ಕ್ರೈಮ್ ನ್ಯೂಸ್

crime, arrest, suspected

ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಅಕ್ರಮವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಅರಣ್ಯ ಸಂಚಾರ ಪೊಲೀಸ್ ದಳ ಇಲ್ಲಿನ ಆನಂದಪುರದ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಎಂದು ಗುರುತಿಸಲಾಗಿದೆ. ಆತನಿಂದ ಚಿರತೆಯ 16 ಉಗುರು, 3 ಹಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಅರಣ್ಯ ಸಂಚಾರ ಪೊಲೀಸ್ ದಳದವರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ […]

ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ನ. 05. ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂನಿಯರ್ ಭೋಗೇಶ್ವರ ಖ್ಯಾತಿಯ ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ನ. 05. ಜೂನಿಯರ್ ಬೋಗೇಶ್ವರ ಎಂದು ಖ್ಯಾತಿ ಪಡೆದಿದ್ದ, ಉದ್ದದ ಕೊಂಬು ಹೊಂದಿರುವ ಕಾಡಾನೆ ಸ್ವಾಭಾವಿಕವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಕಾಡಾನೆ ಮೃತ ಸ್ಥಳಕ್ಕೆ ಬಿಳಿಗಿರಿಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿ ಶ್ರೀಪತಿ, ಸಹಾಯಕ ಅರಣ್ಯಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ , ಮಾಜಿ ರಾಜ್ಯ ಅರಣ್ಯ ಮಂಡಲಿ ಸದಸ್ಯ ಮಲ್ಲೇಶಪ್ಪ, ವಲಯ ಅರಣ್ಯಾಧಿಕಾರಿ ನಾಗೇಂದ್ರ ನಾಯಕ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪಶು ವೈದ್ಯಾಧಿಕಾರಿ ಡಾ.

ಜೂನಿಯರ್ ಭೋಗೇಶ್ವರ ಖ್ಯಾತಿಯ ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 04. ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿಯಾಟ ಮಹೋತ್ಸವದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತಪಟ್ಟವರನ್ನು ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು (37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19), ಕಿನಾವೂರಿನ ಸಂದೀಪ್ (38) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರ ರಾತ್ರಿ ಘಟನೆ ನಡೆದಿದ್ದು, ಸ್ಫೋಟದಲ್ಲಿ 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿ ಗಂಭೀರ ಸುಟ್ಟ

ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 02. ಹಾಲುಮಡ್ಡಿ ಮರವೊಂದು ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿರುವ ಸ್ಥಳೀಯರು ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ದೂಪದ ಮರ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಾಯಕಾರಿ ಮರಗಳನ್ನು ಸಂಪೂರ್ಣ

ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 02. ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ನ. 02. ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡ್ ಬಳಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ (25) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿಂದ ತೊಕ್ಕೊಟ್ಟುವಿನಲ್ಲಿ ಪುಡ್ ಕಾರ್ನರ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಕಾಪಿಕಾಡ್ ನಲ್ಲಿ ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತಿಂಗಳ ಹಿಂದೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸರಗೊಂಡ ಪತ್ನಿ ಪತಿಯನ್ನು ಬಿಟ್ಟು ಕುವೈತ್ ಗೆ ಹೋಗಿದ್ದರು.‌

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top