ಕ್ರೈಮ್ ನ್ಯೂಸ್

ಅರಂತೋಡು: ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಅರಂತೋಡು, ಜ. 17. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಿಯರ್ ತುಂಬಿದ ಲಾರಿಯೊಂದು ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾತ್ರಿ ನಡೆದಿದೆ. ಘಟನೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಬಿದ್ದಿದ್ದು ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ರೂ 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಅರಂತೋಡು: ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿ.ಡಿ.ಒ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಜ.16. ಕಡಬ ತಾಲ್ಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರು ಕರ್ತವ್ಯದ ಮೇರೆಗೆ ತೆರಳಿದ್ದ ಸಂದರ್ಭದಲ್ಲಿ ಹೊಸ್ಮಠ ಸಮೀಪದ ದೇರಾಜೆ ಕ್ರಾಸ್ ಬಳಿಯ ನಿವಾಸಿ ಯಾಕೂಬ್ ಸೇರಿದಂತೆ ಐವರು ಕಾರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಫೋನ್ ಕಸಿದು ದಾಖಲೆಗಳನ್ನು ಡಿಲೀಟ್ ಮಾಡಿದ್ದಾರೆಂದು ಪಿಡಿಒ ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಆರೋಪಿಗಳು ತಲೆಮರೆಸಿಕೊಂಡು ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿ.ಡಿ.ಒ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರಾವಳಿಯ ವಿವಿಧ ದೇವಾಲಯಗಳಲ್ಲಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕರ್ನಾಟಕದ ವಿವಿಧ ದೇವಾಲಯಗಳಲ್ಲಿ ನಡೆದ ಹಲವಾರು ಕಳ್ಳತನಕ್ಕೆ ಸಂಬಂಧಿಸಿ ನಾಲ್ಕು ಮಹಿಳೆಯರು ಸೇರಿದಂತೆ ಆರು ಜನರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯಮುನಪ್ಪ ಮುತ್ತಪ್ಪ ಚಲವಾಡಿ (55), ಪ್ರಕಾಶ್ ಚೆನ್ನಪ್ಪ (26), ಶೋಭಾ ಮುತ್ತಾಗರ್ (40), ಕುಮಾರಮ್ಮ ಮಾರುತಿ ಮುತ್ತಾಗರ್ (45), ಶಾಂತಮ್ಮ ಮುತ್ತಾಗರ್ (55) ಹಾಗೂ ಚಂದ್ರಶೇಖರ್ ಶಿವರೆದಪ್ಪ (49) ಎಂಬವರನ್ನು ಬಂಧಿಸಿದ್ದಾರೆ. ಜೊತೆಗೆ ಇವರಲ್ಲಿದ್ದ ಏಳು ಮೊಬೈಲ್ ಫೋನ್‌, 21,540 ರೂ. ನಗದು, ಮತ್ತು

ಮಂಗಳೂರು: ಕರಾವಳಿಯ ವಿವಿಧ ದೇವಾಲಯಗಳಲ್ಲಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಲ್ಪೆ: ಮೀನುಗಾರಿಕೆಂದು ತೆರಳಿದ್ದ ಮೀನುಗಾರ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಬೋಟಿನಿಂದ ಕಾಲು ಜಾರು ಕೆಳಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಮಲ್ಪೆ ತೀರದಿಂದ ಸುಮಾರು‌13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಸುಧಾಕರ ವೆಂಕಣ್ಣ ಹೊಸಕಟ್ಟೆ(39) ಎಂದು ಗುರುತಿಸಲಾಗಿದೆ. ಜನವರಿ ಹತ್ತರ ಸಂಜೆ ನಾಲ್ಕು ಗಂಟೆಯ ವೇಳೆಗೆ ಆಳ ಸಮುದ್ರ ಮೀನುಗಾರಿಕೆಗೆಂದು ಮಲ್ಪೆ ಬಂದರಿನಿಂದ ತ್ರಿಜಲ್ ಬೋಟಿನ ಮೂಲಕ ತೆರಳಿದ್ದರು. ಜನವರಿ ಹದಿಮೂರರ ಮಧ್ಯರಾತ್ರಿ ಮಲ್ಪೆ ಬಂದರಿನಿಂದ ಸುಮಾರು 13 ನಾಟಿಕಲ್

