ಕ್ರೈಮ್ ನ್ಯೂಸ್

ವಿಟ್ಲ: ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ‌ ➤ ಅಪಾರ ಪ್ರಮಾಣದ ಮರಗಳು ನಾಶ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 12. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ಮರಗಳು ಹೊತ್ತಿ ಉರಿದ ಘಟನೆ ವಿಟ್ಲ ಕನ್ಯಾನ ರಸ್ತೆಯ ಕಾನತ್ತಡ್ಕ ಎಂಬಲ್ಲಿ ನಡೆದಿದೆ. ಕನ್ಯಾನ ಎಂಬಲ್ಲಿನ ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ತಕ್ಷಣವೇ ಸ್ಥಳೀಯರು ಅಗ್ನಿಶಾಮಕದಳ ಹಾಗೂಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.‌ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಟ್ಲ: ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ‌ ➤ ಅಪಾರ ಪ್ರಮಾಣದ ಮರಗಳು ನಾಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ನೆಲ್ಯಾಡಿ: ಕಾರು ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.12. ಮಹೀಂದ್ರಾ ಪಿಕಪ್ ಹಾಗೂ ಆಲ್ಟೋ‌ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಶುಕ್ರವಾರದಂದು ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯ ಸಣ್ಣಂಪಾಡಿ ಎಂಬಲ್ಲಿ ನಡೆದ ಅಪಘಾತದಲ್ಲಿ ಕಾರು ಚಾಲಕ ಗಡಿಯಾರ ಜುಮ್ಮಾ ಮಸೀದಿ ಖತೀಬರಾದ ಉಮರ್ ಫೈಝಿ ಎಂಬವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

? ನೆಲ್ಯಾಡಿ: ಕಾರು ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?? ➤➤ Big Breaking News ಮರ್ಧಾಳ: ಟಿಪ್ಪರ್ ಹಾಗೂ ಮಹೀಂದ್ರಾ ಜೀತೋ ನಡುವೆ ಭೀಕರ ಅಪಘಾತ ➤ ಅರ್ಧತಾಸು ವಾಹನದೊಳಗೆ ಸಿಲುಕಿದ್ದ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಮರ್ಧಾಳ, ಫೆ. 12. ಟಿಪ್ಪರ್ ಹಾಗೂ ಕೋಳಿ ಸಾಗಾಟದ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾ.ಹೆದ್ದಾರಿಯ ಮರ್ಧಾಳದಲ್ಲಿ ಶುಕ್ರವಾರದಂದು ನಡೆದಿದೆ. ಕೋಳಿ ಸಾಗಾಟದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದು, ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘತಾದ ತೀವ್ರತೆಗೆ ಕೋಳಿ ಸಾಗಾಟದ ವಾಹನವು ಜಖಂ ಗೊಂಡಿದ್ದು, ಅರ್ಧತಾಸಿಗಿಂತಲೂ ಹೆಚ್ಚು ಸಮಯ ವಾಹನದೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಊರವರು ಹರಸಾಹಸಪಟ್ಟರು. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ

?? ➤➤ Big Breaking News ಮರ್ಧಾಳ: ಟಿಪ್ಪರ್ ಹಾಗೂ ಮಹೀಂದ್ರಾ ಜೀತೋ ನಡುವೆ ಭೀಕರ ಅಪಘಾತ ➤ ಅರ್ಧತಾಸು ವಾಹನದೊಳಗೆ ಸಿಲುಕಿದ್ದ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು: ಬೈಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 12. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಕಾಪುವಿನಲ್ಲಿ ನಡೆದಿದೆ. ಕಾಪು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಬೈಕ್‍ ಗೆ, ಕೇರಳದಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಟೂರಿಸ್ಟ್ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟೆಂಪೋ ಕಂದಕಕ್ಕೆ ವಾಲಿ ನಿಂತಿದ್ದು, ಘಟನಾ ಸ್ಥಳಕ್ಕೆ ಕಾಪು ಸಂಚಾರಿ

