ಕ್ರೈಮ್ ನ್ಯೂಸ್

crime, arrest, suspected

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 31.  ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ. ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ.    

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಅ. 31. ವಕ್ಫ್ ವಿವಾದದ ವಿಚಾರವಾಗಿ ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ನಡೆದಿದೆ. ಉದ್ರಿಕ್ತರ ಗುಂಪೊಂದು ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ. ಘಟನೆಯ ಕುರಿತು ಮಾತನಾಡಿದ ಹಾವೇರಿ ಎಸ್ಪಿ ಅಂಶು ಕುಮಾರ್, 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಉದ್ರಿಕ್ತರು ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು

ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31. ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್ ಕಡಲ ತೀರದಲ್ಲಿ ಬುಧವಾರ ಸಂಜೆ ಸುಮಾರು ಮೂರು ಜಾನುವಾರುಗಳ ಕಳೆಬರ ಪತ್ತೆಯಾಗಿದ್ದು, ಅಕ್ರಮ ಗೋಹತ್ಯೆ ಶಂಕೆ ವ್ಯಕ್ತವಾಗಿದೆ. ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೆಬರ ಪತ್ತೆಯಾಗಿದ್ದು, ಕಡಲ ತೀರದ ವಿವಿಧೆಡೆ ಜಾನುವಾರು ರುಂಡ ಪತ್ತೆಯಾಗಿದೆ. ಅಕ್ರಮವಾಗಿ ಗೋವುಗಳನ್ನು ಹತ್ಯೆ ಮಾಡಿ ಅದರ ಕಳೆಬರಗಳನ್ನು ಕಡಲಿಗೆ ಎಸೆದು ವಿಕೃತಿ ಮೆರೆಯುತ್ತಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರೂ ಈವರೆಗೆ ಯಾವುದೇ

3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರರ ನಡುವೆ ಗಲಾಟೆ ಮೀನುಗಾರರನ್ನು ಕೊಂದು ಬೋಟ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!

(ನ್ಯೂಸ್ ಕಡಬ) newskadaba.com ಅ. 31. ಎರಡು ತಂಡದ ಮೀನುಗಾರರ ನಡುವೆ ವಾಗ್ವಾದ ನಡೆದು ಸಿಟ್ಟಿಗೆದ್ದ ಒಂದು ಬೋಟಿನ ಮೀನುಗಾರರು ಇನ್ನೊಂದು ಬೋಟಿನ ಮೀನುಗಾರರನ್ನು ಕೊಂದು ಆ ಬೋಟಿಗೆ ಬೆಂಕಿ ಹಚ್ಚಿರುವಂತಹ ಅಘಾತಕಾರಿ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ದೇವಗಢದ ಕುಂಕೇಶ್ವರ ಬಳಿಯ ಸಮುದ್ರದಲ್ಲಿ ನಡೆದಿದೆ. ಮೀನುಗಾರರ ನಡುವೆ ವಾಗ್ವಾದ ನಡೆದ ಬಳಿಕ ಕೊಲೆ ನಡೆದಿದೆ ಎನ್ನಲಾಗಿದೆ. ಮೃತರನ್ನು ತಾಂಡೇಲ್ ರವೀಂದ್ರ ನಾಟೇಕರ್ ಎಂದು ಗುರುತಿಸಲಾಗಿದೆ. ಹತ್ತಿರದ ದೋಣಿಗಳು ಮೀನುಗಾರನನ್ನು ಉಳಿಸಲು ಪ್ರಯತ್ನಿಸಿದವು. ಆದರೂ ಏನು ಪ್ರಯೋಜನ ಆಗಲಿಲ್ಲ.

ಮೀನುಗಾರರ ನಡುವೆ ಗಲಾಟೆ ಮೀನುಗಾರರನ್ನು ಕೊಂದು ಬೋಟ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಅ. 30. ಬುಲೆಟ್ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದೇವನಹಳ್ಳಿ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಏರ್‌ಪೋರ್ಟ್‌ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಯುವಕನನ್ನು ಚಿಕ್ಕಬಳ್ಳಾಪುರ ನಗರದ ರಾಹುಲ್ (18)ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್‌ ಟಚ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್‌ಪೋರ್ಟ್‌ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈತಡ್ಕ: ಟ್ಯಾಂಕರ್ ಪಲ್ಟಿ- ಡೀಸೆಲ್ ಸೋರಿಕೆ

(ನ್ಯೂಸ್ ಕಡಬ) newskadaba.com ಅ.30. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಒಂದು ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಬುಧವಾರದಂದು ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆಯಿಂದ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಬೈತಡ್ಕ: ಟ್ಯಾಂಕರ್ ಪಲ್ಟಿ- ಡೀಸೆಲ್ ಸೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ ಸಂದೇಶ

(ನ್ಯೂಸ್ ಕಡಬ)newskadaba.com ಮುಂಬೈ, ಅ. 30. ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ. ಮೇಲಿಂದ ಮೇಲೆ ನಟ ಸಲ್ಮಾನ್ ಖಾನ್ ಜೀವ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಜೀವ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ತಾವು ಕೇಳಿದಷ್ಟು ಹಣ ನೀಡದೆ ಇದ್ದರೆ ಹತ್ಯೆ ಮಾಡುವುದಾಗಿ ಸಂದೇಶ ರವಾನಿಸಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ ಸಂದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಜ್ವರದಿಂದ ಮಹಿಳೆ ಮೃತ್ಯು- ಡೆಂಗ್ಯೂ ಶಂಕೆ..!

(ನ್ಯೂಸ್ ಕಡಬ) newskadaba.com ಅ. 30. ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮೃತಪಟ್ಟಿದ್ದು, ಇವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.   ಮೃತಪಟ್ಟವರನ್ನು ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಲೀಲಾವತಿ ಅವರಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಉದನೆಯ ಕ್ಲಿನಿಕ್‍ ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಜ್ವರ ಹಿನ್ನೆಲೆ ಅ.25ರಂದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು,

ಜ್ವರದಿಂದ ಮಹಿಳೆ ಮೃತ್ಯು- ಡೆಂಗ್ಯೂ ಶಂಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top