ಮಲ್ಪೆ: ಮೀನುಗಾರಿಕೆಂದು ತೆರಳಿದ್ದ ಮೀನುಗಾರ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗದು ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ‌.16. ಇಲ್ಲಿನ ಮನೆಯೊಂದಕ್ಕೆ ಮುಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಕದ್ದೊಯ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಲ್ಲೇರಿ ಎಂಬಲ್ಲಿ ಅಯದಯಂಗಾರ್ ಬೇಕರಿ ನಡೆಸುತ್ತಿದ್ದ ಶರತ್ ಎಂಬವರ ಮನೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು 180 ಗ್ರಾಂ. ತೂಕದ ಚಿನ್ನಾಭರಣ, ಹತ್ತು ಸಾವಿರಕ್ಕೂ ಮಿಕ್ಕ ನಗದು ಹಾಗೂ ದೇವರ ಕೋಣೆಯಲ್ಲಿದ್ದ ಬೆಳ್ಳಿ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ: ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೈಚಾರು: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಜ.15. ಮಾರುತಿ ಹಾಗೂ ಆಲ್ಟೋ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಪೈಚಾರು ಶ್ರೀ ಶಕ್ತಿ ಆಟೋ ವರ್ಕ್ಸ್ ಮುಂಭಾಗದಲ್ಲಿ ನಡೆದಿದೆ. ಪೈಚಾರು ಕಡೆಯಿಂದ ಬರುತ್ತಿದ್ದ ಮಾರುತಿ ಕಾರಿಮ ಚಾಲಕ ಬೆಳ್ಳಾರೆ ರಸ್ತೆ ಎಂದು ಶಾಂತಿನಗರ ರಸ್ತೆಯ ಕಡೆ ವಾಹನವನ್ನು ತಿರುಗಿಸಿದಾಗ ಎದುರಿನಿಂದ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಹಿಳೆಯರು ಮತ್ತು ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ

ಪೈಚಾರು: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 15. ವ್ಯಕ್ತಿಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿಯ ಬಡಗುಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52 ) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಬಡಗುಬೆಟ್ಟು ಪರಿಸರದಲ್ಲಿನ ಹಳೆ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ವ್ಯಕ್ತಿಯು ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿರಬಹುದು ಎಂದು ಹೇಳಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤Breaking News? ಉಳ್ಳಾಲ: ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆತಂದ ಕಾರು ಚಾಲಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 15. ಉಳ್ಳಾಲ ಸಮ್ಮರ್ ಸ್ಟ್ಯಾಂಡ್ ಬೀಚ್ ರೆಸಾರ್ಟ್ ಗೆಂದು ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ಕಾರಿನ ಚಾಲಕ ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಾಗರಾಜ್ (31) ಎಂದು ಗುರುತಿಸಲಾಗಿದೆ. ಈತ ಕ್ಯಾಬ್ ಚಾಲಕನಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿನಿಂದ ಪ್ರವಾಸಿಗರನ್ನು ಉಳ್ಳಾಲದ ಸಮ್ಮರ್ ಸ್ಟ್ಯಾಂಡ್ ಬೀಚ್ ಗೆ ಕರೆದುಕೊಂಡು ಬಂದಿದ್ದರೆನ್ನಲಾಗಿದೆ. ಇವರು ಸಮುದ್ರಕ್ಕಿಳಿದು ಆಟವಾಡುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು

➤➤Breaking News? ಉಳ್ಳಾಲ: ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆತಂದ ಕಾರು ಚಾಲಕ ಸಮುದ್ರಪಾಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ಸಹೋದರರಿಬ್ಬರ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಜ. 15. ಹಳೆ ವೈಷಮ್ಯದ ಕಾರಣ ಇಬ್ಬರು ಸಹೋದರರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಎಂಬಲ್ಲಿ ನಡೆದಿದೆ. ಮೃತರನ್ನು ನಿಲೇಶ್(39) ಹಾಗೂ ರಾಜಶೇಖರ (35) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದು, ಕೊಲೆಗೆ ಹಳೆ ವೈಷಮ್ಯವೇ ಕಾರಣವೆಂದು ಶಂಕಿಸಲಾಗಿದೆ. ಸದ್ಯ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಸಹೋದರರಿಬ್ಬರ ಬರ್ಬರ ಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 15. ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಪಯ್ಯನ್ನೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಗಲ್ಪಾಡಿ ಚುಕ್ರಿಯಡ್ಕದ ಅಬ್ದುಲ್ ಫಯಾಜ್ (22) ಎಂದು ಗುರುತಿಸಲಾಗಿದೆ. ಈತ ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಸಂಶಯಗೊಂಡ ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆಗೊಳಪಡಿಸಿದಾಗ ಈತನ ಬಳಿ 128 ಗ್ರಾಂ ಗಾಂಜಾ ಪತ್ತೆಯಾಗಿದೆ. ಈತನ ಜೊತೆಗಿದ್ದ ಮತ್ತೋರ್ವ ನೌಫಾಲ್ ಎಂಬಾತ ಪರಾರಿಯಾಗಾಗಿದ್ದಾನೆ.  

ಕಾಸರಗೋಡು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top