ಕ್ರೈಮ್ ನ್ಯೂಸ್

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಗಾಯಾಳು ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.23. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ […]

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಗಾಯಾಳು ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜೂ.22, ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮ ಕೋಡಪದವು ಮಾಳ ಎಂಬಲ್ಲಿ ನಡೆದಿದೆ. ಮೃತರನ್ನು ಕೋಡಪದವು ನಿವಾಸಿ ನಾರಾಯಣ ಎಂಬವರ ಪುತ್ರ ಭುವನೇಶ್ (16) ಎಂದು ಗುರುತಿಸಲಾಗಿದೆ. ಈತ ವಿಟ್ಲದ ಖಾಸಗಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಭುವನೇಶ್  ಸುಮಾರು 6 ತಿಂಗಳ ಹಿಂದಿನಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ  ಫಿಟ್ಸ್ ನಿಂದ ಬಿದ್ದು ನರಳುತ್ತಿದ್ದ ಈತನನ್ನು   ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮೃತಪಟ್ಟಿದ್ದ ಎನ್ನಲಾಗಿದೆ. ಈ

ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.22: ಬೈಕ್ ಗೆ ಟ್ರ್ಯಾಕ್ಟರ್‍ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಟ್ರ್ಯಾಕ್ಟರ್ ನಡಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣೇ ವ್ಯಾಪ್ತಿಯ ಹೂ ಹಾಕುವ ಕಲ್ಲು ಪುಣ್ಯಕೋಟಿ ನಗರದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.   ಮೃತ ಬೈಕ್ ಸವಾರ ಅಧೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು, ಬದಲಿ ಚಾಲಕನನ್ನು, ಕರೆಸಿಕೊಂಡಿದ್ದರು. ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಆಘಾತಕ್ಕೆ ಕಂಬಳ ಪ್ರೇಮಿ ಬಲಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜೂ.22, ವಿದ್ಯುತ್ ಆಘಾತದಿಂದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಸಮೀಪದ ಮುಂಡ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಸಾಂತ್ರಬೆಟ್ಟು ರತ್ನವರ್ಮ ಜೈನ್(48) ಎಂದು ಗುರುತಿಸಲಾಗಿದೆ. ಇವರು ತಂಪು ಪಾನೀಯ ಫ್ಯಾಕ್ಟರಿಯೊಂದರಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಜನರೇಟರ್ ಆಫ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇವರು ಕಂಬಳ ಕ್ಷೇತ್ರದಲ್ಲೂ ಕೂಡ ಹಲವು ಸಾಧನೆಗಳನ್ನು ಮಾಡಿ ಗುರುತಿಸಲ್ಪಟ್ಟಿದ್ದರು.

ವಿದ್ಯುತ್ ಆಘಾತಕ್ಕೆ ಕಂಬಳ ಪ್ರೇಮಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಎರಡೂ ಬೈಕಿನ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಸೋಮವಾರದಂದು ನಡೆದಿದೆ. ಗಾಯಳು ಸವಾರರನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ಹಾಗೂ ರೆಂಜಿಲಾಡಿ ಗ್ರಾಮದ ಖಂಡಿಗ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಕಡಬ

ಮರ್ಧಾಳ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

15 ವರ್ಷದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 20, ಬಾಲಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೋಳಿಯಾರು ಗ್ರಾಮದ ಧರ್ಮನಗರ ಸಮೀಪ ಜಲಕದಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಸಮೀಪದ ನಡುಪದವು ನಿವಾಸಿ ಫಾಝಿಲ್(15) ಎಂದು ಗುರುತಿಸಲಾಗಿದೆ. ಈತ ಸ್ನೇಹಿತರ ಜೊತೆಗೆ ಇಲ್ಲಿನ ತೋಟವೊಂದರ ಕೆಲಸಕ್ಕೆ ತೆರಳಿದ್ದು, ತೋಟದಲ್ಲಿ ತೆಂಗಿನಕಾಯಿ ಹೆಕ್ಕಿದ ಬಳಿಕ ಕೈಕಾಲು ತೊಳೆಯಲೆಂದು ತೋಟದ ಪಕ್ಕದಲ್ಲೇ ಹರಿಯುವ ನದಿ ಕಿನಾರೆಯ ಬಳಿ ಮುಂದಾದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

15 ವರ್ಷದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರಿನ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮೈಸೂರು, ಜೂ.20, ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನ ಜಾವ ಅಗ್ನಿ ಅನಾಹುತ ಸಂಭವಿಸಿದೆ. ಕಟ್ಟಡದಲ್ಲಿ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, 9 ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಿಕೊಳ್ಳಲಾಯಿತು. 60 ಮಂದಿ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಳಿಗ್ಗೆಯಷ್ಟೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ನಷ್ಟದ ಅಂದಾಜು ಇನ್ನಷ್ಟೇ ತಿಳಿಯಬೇಕಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ

ಮೈಸೂರಿನ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.20: ಶುಕ್ರವಾರ ದಂದು ಉಳ್ಳಾಲ ಸೇತುವೆಯಿಂದ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನ ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ಅಪರಾಹ್ನ ಸುರೇಂದ್ರ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು ಇದರ ಹಿನ್ನೆಲೆಯಲ್ಲಿ ವ್ಯಕ್ತಿ

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಸುದ್ದಿಯಾಯಿತು ನೇತ್ರಾವತಿ ➤ ಯುವಕನೋರ್ವ ನದಿಗೆ ಹಾರಿರುವ ಶಂಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.19, ನಗರದ ಹೊರವಲಯದ ಜೆಪ್ಪಿನಮೊಗರು ಬಳಿ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ನದಿಯ ಬಳಿ ನೂರಾರು ಜನ ಜಮಾವಣೆಗೊಂಡಿದ್ದಾರೆನ್ನಲಾಗಿದೆ. ನದಿಗೆ ಹಾರಿದವರ ಬಗ್ಗೆ ಮಾಹಿತಿ ಇನ್ನೂ ತಿಳಿದುಬಂದಿಲ್ಲ, ಸಂಜೆ 4:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಧಾವಿಸಿದ್ದಾರೆ. ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು, ಕಳೆದ ವಾರ ಇಲ್ಲಿ ಮುಡಿಪು

ಮತ್ತೆ ಸುದ್ದಿಯಾಯಿತು ನೇತ್ರಾವತಿ ➤ ಯುವಕನೋರ್ವ ನದಿಗೆ ಹಾರಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top