ಕ್ರೈಮ್ ನ್ಯೂಸ್

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.23. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ […]

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಮಾರಧಾರ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ➤ ಸ್ನಾನಕ್ಕೆಂದು ತೆರಳಿದ್ದ ವೇಳೆ ನಡೆದಿದ್ದ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ‌ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮೃತದೇಹವು ಪರಂಗಾಜೆ ಸಮೀಪ ದೊರೆತಿದೆ.      

ಕುಮಾರಧಾರ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ➤ ಸ್ನಾನಕ್ಕೆಂದು ತೆರಳಿದ್ದ ವೇಳೆ ನಡೆದಿದ್ದ ಘಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸ್ನಾನಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ ➤ ನದಿಯಲ್ಲಿ ಮುಳುಗಿರುವ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ಕೊಯಿಲದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ‌ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪದ ಹೊಳೆ ಬದಿ‌ ಸ್ನಾನಕ್ಕೆಂದು ಹೋದವರು ಕಾಣೆಯಾಗಿರುವುದಾಗಿ ಕಡಬ ಠಾಣೆಗೆ ದೂರು ನೀಡಲಾಗಿದೆ.      

ಕಡಬ: ಸ್ನಾನಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ ➤ ನದಿಯಲ್ಲಿ ಮುಳುಗಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಕಡಬದಲ್ಲಿ ಸರಣಿ ಅಪಘಾತ ➤ ಸ್ವಿಫ್ಟ್ ಡಿಸೈರ್, ಎರ್ಟಿಗಾ, ಗೋಕರ್ಣ ಬಸ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಸೆ.21. ಸ್ವಿಫ್ಟ್ ಡಿಸೈರ್, ಎರ್ಟಿಗಾ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬದ ಹಿಂದುಸ್ತಾನ್ ಪೆಟ್ರೋಲ್ ಬಂಕ್‌ ಮುಂಭಾಗದಲ್ಲಿ ಮಂಗಳವಾರದಂದು ಸಂಭವಿಸಿದೆ. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ ಸ್ವಿಫ್ಟ್ ಡಿಸೈರ್ ಕಾರನ್ನು ಅದರ ಚಾಲಕ ಡೀಸೆಲ್ ತುಂಬಿಸಲೆಂದು ಪೆಟ್ರೋಲ್ ಬಂಕ್ ಗೆ ಏಕಾಏಕಿ ತಿರುಗಿಸಿದ ವೇಳೆ ಹಿಂದಿನಿಂದ ಬರುತ್ತಿದ್ದ ಎರ್ಟಿಗಾ ನಡುವೆ

ಬೆಳ್ಳಂಬೆಳಗ್ಗೆ ಕಡಬದಲ್ಲಿ ಸರಣಿ ಅಪಘಾತ ➤ ಸ್ವಿಫ್ಟ್ ಡಿಸೈರ್, ಎರ್ಟಿಗಾ, ಗೋಕರ್ಣ ಬಸ್ ನಡುವೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ತಾಮ್ರದ ಪಾತ್ರೆ ಹೊಳಪು ಮಾಡುವ ನೆಪದಲ್ಲಿ ವಂಚನೆ ➤ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಲು ಕಡಬ ಎಸ್ಐ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ತಾಮ್ರದ ಪಾತ್ರೆಯನ್ನು ಹೊಳಪು ಮಾಡಿ ಕೊಡುತ್ತೇನೆಂದು ಸಾರ್ವಜನಿಕರನ್ನು ವಂಚಿಸುತ್ತಿರುವ ಘಟನೆ ಕಡಬದಿಂದ ವರದಿಯಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಕೋಡಿಂಬಾಳ ಪರಿಸರದಲ್ಲಿ ತಾಮ್ರದ ಪಾತ್ರೆಗಳನ್ನು ಹೊಳಪು ಮಾಡಿಕೊಡುತ್ತೇನೆಂದು ಮನೆಮನೆಗೆ ತೆರಳುತ್ತಿರುವ ಮಾಹಿತಿ ಬಂದಿದ್ದು, ಸದ್ರಿ ವ್ಯಕ್ತಿ ಕಾಣ ಸಿಕ್ಕಿದಲ್ಲಿ ಕೂಡಲೇ ಕಡಬ ಠಾಣೆಗೆ ಮಾಹಿತಿ ನೀಡುವಂತೆ ಎಸ್ಐ ರುಕ್ಮನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.      

