ಕ್ರೈಮ್ ನ್ಯೂಸ್

ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ➤ ಓರ್ವ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ

(ನ್ಯೂಸ್ ಕಡಬ) newskadaba.com ಕೇರಳ, ಫೆ. 25. ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತನೋರ್ವನ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಆಳಪ್ಪುಝ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಆರೆಸ್ಸೆಸ್ ಕಾರ್ಯಕರ್ತ ನಂದು ಎಂದು ಗುರುತಿಸಲಾಗಿದೆ. ಆರೆಸ್ಸೆಸ್ ಹಾಗೂ ಎಸ್ಡಿಪಿಐ ಕಾರ್ಯಕರ್ತರ ನಡುವೆ ಈ ಘರ್ಷಣೆ ನಡೆದಿದ್ದು, ಪರಿಣಾಮ ಓರ್ವ ಆರೆಸ್ಸೆಸ್ ಕಾರ್ಯಕರ್ತ ಮೃತಪಟ್ಟಿದ್ದು, ಇನ್ನು ಎಸ್ಡಿಪಿಐ ಹಾಗೂ ಆರೆಸ್ಸೆಸ್ ನ ಇತರ ಕಾರ್ಯಕರ್ತರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ […]

ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ➤ ಓರ್ವ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಸೀದಿಯ ಕಾಣಿಕೆ ಹುಂಡಿ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನೋಟು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ. 24. ಇಲ್ಲಿನ ದರ್ಗಾವೊಂದರ ಕಾಣಿಕೆ ಹುಂಡಿಗೆ ಬೆಂಕಿ ಬಿದ್ದು ಅದರಲ್ಲಿದ್ದ ನೋಟುಗಳು ಬೆಂಕಿಗಾಹುತಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯ ಚಮಶಾವಲಿ ದರ್ಗಾದಲ್ಲಿ ನಡೆದಿದೆ. ದರ್ಗಾದ ಹುಂಡಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಮೌಲ್ಯದ ನೋಟುಗಳೆಲ್ಲ ಬೆಂಕಿಗಾಹುತಿಯಾಗಿದ್ದು, ಆದರೆ ಹುಂಡಿಗೆ ಬೆಂಕಿ ಹೇಗೆ ತಗುಲಿತು ಎಂಬುವುದು ತಿಳಿದುಬಂದಿಲ್ಲ. ಸದ್ಯ ಸುಟ್ಟ ನೋಟುಗಳನ್ನು ಪೊಲೀಸರು ಪರಿಶೀಲನೆ ನಡೆಸಿದರಲ್ಲದೇ ಇದರ ಜೊತೆಗೆ ದರ್ಗಾದ ಸಿಸಿಟಿವಿಯನ್ನು ಸಹ ಪರಿಶೀಲನೆ ಮಾಡಿದರು.

ಮಸೀದಿಯ ಕಾಣಿಕೆ ಹುಂಡಿ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನೋಟು ಸುಟ್ಟು ಕರಕಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,‌ ಫೆ. 24. ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಆರೋಪದ ಮೇರೆಗೆ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಅವರನ್ನು ಎಸಿಬಿ ಅಧಿಕಾರಿಗಳ ಬಂಧಿಸಿದ್ದಾರೆ.. ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಗೆ ಪೀಠೋಪಕರಣ ಮಾಡಿಸಲೆಂದು ತಮ್ಮ ಮನೆಯ ಆವರಣದಲ್ಲಿದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿಗೆಂದು ಕೋರಿಕೆ ಪತ್ರ ಸಲ್ಲಿಸಿದ್ದು, ಮಂಗಳೂರು ನಗರ ಅರಣ್ಯ ಇಲಾಖೆಯು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್,

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ದಂಧೆ ಪ್ರಕರಣ ➤ ಬಿಜೆಪಿ ಮುಖಂಡ ಹಾಗೂ ಇಬ್ಬರು ಪುತ್ರರು ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಫೆ. 24. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅವರನ್ನು ಮಂಗಳವಾರ ರಾತ್ರಿ ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿ ಎಂಬಲ್ಲಿ ಕೋಲ್ಕತ್ತಾ ಪೋಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ರಾಕೇಶ್ ಸಿಂಗ್ ಅವರ ಇಬ್ಬರು ಪುತ್ರರನ್ನೂ ಬಂಧಿಸಲಾಗಿದೆ. ಇತ್ತೀಚೆಗೆ ಕೊಕೇನ್ ಸಾಗಿಸುತ್ತಿದ್ದ ವೇಳೆ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿಯನ್ನು ವಿಚಾರಿಸಿದ ವೇಳೆ ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು.

