ಕ್ರೈಮ್ ನ್ಯೂಸ್

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ […]

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..!

(ನ್ಯೂಸ್ ಕಡಬ) newskadaba.com ಅ. 20. ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಇಂದು ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..! Read More »

ಕ್ರೈಮ್ ನ್ಯೂಸ್, ಸಿನಿಮಾ

ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ವಶಕ್ಕೆ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 19. ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ವಾಹನ ಚಾಲಕನನ್ನು ಬಂಧಿಸಿ, ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಸಚಿನ್ ಮೇನಕುದುಳೆ, ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ. ಇನ್ನೂ

ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ವಶಕ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಅ. 19. ಎಕ್ಸ್‌ ಪ್ರೆಸ್‌ ವೇಯಲ್ಲಿ ಇಂದು ಮುಂಜಾನೆ ಸರ್ಕಾರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಮತ್ತು ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ಜೆಲ್ಲೆಯ ಲೋನಾವಾಲಾ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನುವಿಶ್ವನಾಥ ಭಗವಾನ್ ವಾಘಮಾರೆ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಜೈಪುರದಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ದೆಹಲಿ, ಅ. 19. ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಇಂದು ಬೆಳಗ್ಗೆ ಜೈಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. 189 ಪ್ರಯಾಣಿಕರಿದ್ದ ವಿಮಾನವು ಬೆಳಗಿನ ಜಾವ 1.20ಕ್ಕೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಜೈಪುರದಲ್ಲಿ ತುರ್ತು ಭೂಸ್ಪರ್ಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರುತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಭಯಂಕರವಾದ ಘಟನೆ ನಡೆದಿದ್ದು, ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕುಟುಂಬವು ಆ ಸಮಯಕ್ಕೆ ಎಚ್ಚರವಾಯಿತು ಮತ್ತು ದೊಡ್ಡ ಅನಾಹುತ

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ಕನ್ನಡ ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ಗುರುವಾರ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್‌ ಅವರು ನಿಧನರಾಗಿದ್ದಾರೆಂದು ಎಂದು ತಿಳಿದುಬಂದಿದೆ. ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆಂದು ವರದಿಗಳು ತಿಳಿದುಬಂದಿದೆ. ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿದ್ದು, ಇದಕ್ಕಾಗಿ ಡಯಾಲಿಸಿಸ್ ಕೂಡ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ

ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ Read More »

ಕ್ರೈಮ್ ನ್ಯೂಸ್, ಸಿನಿಮಾ
crime, arrest, suspected

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(ಬಿ) (6), ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top