ಕಡಬ: ತಾಮ್ರದ ಪಾತ್ರೆ ಹೊಳಪು ಮಾಡುವ ನೆಪದಲ್ಲಿ ವಂಚನೆ ➤ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಲು ಕಡಬ ಎಸ್ಐ ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವ ವೇಳೆ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ➤ ಎರಡು ತಿಂಗಳಿನಿಂದ ನಿರಂತರ ಅತ್ಯಾಚಾರ, ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.15. ಬಾಲಕಿಯೊಬ್ಬಳು ಬಟ್ಟೆ ಬದಲಾಯಿಸುವುದನ್ನು ವಿಡಿಯೋ ಚಿತ್ರೀಕರಣ ಮಾಡಿ, ಆ ಬಳಿಕ ಆಕೆಯನ್ನು ಬೆದರಿಸಿ, ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಕರೆದಾಗ ಬಾರದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿ, ಎರಡು ತಿಂಗಳಿಂದ ಅತ್ಯಾಚಾರ ನಡೆಸಿದ್ದು, ಮುಖ್ಯ ಆರೋಪಿ ಅನಿಲ್ ನಾಯ್ಕ್ ನ ಜತೆ ಗ್ರಾಮದ ಕಾರ್ತಿಕ್ ಎಂಬುವವನಿದ್ದ ಎನ್ನಲಾಗಿದೆ. ಗಣಪತಿ

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವ ವೇಳೆ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ➤ ಎರಡು ತಿಂಗಳಿನಿಂದ ನಿರಂತರ ಅತ್ಯಾಚಾರ, ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಪ್ರಕರಣ ➤ ಕೊನೆಗೂ ಮೂವರು ಆರೋಪಿಗಳು ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.14. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯೊಂದರಿಂದ ಲಕ್ಷಾಂತರ ರೂ. ಮೌಲ್ಯದ ರಬ್ಬರ್‌ಶೀಟ್ ಕಳವುಗೈದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ತೋಮಸ್ ಯಾನೆ ರಿಜು(33), ಶಿರಾಡಿ ಗ್ರಾಮದ ಎಡಪ್ಪಾಟ್ ನಿವಾಸಿ ಇ.ಪಿ. ವರ್ಗೀಸ್(48) ಹಾಗೂ ಶಿರಾಡಿ ಗ್ರಾಮದ ಪೇರಮಜಲು ನಿವಾಸಿ ಶೀನಪ್ಪ(46) ಎಂದು ಗುರುತಿಸಲಾಗಿದೆ. ಉಜಿರೆಯಿಂದ ತಮಿಳುನಾಡಿಗೆ ರಬ್ಬರ್ ಶೀಟ್ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಜು.25ರಂದು ಅದರ ಚಾಲಕ

ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಪ್ರಕರಣ ➤ ಕೊನೆಗೂ ಮೂವರು ಆರೋಪಿಗಳು ಪೊಲೀಸ್ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ಮೂವರು ಮಹಿಳೆಯರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.14. ಗ್ರಾಹಕರ ಸೋಗಿನಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಮಳಿಗೆಗೆ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ ಹಾಗೂ ಜೈತುಂಬಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸೆ.1ರಂದು ಜೋಸ್ ಆಲುಕ್ಕಾಸ್‌ಗೆ ಬಂದು ಚಿನ್ನವನ್ನು ಖರೀದಿಸಿದ್ದರು. ಇದೇ ಸಂದರ್ಭದಲ್ಲಿ 2,60,400 ರೂ. ಮೌಲ್ಯದ ಕಿವಿಯ ಚಿನ್ನಾಭರಣವನ್ನು ವಂಚಿಸಿ ಕಳವು ಮಾಡಿಕೊಂಡು

ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ಮೂವರು ಮಹಿಳೆಯರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12. ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ಕಳವಿಗೆ ಯತ್ನಿಸಿದ ಘಟನೆ ಬೆಂದೂರ್ವೆಲ್ ಸೈಂಟ್ ಆಗ್ನೇಸ್ ಕಾಲೇಜಿನ ಮುಂಭಾಗದಲ್ಲಿ ಭಾನುವಾರದಂದು ನಡೆದಿದೆ. ಮಹಿಳೆಯೊಬ್ಬರು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ರಿಟ್ಝ್ ಕಾರಿನಲ್ಲಿ ಬಂದ ಯುವಕರ ತಂಡದಲ್ಲಿದ್ದ ಓರ್ವ ಕಾರಿನಿಂದ ಇಳಿದು ಮಹಿಳೆಯ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು ಕೂಗಿಕೊಂಡಿದ್ದಾರೆ. ಆ ವೇಳೆ ಅಲ್ಲಿದ್ದ ಸಾರ್ವಜನಿಕರು

ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ ➤ 24 ಗಂಟೆಗಳ ಒಳಗೆ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.12. ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿರುವ ಗಣಪತಿ ಕಟ್ಟೆಯನ್ನು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ಸುಬೀಂದರ್ ಎಂಬವರ ಪುತ್ರ ರವೀಂದ್ರ ಕುಮಾರ್ (25) ಎಂದು ಗುರುತಿಸಲಾಗಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು

ನೆಲ್ಯಾಡಿ: ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ ➤ 24 ಗಂಟೆಗಳ ಒಳಗೆ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top