ಕ್ರೈಮ್ ನ್ಯೂಸ್

ಉಳ್ಳಾಲ: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ- ರಿಕ್ಷಾ ಚಾಲಕ ಮೃತ್ಯು ➤ ವಿಟ್ಲ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಟೋ ಚಾಲಕನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 27. ರಿಕ್ಷಾ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಸಂಭವಿಸಿದೆ. ಮೃತಪಟ್ಟವರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ. ಇವರು ಶನಿವಾರ ಬೆಳಗ್ಗೆ ಮನೆ ಸಮೀಪದಿಂದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಹಿಂತಿರುಗುತ್ತಿದ್ದ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರು ರಿಕ್ಷಾದ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಘಟನೆಯ ರಭಸಕ್ಕೆ […]

ಉಳ್ಳಾಲ: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ- ರಿಕ್ಷಾ ಚಾಲಕ ಮೃತ್ಯು ➤ ವಿಟ್ಲ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಟೋ ಚಾಲಕನ ದಾರುಣ ಅಂತ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೆಕ್ಸ್ ಸಿಡಿ ಪ್ರಕರಣ ಹಿನ್ನೆಲೆ ➤ ಕೊನೆಗೂ ಜಾರಕಿಹೊಳಿ ವಿರುದ್ದ FIR ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 26. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೊನೆಗೂ ಪ್ರಕರಣ ದಾಖಲಾಗಿದೆ. ಶುಕ್ರವಾರ ಬೆಳಗ್ಗೆ ವಿಡಿಯೋ ಬಿಡುಗಡೆಗೊಳಿಸಿದ್ದ ಸಿಡಿ ಲೇಡಿ, ತಾನಿಂದು ವಕೀಲ ಜಗದೀಶ್ ಗೌಡ ಮೂಲಕ ದೂರು ದಾಖಲಿಸಲಿದ್ದೇನೆ ಎಂದು ಹೇಳಿದ್ದಳು. ಅದರಂತೆ ವಕೀಲ ಜಗದಿಶ್ ಗೌಡ ಅವರು ಕಮಿಷನರ್ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದರು. ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 376C, 354A, 504, 417, 67A ಐಟಿ ಅಡಿಯಲ್ಲಿ

ಸೆಕ್ಸ್ ಸಿಡಿ ಪ್ರಕರಣ ಹಿನ್ನೆಲೆ ➤ ಕೊನೆಗೂ ಜಾರಕಿಹೊಳಿ ವಿರುದ್ದ FIR ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

? ಸಾಲಬಾಧೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಮಾ. 26.‌ ಸಾಲದ ಬಾಧೆಗೆ ತುತ್ತಾಗಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ಘಟನೆ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್(40), ಪತ್ನಿ ಪದ್ಮ (35) ಮತ್ತು ಇಬ್ಬರು ಮಕ್ಕಳಾದ ಸೌಮ್ಯ ಹಾಗೂ ಅಕ್ಷಯ್‌ ಎಂದು ಗುರುತಿಸಲಾಗಿದೆ. ಇಡೀ ಕುಟುಂಬವು ಸಾಲಬಾಧೆ ಹಿನ್ನೆಲೆ “ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ

? ಸಾಲಬಾಧೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಉಡುಪಿ: ಪೆಟ್ರೋಲ್ ಪಂಪ್ ಮಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 26. ಪೆಟ್ರೋಲ್ ಪಂಪ್ ಮಾಲಕರೋರ್ವರು ಕಟ್ಟಡದಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಮಠದಬೆಟ್ಟು ಎಂಬಲ್ಲಿ ಶುಕ್ರವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತಮ್ ನಾಯಕ್ (30) ಎಂದು ಗುರುತಿಸಲಾಗಿದೆ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರು, ಮಠದಬೆಟ್ಟುವಿನ ಫ್ಲಾಟ್‍ವೊಂದರ 3ನೇ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ತಂದೆ ಮತ್ತು ತಮ್ಮ ಮಾತ್ರ ಇದ್ದು, ಪತ್ನಿ ಮುಂಬೈನಲ್ಲಿದ್ದರು ಎನ್ನಲಾಗಿದೆ. ಇವರು ಇಂದು ನಾಲ್ಕನೇ ಮಹಡಿಯಿಂದ

