ಕ್ರೈಮ್ ನ್ಯೂಸ್

? ರುಂಡ ಕತ್ತರಿಸಿ ಬಿಜೆಪಿ ಕಾರ್ಯಕರ್ತನ ಕೊಲೆ ➤ ಮೃತದೇಹದ ಮೇಲೆ ವಾಹನ ಚಲಾಯಿಸಿ ಅಪಘಾತವೆಂದು ಬಿಂಬಿಸಲು ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 22. ಕೆಲಸ‌ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನನ್ನು ರುಂಡ ಕತ್ತರಿಸಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಎಂಬಲ್ಲಿ ನಡೆದಿದೆ.   ಹತ್ಯೆಗೀಡಾದವರನ್ನು ಸಂಗನಗೌಡ ನಿಂಗನಗೌಡ ಪಾಟೀಲ (32 ವರ್ಷ) ಎಂದು ಗುರುತಿಸಲಾಗಿದೆ. ಈತ ದಿನನಿತ್ಯದಂತೆ ಕೆಲಸ‌ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಊರಿನ ಹೊರ ಭಾಗದಲ್ಲಿ ಮೂರು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಂಗನ ಗೌಡನ ರುಂಡ ಕತ್ತರಿಸಿ, ಬಳಿಕ ಮೃತದೇಹದ ಮೇಲೆ […]

? ರುಂಡ ಕತ್ತರಿಸಿ ಬಿಜೆಪಿ ಕಾರ್ಯಕರ್ತನ ಕೊಲೆ ➤ ಮೃತದೇಹದ ಮೇಲೆ ವಾಹನ ಚಲಾಯಿಸಿ ಅಪಘಾತವೆಂದು ಬಿಂಬಿಸಲು ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಸ್ಕಿಡ್ ಆಗಿ ಓರ್ವ ವಿದ್ಯಾರ್ಥಿ ಮೃತ್ಯು- ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 22. ಬೈಕ್ ಸ್ಕಿಡ್ ಆದ ಪರಿಣಾಮ ಕಾಲೇಜ್ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟು, ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಅವರ ಸ್ನೇಹಿತ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್ ಅವರು ಪುತ್ತೂರು ಪಿಜಿಯಲ್ಲಿದ್ದು ಭಾನುವಾರದಂದು ಮಾಣಿ ಸಾದಿಕುಕ್ಕು ಜಾತ್ರೆಗೆ

ಪುತ್ತೂರು: ಬೈಕ್ ಸ್ಕಿಡ್ ಆಗಿ ಓರ್ವ ವಿದ್ಯಾರ್ಥಿ ಮೃತ್ಯು- ಮತ್ತೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಭಾನುವಾರ ಸಂಜೆ ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ನಡೆದಿದೆ. ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ಸಿನಲ್ಲಿ ಯುವತಿಯ ಮೈ ಮುಟ್ಟಿದವನಿಗೆ ಬಿತ್ತು ಧರ್ಮದೇಟು ➤ ಸಾರ್ವಜನಿಕರ ಎದುರೇ ರುಬ್ಬಿದ ಯುವತಿ

(ನ್ಯೂಸ್ ಕಡಬ) newskadaba.com ಹಾಸನ, ಮಾ.21. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದಾತನಿಗೆ ಯುವತಿಯೋರ್ವಳು ಸಾರ್ವಜನಿಕವಾಗಿ ಹೊಡೆದಿರುವ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರಿನಿಂದ ಹಾಸಕ್ಕೆ ತೆರಳುತ್ತಿದ್ದ ಬಸ್​ ಹತ್ತಿದ್ದ ವ್ಯಕ್ರಿಯೋರ್ವ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬಸ್ ಹಾಸನ ನಿಲ್ದಾಣ ತಲುಪುತ್ತಿದ್ದಂತೆ ಯುವತಿಯು ವ್ಯಕ್ತಿಯ ಮೇಲೆ ಮುಗಿಬಿದ್ದಿದ್ದು, ಸಾರ್ವಜನಿಕವಾಗಿ ಚೆನ್ನಾಗಿ ಬಾರಿಸಿದ್ದಾಳೆ. ಬಳಿಕ ಸ್ಥಳದಲ್ಲಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ಹಿಡಿದು ಹಾಸನ ಪೊಲೀಸರಿಗೆ ಒಪ್ಪಿಸಿದ್ದಾರೆ.    

