ಕ್ರೈಮ್ ನ್ಯೂಸ್

ಕೊರೋನಾ ಸೋಂಕಿಗೆ ಕಡಬ ತಾಲೂಕಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕೊರೋನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ಮತ್ತೋರ್ವರು ಮೃತಪಟ್ಟಿದ್ದು, ಈ ಮೂಲಕ ಐದನೇ ಜೀವ ಬಲಿಯಾದಂತಾಗಿದೆ. ಕಡಬ ತಾಲೂಕಿನ ಮರ್ಧಾಳ ಸಮೀಪದ ಐತ್ತೂರು ಗ್ರಾಮದ ಕೇನ್ಯ ನಿವಾಸಿ 53 ವರ್ಷದ ವ್ಯಕ್ತಿಯೋರ್ವರು ಇಂದು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌. ಮೃತದೇಹದ ಅಂತ್ಯಸಂಸ್ಕಾರವನ್ನು ಸೇವಾಭಾರತಿಯ ವತಿಯಿಂದ ಪುತ್ತೂರಿನಲ್ಲಿ ನಡೆಸಲಾಯಿತು.      

ಕೊರೋನಾ ಸೋಂಕಿಗೆ ಕಡಬ ತಾಲೂಕಿನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ತಮ್ಮನಿಂದ ಅಣ್ಣನಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಕಡಬ, ಮೇ.14. ಸಹೋದರರ ನಡುವೆ ಜಗಳ ನಡೆದು ಅಣ್ಣನಿಗೆ ತಮ್ಮ ಕತ್ತಿಯಿಂದ ಕಡಿದುಕೊಂಡ ಘಟನೆ ತಾಲೂಕಿನ ಮೂಜೂರು ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ಸಮೀಪದ ಮುಂಡಡ್ಕ ನಿವಾಸಿ ಧ್ರುವ ಕುಮಾರ್(35) ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ಇಂದು ಸಂಜೆ ಜಗಳವುಂಟಾಗಿ ತಮ್ಮ ಪ್ರೀತಮ್ ಎಂಬಾತ ಅಣ್ಣನಿಗೆ ಕತ್ತಿಯಿಂದ ಕಡಿದಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ ಅಣ್ಣನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ

ಕಡಬ: ತಮ್ಮನಿಂದ ಅಣ್ಣನಿಗೆ ಚೂರಿ ಇರಿತ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಹದಿನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಕಲೇಶಪುರ ನಿವಾಸಿ ಶೇಖರ್ ಯಾನೆ ಶೇಷಪ್ಪ ಕಂಡಿಗ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ತನ್ನ ಸಂಬಂಧಿ ಬಾಲಕಿಯನ್ನು ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ನೀಡಿದ ದೂರಿನಂತೆ

ಕಡಬ: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಬಂದೂಕು ತಯಾರಿಸಿ ಮಾರಾಟ ➤ ನೆಟ್ಟಣ ನಿವಾಸಿ ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.11. ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಸುಬ್ರಹ್ಮಣ್ಯ ಪೊಲೀಸರು ನಾಲ್ಕು ಬಂದೂಕುಗಳು ಹಾಗೂ ಸಜೀವ ಗುಂಡೊಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಛತ್ರಪ್ಪಾಡಿ ದಿವಾಕರ ಆಚಾರಿ (52), ಕಡಬ ತಾಲೂಕಿನ ನೂಚಿಲ ನಿವಾಸಿ ಕಾರ್ತಿಕ್ (25), ಕಡಬದ ನೆಟ್ಟಣ ಸಮೀಪದ ಚಿದ್ಗಲ್ ನಿವಾಸಿ ಅಶೋಕ್ (35), ಹಾಸನ ಜಿಲ್ಲೆಯ ಹನುಮಂತಪುರದ ಚಂದನ್ (32) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ

ಸುಬ್ರಹ್ಮಣ್ಯ: ಅಕ್ರಮ ಬಂದೂಕು ತಯಾರಿಸಿ ಮಾರಾಟ ➤ ನೆಟ್ಟಣ ನಿವಾಸಿ ಸೇರಿದಂತೆ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.10. ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೋರ್ವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್‌ ಎಂಬವರ ಪತ್ನಿ ಪೂಜಿತಾ ಎಂದು ಗುರುತಿಸಲಾಗಿದೆ. ಹೆರಿಗೆಗೆಂದು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಪೂಜಿತಾರವರು ಭಾನುವಾರದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಮಧ್ಯಾಹ್ನ ವೇಳೆಗೆ ತೀವ್ರ ರಕ್ತಸ್ರಾವ ಉಂಟಾದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ

ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಹದಿನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದುದರಿಂದ ಬಾಲಕಿ ಗರ್ಭಿಣಿಯಾದ ಘಟನೆ ಕಡಬದಿಂದ ವರದಿಯಾಗಿದೆ. ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ಬಾಲಕಿಯನ್ನು ಆಕೆಯ ಸಂಬಂಧಿಕ ಸಕಲೇಶಪುರ ನಿವಾಸಿ ಶೇಖರ್ ಎಂಬಾತ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ಕಡಬ ಠಾಣೆಗೆ ದೂರು ನೀಡಿದ್ದು, ಕಡಬ ಠಾಣೆಯಲ್ಲಿ ಆರೋಪಿಯ

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ➤ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.09. ಅರಣ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ನಾಲ್ವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲಮೊಗ್ರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ ಎಂಬವರು ಮೇ 04 ರಂದು ಇಲಾಖೆಯ ವಾಹನದಲ್ಲಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಇಲಾಖಾ ಜೀಪನ್ನು ಬೈಕೊಂದು ಹಿಂಬಾಲಿಸಿ ಬರುತ್ತಿರುವುದನ್ನು ಕಂಡು ಕೊಲ್ಲಮೊಗ್ರು ಗ್ರಾಮದ ನಿಲ್ಕೂರು ಎಂಬಲ್ಲಿ ರಸ್ತೆ ಬದಿ ಜೀಪನ್ನು ನಿಲ್ಲಿಸಿದಾಗ ಹಿಂಬಾಲಿಸಿಕೊಂಡು ಬರುತ್ತಿದ್ದ ಬೈಕ್ ಅಲ್ಲಿಂದಲೇ

ಸುಬ್ರಹ್ಮಣ್ಯ: ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ➤ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.08. ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರಗೈದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುತ್ತಿಗಾರು ಮೆಟ್ಟಿನಡ್ಕ ನಿವಾಸಿ ಅರುಣ್ ಗೌಡ(22) ಎಂದು ಗುರುತಿಸಲಾಗಿದೆ. ಆರೋಪಿಯು ಕಳೆದೊಂದು ವರ್ಷದಿಂದ 17 ರ ಹರೆಯದ ಯುವತಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿನ ಲಾಡ್ಜ್ ವೊಂದರಲ್ಲಿ ನಿರಂತರ ಅತ್ಯಾಚಾರ ಎಸಗಿದ್ದು, ಯುವತಿಯ ಹೊಟ್ಟೆಯನ್ನು ಗಮನಿಸಿದ ಆಕೆಯ ತಾಯಿಯು ಸಂಶಯಗೊಂಡು ಸುಬ್ರಹ್ಮಣ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ

ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಳವಿಗೆ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮೇ.01. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಪ್ಪಿನಂಗಡಿ ಶಾಖೆಯ ಎಟಿಎಂ ಕಳವಿಗೆ ಯತ್ನಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕು ಸವಣೂರು ಗ್ರಾಮದ ಮಾಂತೂರು ನಿವಾಸಿ ಮಹಮ್ಮದ್ ಎಂಬವರ ಪುತ್ರ ಸಮೀರ್ ಯಾನೆ ಅಮ್ಮಿ(23) ಎಂದು ಗುರುತಿಸಲಾಗಿದೆ. ಆರೋಪಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಪ್ಪಿನಂಗಡಿ ಶಾಖೆಯ ಎಟಿಎಂ ಗೆ ನುಗ್ಗಿ ಸಿಸಿ ಕ್ಯಾಮೆರಾ ಸೇರಿದಂತೆ ಎರಡು ಎಟಿಎಂ ಮೆಷಿನ್ ಗಳನ್ನು ಹಾನಿಗೊಳಿಸಿದ ಘಟನೆಯು ಎಪ್ರಿಲ್ 28

ಉಪ್ಪಿನಂಗಡಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಳವಿಗೆ ಯತ್ನ ➤ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಮೇ. 01. ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ್ಯ ನಿವಾಸಿಗಳಾದ ಇಮ್ರಾನ್ ಹಾಗೂ ಸಫ್ವಾನ್ ಎಂದು ಗುರುತಿಸಲಾಗಿದೆ. ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ. 04ರಂದು ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ದೂರು

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top