆ ನಿವಾಸಿ ತಿಲಕ್(29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಿಲಕ್ ರವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಬೈಕ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್