ಬಸ್ಸಿನಲ್ಲಿ ಯುವತಿಯ ಮೈ ಮುಟ್ಟಿದವನಿಗೆ ಬಿತ್ತು ಧರ್ಮದೇಟು ➤ ಸಾರ್ವಜನಿಕರ ಎದುರೇ ರುಬ್ಬಿದ ಯುವತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಜ್ಯೋತಿಷಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 20. ಜ್ಯೋತಿಷಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಪಂಡಿತ್ ಲಕ್ಷ್ಮೀಕಾಂತ್ ಭಟ್ ಎಂದು ಗುರುತಿಸಲಾಗಿದೆ. ಜ್ಯೋತಿಷಿಯ ಬಳಿ ಬಂದ ಇಬ್ಬರು ವ್ಯಕ್ತಿಗಳು ಯಾವುದೋ ದ್ವೇಷದಿಂದಾಗಿ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಮೂರ್ಛೆ ಹೋಗಿದ್ದ ಪಂಡಿತ್ ಅವರು ಸ್ವಲ್ಪ ಸಮಯದ ನಂತರ ಎಚ್ಚರಗೊಂಡು, ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಪಂಡಿತ್ ಅವರನ್ನು ಕಂಡ

ಬಂಟ್ವಾಳ: ಜ್ಯೋತಿಷಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಈ ಜೋಡಿ ಮಾಡಿದ್ದೇನು ಗೊತ್ತೇ..⁉️ ➤ ಅಲುಗಾಡುತ್ತಿದ್ದ ಕಾರಿನಲ್ಲಿ ನಡೆದಿದ್ದೇ ಬೇರೆ..‼️

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.14. ಹಾಡುಹಗಲೇ ಸಾರ್ವಜನಿಕವಾಗಿ ಮೈಮರೆತು ಸರಸದಲ್ಲಿ ತೊಡಗಿದ್ದ ಯುವ ಜೋಡಿಯನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಂಗಳೂರಿನ ಕಾಲೇಜೊಂದರ ಯುವ ಜೋಡಿಯು ರೆನಾಲ್ಟ್‌ ಕ್ವಿಡ್ ಕಾರಿನಲ್ಲಿ ಕುಳಿತು ಸಾರ್ವಜನಿಕ ಸ್ಥಳದಲ್ಲಿ ಹಾಡುಹಗಲೇ ಪ್ರಣಯದಲ್ಲಿ ತೊಡಗಿಕೊಂಡಿವೆ. ಕಾರು ಅಲುಗಾಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಹತ್ತಿರಕ್ಕೆ ಬಂದಾಗ ಸರಸ ಸಲ್ಲಾಪ ನಡೆಸುತ್ತಿದ್ದುದು ಕಂಡುಬಂದಿದೆ. ತಕ್ಷಣವೇ ಸಾರ್ವಜನಿಕರು ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಿ ಜೋಡಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.    