? ಉಡುಪಿ: ಪೆಟ್ರೋಲ್ ಪಂಪ್ ಮಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಅಪಘಾತ ➤ ಆರೋಗ್ಯ ಕೇಂದ್ರಾಧಿಕಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 26. ಇಲ್ಲಿನ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ರಸ್ತೆ ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ.   ಮೃತರನ್ನು ಕನ್ಯಾಕುಮಾರಿ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಕರ್ತವ್ಯ ಮುಗಿಸಿ ಸ್ಕೂಟಿಯಲ್ಲಿ ಕಲಬುರಗಿಗೆ ಹೋಗುತ್ತಿದ್ದ ವೇಳೆ ಎತ್ತಿನ ಬಂಡಿಗೆ ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ

ದ್ವಿಚಕ್ರ ವಾಹನ ಅಪಘಾತ ➤ ಆರೋಗ್ಯ ಕೇಂದ್ರಾಧಿಕಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಆಟೋರಿಕ್ಷಾ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.26. ತಾಂತ್ರಿಕ ತೊಂದರೆಯಿಂದಾಗಿ ಆಟೋ ರಿಕ್ಷಾವೊಂದು ಪಟ್ಟಿಯಾದ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ನೆಲ್ಯಾಡಿಯ ಕೊಣಾಲು ಶಾಲೆಯ ಬಳಿಯಿಂದ ತೆರಳುತ್ತಿದ್ದ ಆಟೋರಿಕ್ಷಾದ ಚಕ್ರ ಜಾಮ್ ಆಗಿದ್ದು, ಈ ವೇಳೆ ರಿಕ್ಷಾ ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.    

ನೆಲ್ಯಾಡಿ: ಆಟೋರಿಕ್ಷಾ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಈಜಲೆಂದು ತೆರಳಿದ್ದ ವೇಳೆ ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 26. ಈಜಲು ಗೊತ್ತಿಲ್ಲದೇ ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮಯೂರಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ನಗರದ ಜಿ.ಹೆಚ್ ಕಾಲೇಜಿನ ಗುರುಕೃಪಾ ಈಜುಕೊಳಕ್ಕೆ ಸ್ನೇಹಿತರೊಂದಿಗೆ ಈಜಲೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಈಜಲೆಂದು ತೆರಳಿದ್ದ ವೇಳೆ ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ: ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಎಡಮಂಗಲ, ಮಾ. 26. ದಲಿತ ಮಹಿಳೆಯೋರ್ವರು ವಾಸಿಸುತ್ತಿದ್ದ ತಾತ್ಕಾಲಿಕ ಮನೆಯನ್ನು ಧ್ವಂಸ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾ. 03 ರಂದು ರವಿ ಶೆಟ್ಟಿ ಮತ್ತು ವಿದ್ಯಾ ಶೆಟ್ಟಿ ಹಾಗೂ ಮತ್ತಿಬ್ಬರು ಎಡಮಂಗಲ ಗ್ರಾಮದ ಕಜೆತ್ತಡ್ಕ ಎಂಬಲ್ಲಿ ಬಾಲಕಿ ಎಂಬವರು 20 ವರ್ಷಗಳಿಂದ ವಾಸಿಸುತ್ತಿದ್ದ ಮನೆಗೆ ಬಂದು ಅವಾಚ್ಯ

ಎಡಮಂಗಲ: ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೆಳ್ಳಂಬೆಳಗ್ಗೆ ಕರ್ತವ್ಯದಲ್ಲಿದ್ದ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 26. ಕರ್ತವ್ಯ ನಿರತರಾಗಿದ್ದ ವಿಟ್ಲ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲೆತ್ನಿಸಿದ ದುಷ್ಕರ್ಮಿಯನ್ನು ವಿಟ್ಲ ಪೋಲೀಸರು ಬಂಧಿಸಿದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ನಡೆದಿದೆ. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳು ವಾಹನಗಳನ್ನು ತಡೆದು, ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಯೊರ್ವ ಎಸ್ಐ

ವಿಟ್ಲ: ಬೆಳ್ಳಂಬೆಳಗ್ಗೆ ಕರ್ತವ್ಯದಲ್ಲಿದ್ದ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈತಡ್ಕ: ತೂಫಾನ್ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 25. ತೂಫಾನ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಾಣಿಯೂರು ಸಮೀಪದ ಬೈತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಈ ಘಟನೆಯಿಂದ ರಿಕ್ಷಾದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಬೈತಡ್ಕ: ತೂಫಾನ್ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top