ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಗದಗ, ನ. 06.  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ […]

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ನ. 06.  ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು

ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 06. ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಮೃತರನ್ನು ರಟಕಲ್ ಗ್ರಾಮ ಕಲಬುರಗಿಯ ಜನತಾ ಲೇಔಟ್ ನಿವಾಸಿ ಮುರಗೇಶ್ ಚಂದ್ರಶೇಖರ ಉಪ್ಪಿನ್ (42) ಹಾಗೂ ಶಹಾಬಾದ್ ನಿವಾಸಿ ಧೂಳಮ್ಮ ಯಮುನಪ್ಪ (60) ಎಂದು ಗುರುತಿಸಲಾಗಿದೆ. ಮರುಗೇಶ್ ಕಲಬುರಗಿಯ ಎಚ್‌ಡಿಎಫ್‌ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಕಾರಿನಲ್ಲಿ ಮುರುಗೇಶ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ಶಾರದಾ ಸಿನ್ಹಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 06. ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ(72) ಅವರು ಕ್ಯಾನ್ಸರ್ ನಿಂದ ಮಂಗಳವಾರ ರಾತ್ರಿ ನಿಧನರಾದರು. ಖ್ಯಾತ ಗಾಯಕಿಯನ್ನು ದೆಹಲಿಯ ಏಮ್ಸ್‌ ಗೆ ದಾಖಲಿಸಲಾಗಿತ್ತು ಮತ್ತು ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ, ಅವರಿಗೆ ಮಲ್ಟಿಪಲ್ ಮೈಲೋಮಾ ರೋಗ ಖಾತರಿಯಾಗಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಚಿಕಿತ್ಸೆಗಾಗಿ ಶ್ರೀಮತಿ ಸಿನ್ಹಾ

ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ಶಾರದಾ ಸಿನ್ಹಾ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06. ಬಿಕರ್ನಕಟ್ಟೆಯಲ್ಲಿ ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯವಾದ ಘಟನೆ ನಡೆದಿದೆ. ಎರಡು ಬಸ್‌ಗಳ ನಡುವಿನ ಅತಿಯಾದ ವೇಗ ಮತ್ತು ತೀವ್ರ ಪೈಪೋಟಿಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಟಿ ಬಸ್‌ಗಳು ಆಗಾಗ್ಗೆ ಅಜಾಗರೂಕ ರೇಸ್‌ಗಳಲ್ಲಿ ತೊಡಗುತ್ತವೆ ಎಂದು ಆರೋಪಿಸಲಾಗಿದೆ, ಕಂಕನಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು ಎನ್ನಲಾಗಿದೆ.  

ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 05.   ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ ಕಾರಣಕ್ಕೆ, ಮರಳು ದಂಧೆಯ ಆರೋಪಿ ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರಿಗೆ ರಾಡ್‌ ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೋಮೇಶ್ವರ ಪುರಸಭೆ ಕಚೇರಿ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.\ ಸೋಮೇಶ್ವರ ಉಚ್ಚಿಲದ,ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಮ್ ಉಚ್ಚಿಲ(53)ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ

ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!

(ನ್ಯೂಸ್ ಕಡಬ) newskadaba.com ನ. 05. ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದ ಸಂದರ್ಭ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ನ. 05. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ- ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.  

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 05. ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಕುರಿತು ಗುಜರಾತ್ ನ ಅಮ್ರೇಲಿ ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಘಟನೆ ನಡೆದಿದೆ.   ಘಟನೆಯಲ್ಲಿ ಮಧ್ಯಪ್ರದೇಶದ ಧಾರ್ನ ಕಾರ್ಮಿಕ ದಂಪತಿಯ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ತಿಳಿಸಿದ್ದಾರೆ. ಕಾರ್ಮಿಕ ದಂಪತಿ ತಮ್ಮ ಮಕ್ಕಳನ್ನು ಬಿಟ್ಟು ಭರತ್ ಮಂದಾನಿ ಎಂಬವರ ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ವರು ಮಕ್ಕಳು ಅಲ್ಲೇ ನಿಲ್ಲಿಸಿದ್ದ ಜಮೀನಿನ ಮಾಲಕನ ಕಾರಿನಲ್ಲಿ ಹತ್ತಿ

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 05. ಬೆಳಗಾವಿಯ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ.  

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top