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಈ ಜೋಡಿ ಮಾಡಿದ್ದೇನು ಗೊತ್ತೇ..⁉️ ➤ ಅಲುಗಾಡುತ್ತಿದ್ದ ಕಾರಿನಲ್ಲಿ ನಡೆದಿದ್ದೇ ಬೇರೆ..‼️ Read More »

ಕ್ರೈಮ್ ನ್ಯೂಸ್

ಬೆಳ್ತಂಗಡಿ: ಲ್ಯಾಪ್‌ಟಾಪ್ ಕಳವುಗೈದು ಪರಾರಿಯಾಗಲೆತ್ನಿಸುತ್ತಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 11. ಇಲ್ಲಿನ ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿನಿಯ ಲ್ಯಾಪ್ ಟಾಪ್ ಕಳವುಗೈದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ದಾವಣಗೆರೆ ಮೂಲದ ಮಂಜುನಾಥ್ ಯಾನೆ ಮಂಜು (45) ಎಂದು ಗುರುತಿಸಲಾಗಿದೆ. ತಾಲೂಕಿನ ಅಲ್ಲಿಪಾದೆ ನಿವಾಸಿ, ಬಂಟ್ವಾಳ ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿನಿ ಮಾ. 08 ರಂದು ಕಾಲೇಜು ಬಿಟ್ಟು ಬಿಸಿರೋಡ್ ನಿಂದ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಬಸ್ಸಿನ ಸೀಟಿನಲ್ಲಿ ಲ್ಯಾಪ್‍ಟಾಪ್ ಇಟ್ಟು ಅಂಗಡಿಗೆ ತೆರಳಿದ್ದ ವೇಳೆ ಲ್ಯಾಪ್‍ಟಾಪ್ ಕಳ್ಳತನವಾಗಿತ್ತು.

ಬೆಳ್ತಂಗಡಿ: ಲ್ಯಾಪ್‌ಟಾಪ್ ಕಳವುಗೈದು ಪರಾರಿಯಾಗಲೆತ್ನಿಸುತ್ತಿದ್ದ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಉಳ್ಳಾಲ ಕುಂಪಲ ಆಶ್ರಯ ಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(17) ಮೃತದೇಹವು ಮನೆಯ ಕೋಣೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮುಂಡೋಳಿ ನಿವಾಸಿ ಯತೀನ್ ರಾಜ್, ಆಶ್ರಯ ಕಾಲನಿ ನಿವಾಸಿಗಳಾದ ಸೌರಭ್ ಮತ್ತು ಸುಹಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮೃತದೇಹ ಪತ್ತೆಯಾಗುವ ಮುನ್ನ ಮೂವರು ಆಕೆಯ ಮನೆ

ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಪಿಯುಸಿ ವಿದ್ಯಾರ್ಥಿನಿಯೋರ್ವಳ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಸಂಶಯ ವ್ಯಕ್ತವಾಗಿದ್ದು, ಕೊಲೆ ಆರೋಪ ಕೇಳಿಬರುತ್ತಿದೆ. ಮೃತಳನ್ನು ಮಂಗಳೂರು ಹೊರವಲಯದ ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾ (17) ಎಂದು ಗುರುತಿಸಲಾಗಿದೆ. ಈಕೆ ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದು, ಮಾಡೆಲಿಂಗ್ ನಲ್ಲಿ ಅಸಕ್ತಿ ಹೊಂದಿದ್ದ ಈಕೆ ಪೋಟೋ ಶೂಟ್ ಹಿನ್ನೆಲೆ ಬೆಂಗಳೂರಿಗೆ ತೆರಳಲು ಬುಧವಾರದಂದು ಕಾಲೇಜಿಗೆ ರಜೆ ಹಾಕಿ‌

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಸೋಮೇಶ್ವರ ಗ್ರಾಮದ ನಿವಾಸಿ ಉಮ್ಮರ್ ಫಾರೂಕ್ (25) ಹಾಗೂ ಕುತ್ತಾರು ನಿವಾಸಿ ಹಂಝ ಫವಾಹಿದ್ (26) ಎಂದು ಗುರುತಿಸಲಾಗಿದೆ. ಇವರು ಕೋಟೆಕಾರು ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಆರೋಪಿಗಳಿಂದ 1,500 ರೂ. ಮೌಲ್ಯದ 150 ಗ್ರಾಂ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಉಳ್ಳಾಲ

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top