ಡ್ರಗ್ಸ್ ದಂಧೆ ಪ್ರಕರಣ ➤ ಬಿಜೆಪಿ ಮುಖಂಡ ಹಾಗೂ ಇಬ್ಬರು ಪುತ್ರರು ಪೊಲೀಸ್ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚು ರೂಪಿಸುತ್ತಿದ್ದ ರೌಡಿ ಗ್ಯಾಂಗ್ ಮೇಲೆ ಸಿಸಿಬಿ ದಾಳಿ ➤ ನೆಲ್ಯಾಡಿಯ ವ್ಯಕ್ತಿ ಸೇರಿದಂತೆ 11 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ತಾಲೂಕಿನ ಶಿಶಿಲ ಗ್ರಾಮದ ನಿವಾಸಿ ರೌಡಿ ಶೀಟರ್ ಕಿರಣ್ ಗೌಡ ಎಂಬಾತನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಇನ್ನೊಂದು ಗ್ಯಾಂಗಿನ ಮೇಲೆ ದಾಳಿ ನಡೆಸುವ ಕುರಿತು ಗುಂಪೊಂದು ಸಂಚು ರೂಪಿಸಿತ್ತು. ಇದರ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು ಸಂಚುಕೋರರನ್ನು ಬೆನ್ನಟ್ಟಿ ಮಾರ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅದರಲ್ಲಿ ಓರ್ವ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ದೇವಸ

ಸಂಚು ರೂಪಿಸುತ್ತಿದ್ದ ರೌಡಿ ಗ್ಯಾಂಗ್ ಮೇಲೆ ಸಿಸಿಬಿ ದಾಳಿ ➤ ನೆಲ್ಯಾಡಿಯ ವ್ಯಕ್ತಿ ಸೇರಿದಂತೆ 11 ಮಂದಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಘರ್ಷಣೆ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ. 23. ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಹಲವರು ಗಾಯಗೊಂಡ ಘಟನೆ ಮುಜಫರ್ ನಗರದಲ್ಲಿ ನಡೆದಿದೆ.   ಕಳೆದ ವರ್ಷ ಸಂಸತ್ತು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿ ಗಡಿಯಲ್ಲಿ ಮೂರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಘರ್ಷಣೆ ➤ ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?ಬೆಳ್ತಂಗಡಿ: ವ್ಯಕ್ತಿಗೆ ಚೂರಿಯಿಂದ ಇರಿತ ➤ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆರಿಯ, ಫೆ. 23. ವ್ಯಕ್ತಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಫೆ.21ರಂದು ನೆರಿಯ ಕಾಡುರಾತ್ರಿ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ನೆರಿಯ ಗ್ರಾಮದ ಮಾಥ್ಯೂ ಎನ್.ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ಪುತ್ರ ಮಿಥುನ್ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬಂದ ಪರಿಚಿತರೇ ಆದ ಸೋಜೋ ಹಾಗೂ ಅವರ ತಮ್ಮ ಜೋಬಿನ್ ಎಂಬವರು ಮಿಥುನ್ ರವರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು

?ಬೆಳ್ತಂಗಡಿ: ವ್ಯಕ್ತಿಗೆ ಚೂರಿಯಿಂದ ಇರಿತ ➤ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಪ್ಪಿನಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 23. ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಪುತ್ತೂರು ಉರ್ಲಾಂಡಿ ನಿವಾಸಿ ಜನಾರ್ದನ್ ಎನ್ (36) ಎಂದು ಗುರುತಿಸಲಾಗಿದೆ. ಇವರು ಕಳೆದ ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರಸ್ತುತ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕುಡಿತದ ಚಟ ಹೊಂದಿದ್ದು, ಆದಿತ್ಯವಾರದಂದು ರಾತ್ರಿ ಉಪ್ಪಿನಂಗಡಿ ಕೆಂಪಿ ಮಜಲು ಎಂಬಲ್ಲಿನ ಅರಣ್ಯ ಇಲಾಖೆಯ

? ಉಪ್ಪಿನಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಟಿಕ್-ಟಾಕ್ ಸ್ಟಾರ್ ಸಮೀರ್ ಗಾಯಕವಾಡ್ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 22. ಟಿಕ್​-ಟಾಕ್ ಸ್ಟಾರ್ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈ ನಲ್ಲಿ ನಡೆದಿದೆ. ಮೃತ ಯುವಕನನ್ನು ಸಮೀರ್ ಗಾಯಕವಾಡ್ (22) ಎಂದು ಗುರುತಿಸಲಾಗಿದೆ. ಈತ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಪಾರ ಅಭಿಮಾನಿಗಳನ್ನೂ ಗಳಿಸಿದ್ದರು. ಇದೀಗ ಅವರ ಅನಿರೀಕ್ಷಿತ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಸಾವಿನ ಬಗ್ಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಟಿಕ್​ಟಾಕ್ ಬ್ಯಾನ್ ನಂತರ ಇನ್​ಸ್ಟಾಗ್ರಾಂ ರೀಲ್ಸ್​ ಮೂಲಕ ಅಭಿಮಾನಿಗಳನ್ನು ತಲುಪುತ್ತಿದ್ದ ಈತ ಇನ್​ ಸ್ಟಾಗ್ರಾಂ ನಲ್ಲಿ ಸುಮಾರು 2,73,090

? ಟಿಕ್-ಟಾಕ್ ಸ್ಟಾರ್ ಸಮೀರ್ ಗಾಯಕವಾಡ್ ಆತ್ಮಹತ್ಯೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ ➤ ಮಹಿಳೆ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 22. ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ದೇವಸ್ಥಾನದಿಂದ ಹೊರಬರುತ್ತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯಿರುವ ನದಿಯಿಂದ ಪ್ರತೀನಿತ್ಯವೂ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದ್ದು, ಸೋಮವಾರ ಮಧ್ಯಾಹ್ನದ ವೇಳೆಗೆ ಮುಖ್ಯ ರಸ್ತೆ ತಪ್ಪಿಸಿ ತಲಪಾಡಿಯ ಒಳ ರಸ್ತೆಯ ಮೂಲಕ

ಉಳ್ಳಾಲ: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ ➤ ಮಹಿಳೆ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top