ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಜಿಂಕೆಯ ಕೊಂಬು ಸಾಗಾಟ ➤ ಓರ್ವ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29. ಅಕ್ರಮವಾಗಿ ಜಿಂಕೆ ಕೊಂಬು ಸಾಗಾಟವನ್ನು ಪತ್ತೆಹಚ್ಚಿದ ಕೊಂಬಿನ ಜೊತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಸೂತ್ರಬೆಟ್ಟು, ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಬಕ ನಿವಾಸಿ ಶೇಖ್ ಅನ್ಸಾರ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಸೂತ್ರಬೆಟ್ಟು ಸಮೀಪ ಮಾರುತಿ ಕಾರಿನಲ್ಲಿ ಜಿಂಕೆ ಕೊಂಬಿ ಸಾಗಿಸುತ್ತಿದ್ದ ವೇಳೆ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ಪುತ್ತೂರು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ […]

ಪುತ್ತೂರು: ಅಕ್ರಮ ಜಿಂಕೆಯ ಕೊಂಬು ಸಾಗಾಟ ➤ ಓರ್ವ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗಾಂಜಾ ಮಾರಾಟ ➤ ಸಿಎ ವಿದ್ಯಾರ್ಥಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ವಿಶ್ರುತ್ ಎನ್.ರಾಜ್ (27) ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರಪ್ರದೇಶ ನಿವಾಸಿಯಾದ ಈತ ಬಿ.ಕಾಂ. ಪದವೀಧರನಾಗಿದ್ದು, ಸಿ.ಎ ಪರೀಕ್ಷೆ ಕಟ್ಟಿದ್ದು, ಬೆಂಗಳೂರಿನ ಸಿ.ಎ ಕಛೇರಿಯೊಂದರಲ್ಲಿ ಕೆಲಸ ಮಾಡುತ್ತಲೇ ವಿದ್ಯೆ ಕಲಿಯುತ್ತಿದ್ದ. ಹಾಗೆಯೇ ಅಕ್ರಮ ಹಣ ಸಂಪಾದನೆಯ ಉದ್ದೇಶದಿಂದ ಡ್ರಗ್ಸ್ ಮಾರಾಟ ಮಾಡಲಾರಂಭಿಸಿದ್ದ. ಆಂಧ್ರಪ್ರದೇಶದ ಪರಿಚಯಸ್ಥರ ಮೂಲಕ ಡ್ರಗ್ಸ್ ಖರೀದಿ ಮಾಡುತ್ತಿದ್ದ. ಈತನಿಂದ 35ಲಕ್ಷ ರೂ. ಮೌಲ್ಯದ

ಅಕ್ರಮ ಗಾಂಜಾ ಮಾರಾಟ ➤ ಸಿಎ ವಿದ್ಯಾರ್ಥಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಪೂರಿತ ಮದ್ಯ ಸೇವನೆ- ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಜ. 29. ವಿಷಪೂರಿತ ಮದ್ಯ ಸೇವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ಐವರ ಸ್ಥಿತಿ ಗಂಭೀರವಾದ ಘಟನೆ ಭಿಲ್ವಾರ ಎಂಬಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಷಪೂರಿತ ಮದ್ಯ ಸೇವನೆ- ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 29. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಲಾಯಿಲ ಗ್ರಾಮದ ರಾಘವೇಂದ್ರ ಮಠದ ಬಳಿ ನಿವಾಸಿ ಸಂಜೀವ ಸಫಲ್ಯ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದು, ವಿಪರೀತ ಕುಡಿತದ‌ ಚಟ ಹೊಂದಿದ್ದರು. ಪೈನಾನ್ಸ್ ನಲ್ಲಿ ಸಾಲ ಮಾಡಿದ ಇವರು ಅದನ್ನು ತೀರಿಸಲಾಗದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಇದೇ ವಿಚಾರದಲ್ಲಿ ಮನನೊಂದು ತನ್ನ ಮನೆಯ ಕೋಣೆಯಲ್ಲಿ