ಕಾಪು: ಬೈಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 12. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲಾಜೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪೆರಾಜೆ ಗ್ರಾಮದ ಕುಂಬಳಚೇರಿಯ ಸಂಜಯ್ ಎಂದು ಗುರುತಿಸಲಾಗಿದೆ. ಇವರು ಪೆರಾಜೆಯಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತಿದ್ದ ಕಾರು ಕಲ್ಲಾಜೆ ಸೇತುವೆಯ ಬಳಿ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು

ಕಡಬ: ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಪ.ಜಾತಿಗೆ ಮೀಸಲಿಡಲಾದ ಜಾಗದಲ್ಲಿ ಮತಾಂತರಗೊಂಡ ವೃದ್ದೆಯ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರ ವಿರೋಧ…!

(ನ್ಯೂಸ್ ಕಡಬ) newskadaba.com ಹಾಸನ, ಫೆ. 12. ಪರಿಶಿಷ್ಟ ಜಾತಿಗೆ ಮೀಸಲಿಡಲಾದ ಸ್ಮಶಾನದಲ್ಲಿ ಮತಾಂತರಗೊಂಡ ವೃದ್ಧೆಯೋರ್ವರ ಅಂತ್ಯಕ್ರಿಯೆಯನ್ನು ನಡೆಸಲು ಗ್ರಾಮಸ್ತರು ವಿರೋಧ ವ್ಯಕ್ತಪಡಿಸಿದ ಘಟನೆ ಹೋಬಳಿಯ ವಳ್ಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಪುಟ್ಟಮ್ಮ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದಿದ್ದ ಇವರು ಸೋಮವಾರದಂದು ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಗೆಂದು ಸ್ಮಶಾನದಲ್ಲಿ ಸಿದ್ಧತೆ ನಡೆಸಲಾಗಿತ್ತಾದರೂ ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ‘ಹಿಂದೂ ಪದ್ಧತಿಯಂತೆ ಅಂತ್ಯಕ್ರಿಯೆ ಮಾಡುವುದಾದರೆ ಮಾತ್ರ ಇಲ್ಲಿ ಮಾಡಿ, ಇಲ್ಲದಿದ್ದಲ್ಲಿ ಬೇಡ’ ಎಂದು ಹೇಳಿದ್ದಾರೆ.

? ಪ.ಜಾತಿಗೆ ಮೀಸಲಿಡಲಾದ ಜಾಗದಲ್ಲಿ ಮತಾಂತರಗೊಂಡ ವೃದ್ದೆಯ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರ ವಿರೋಧ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನ ಕೊಲೆ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 12. ಬಿಜೆಪಿ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಿದ ಘಟನೆ ದೆಹಲಿಯ ಮಂಗೋಲ್ಪುರಿ ಪ್ರದೇಶದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ರಿಂಕು ಶರ್ಮಾ ಎಂದು ಗುರುತಿಸಲಾಗಿದೆ. ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ನಡೆದ ವಾಗ್ವಾದದಲ್ಲಿ ರಿಂಕು, ಡ್ಯಾನಿಶ್ ಎಂಬಾತನಿಗೆ ಕಪಾಳಮೋಕ್ಷ ಮಾಡಿದ್ದು, ಈ ಸಂದರ್ಭ ಆತನ ಗೆಳೆಯರು ರಿಂಕು ಮೇಲೆ ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಅವರಲ್ಲಿ ಯಾರೂ ಈ ಹಿಂದೆ ಯಾವುದೇ ಕ್ರಿಮಿನಲ್ ದಾಖಲೆಗಳನ್ನು

ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನ ಕೊಲೆ ➤ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಬಿಯರ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಲ್ಲುಗುಂಡಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ಬಿಯರ್ ಬಾಕ್ಸ್ ಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯು ಜೋಡುಪಾಲ ಎಂಬಲ್ಲಿ ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಇಲ್ಲಿನ ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮೃತರನ್ನು ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಕೇರಳ ಮೂಲದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೂ ವಶಕ್ಕೆ ಪಡೆದ ಆರೋಪಿಯನ್ನು ಬಂಧಿಸಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top