ಕ್ರೈಮ್ ನ್ಯೂಸ್

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..!

(ನ್ಯೂಸ್ ಕಡಬ) newskadaba.com ಅ. 30. ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರದಂದು ಮುಂಜಾನೆ ನಡೆದಿದೆ. ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದ್ದು, ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ […]

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 30. ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಮೃತಪಟ್ಟ ಘಟನೆ ವರದಿಯಾಗಿದೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.  

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 29. ವಿಮಾನಯಾನ, ಹೋಟೇಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಆತ 2021 ರ ಪ್ರಕರಣದಲ್ಲಿ ಬಂಧನ ದಾಖಲೆಯನ್ನು ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡ ಬಂಧಿಸಿದೆ.      

ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.29. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.29. ನಗರದ ಬಂಜಾರಾ ಹಿಲ್ ಪ್ರದೇಶದ ರಸ್ತೆ ಬದಿ ಮಳಿಗೆಯಲ್ಲಿ ಮೊಮೋಸ್ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಮಹಿಳೆಯ ಇಬ್ಬರು ಪುತ್ರಿಯರು ಹಾಗೂ ಇತರ 20 ಮಂದಿ ಅಸ್ವಸ್ಥಗೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರೇಷ್ಮಾ ಬೇಗಂ (31) ಮತ್ತು 14 ಹಾಗೂ 12 ವರ್ಷ ವಯಸ್ಸಿನ ಆಕೆಯ ಇಬ್ಬರು ಹೆಣ್ಣುಮಕ್ಕಳು ಅಕ್ಟೊಬರ್ 25ರಂದು ಬೀದಿಬದಿ ಮೊಮೋಸ್ ಸೇವಿಸಿದ್ದರು. ತಕ್ಷಣವೇ ಮೂವರಿಗೂ ವಿಷಪ್ರಾಶನದ ಲಕ್ಷಣಗಳು ಕಂಡುಬಂದವು. ವಾಂತಿ ಬೇಧಿ ಮತ್ತು

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಬೈಕ್ ಅಪಘಾತ: ಓರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ದುರಂತ: 154 ಮಂದಿ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.29. ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ

ಪಟಾಕಿ ದುರಂತ: 154 ಮಂದಿ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ

(ನ್ಯೂಸ್ ಕಡಬ) newskadaba.com ಶ್ರೀನಗರ್, ಅ.28. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೂರರಿಂದ ನಾಲ್ಕು ಉಗ್ರಗಾಮಿಗಳು 15ರಿಂದ 20 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಟ್ಟಲ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪೊಂದರ ಮಧ್ಯೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು. ಮನೆ ಮೇಲೆ ದಾಳಿ ನಡೆದ ವಿಚಾರ ತಿಳಿದು ವಾಕಿಂಗ್‌ ಮಾಡುತ್ತಿದ್ದ

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top