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಶಂಭೂರು ನಿವಾಸಿ ಸಂಜೀವ (70) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲೆಂದು ನಿಂತಿದ್ದ ಸಂದರ್ಭ ಕಾರೊಂದು‌ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದರು. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉದ್ಯಮಿಯೋರ್ವರ ಹನಿ ಟ್ರ್ಯಾಪ್..! ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಹನಿ ಟ್ರ್ಯಾಪ್ ಆರೋಪದ ಹಿನ್ನೆಲೆ ಖಾಸಗಿ ಸುದ್ದಿ ವಾಹಿನಿ ಮಾಲೀಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ ಘಟನ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಖಾಸಗಿ ಸುದ್ದಿವಾಹಿನಿ ಮಾಲೀಕ ವಿರೇಶ್, ಜಾನ್ ಕೆನಡಿ, ನಿರ್ಮಲ್ ಬಾಬು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಉದ್ಯಮಿಯೋರ್ವರನ್ನು ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂ. ಲಪಟಾಯಿಸಿದ್ದು, ಬಳಿಕ ಮತ್ತೆ ಹಣ ನೀಡುವಂತೆ ಬ್ಲಾಕ್-ಮೇಲ್ ಮಾಡುತ್ತಿದ್ದರು. ಇಲ್ಲವಾದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ

ಉದ್ಯಮಿಯೋರ್ವರ ಹನಿ ಟ್ರ್ಯಾಪ್..! ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಜ.28. ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೋರ್ವ ರಸ್ತೆಗೆ ಎಸೆಯಲ್ಪಟ್ಟು ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ನಡೆದಿದೆ. ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿಯಿಂದ ಕಿನ್ನಿಗೋಳಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರ ಎಂಬಲ್ಲಿ ನಡೆದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಶ್ರೀನಿವಾಸ(20), ರಾಜು (20) ಹಾಗೂ ಅಭಿಷೇಕ್ (19) ಎಂಸು ಗುರುತಿಸಲಾಗಿದೆ. ಈ ಆರೋಪಿಗಳ ಮೇಲೆ ಈಗಾಗಲೇ ಎರಡು ಕೇಸು ದಾಖಲಾಗಿದ್ದವು. ಇವರು ಬುಧವಾರದಂದು ರಾತ್ರಿ 10.45 ರ ಸುಮಾರಿಗೆ ಕಾಟಿಪಳ್ಳದ ಏಳನೇ ಬ್ಲಾಕ್ ನಿವಾಸಿ ಜಾಬಿರ್ ಎಂಬಾತನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದರು. ಆರೋಪಿಗಳ ಜೊತೆಗೆ

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಮಗುಚಿ ಬಿದ್ದಿದ್ದು, ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ‘ಸೌಮ್ಯ’ ಎಂಬ ಹೆಸರಿನ ನಾಡ ದೋಣಿಯೊಂದು ಗುರುವಾರ ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ಸಮದರ್ಭದಲ್ಲಿ ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿಗೆ ಹಾರಿ ಈಜಿ

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾತ್ರೋರಾತ್ರಿಯಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಹಾಸನ, ಜ. 28. ರಾತ್ರೋರಾತ್ರಿ ಮನೆಯಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹವೊಂದು ಪಕ್ಕದ ಊರಿನ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಳೆದ ಸೋಮವಾರದಂದು ರಾತ್ರಿ 11 ಗಂಟೆಯ ಬಳಿಕ ಕಾಣೆಯಾಗಿದ್ದ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆರಗೋಡು ಗ್ರಾಮದ ಬಾಲಕಿಯ ಮೃತದೇಹವು ಬುಧವಾರದಂದು ಪಕ್ಕದ ಊರಿನ ಅಂಕವಳ್ಳಿ ಎಂಬ ಕೆರೆಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರಗೈದು ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ಆಕೆಯ ಪೋಷಕರು ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದ್ದು, ಯೋಗೇಶ್

ರಾತ್ರೋರಾತ್ರಿಯಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! ➤ ಕೊಲೆ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top