ಕ್ರೈಮ್ ನ್ಯೂಸ್

ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ.9, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಶೇಷ ದಳದ ಎ.ಎಸ್.ಐ. ಧನಂಜಯ ಅವರು ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ವಿಟ್ಲ, ಬಿಸಿರೋಡ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಮಂಗಳೂರು ಜಿಲ್ಲಾ ಪೊಲೀಸ್ ವಿಶೇಷ ದಳದಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಎದೆನೋವಿನಿಂದ ಬಳಲುತ್ತಿದ್ದ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆನ್ನಲಾಗಿದೆ.  

ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.09: ಹರಿಹರ ಪಲ್ಲತಡ್ಕ ಗ್ರಾಮ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರೂ ಒಂದೇ ದಿನ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರು ಒಂದೇ ದಿನ ನಾಪತ್ತೆಯಾಗಿದ್ದು, ಇದರ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದಲ್ಲಿ

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಉಸಿರುಗಟ್ಟಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 9, ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿ ಬಳಿಯ ಪಲೋಮಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಜೇಮ್ಸ್(26 ವರ್ಷ) ಮತ್ತು ಆನಂದ(32 ವರ್ಷ) ಎಂದು ಗುರುತಿಸಲಾಗಿದೆ. ಇವರ ಪೈಕಿ ಜೇಮ್ಸ್ ತಮಿಳುನಾಡಿನ ಹೊಸೂರು ಮೂಲದವರಾಗಿದ್ದು, ಇವರು ಸೆಪ್ಟಿಕ್ ಟ್ಯಾಂಕ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು ಹಾಗೆಯೇ ಆನಂದ್ ಆನೇಕಲ್ ತಾಲೂಕಿನ ಮಂಚನಹಳ್ಳಿ ನಿವಾಸಿಯಾಗಿದ್ದು, ಪಲೋಮಾ

ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಉಸಿರುಗಟ್ಟಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆವರಣ ಗೋಡೆ ಕುಸಿದು ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 9, ಮನೆಯ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 3 ವರ್ಷದ ಮಗು ಮೃತಪಟ್ಟ ಘಟನೆ ಮುನ್ನೂರು ಗ್ರಾಮದ ಸಂತೋಷನಗರದಲ್ಲಿ ನಡೆದಿದೆ. ಮೃತ ಮಗುವನ್ನು ಅಶ್ರಫ್ ಎಂಬವರ ಪುತ್ರ ಐಮಾನ್( 3 ) ಎಂದು ಗುರುತಿಸಲಾಗಿದೆ. ಮನೆಯ ಆವರಣ ಗೋಡೆ ಸಮೀಪ ಆಟವಾಡುತ್ತಿದ್ದ ಮಗುವಿನ ಮೇಲೆ ಕಂಪೌಂಡ್ ಗೋಡೆ ಕುಸಿದುಬಿದ್ದ ಪರಿಣಾಮ ಮಗು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದೆ ಎನ್ನಲಾಗಿದೆ.

ಮಂಗಳೂರು: ಆವರಣ ಗೋಡೆ ಕುಸಿದು ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಧ್ಯಾಹ್ನ 1 ಗಂಟೆಯವರೆಗೆ ಚಿರು ಅಂತಿಮ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.8, ಭಾನುವಾರ ನಿಧನರಾದ ಖ್ಯಾತ ಚಿತ್ರನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರದ ತಯಾರಿಗಳು ಸಹೋದರ ಧ್ರುವ ಸರ್ಜಾ ರವರ ಮನೆಯ ತೋಟದಲ್ಲಿ ಪ್ರಾರಂಭವಾಗಿದೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬಸವನಗುಡಿ ನಿವಾಸದಲ್ಲಿ ಮಧ್ಯಾಹ್ನ ಒಂದು ಗಂಟೆಯವರೆಗೆ ಇಡಲಾಗುತ್ತದೆ, ಮಧ್ಯಾಹ್ನ ಸುಮಾರು ಮೂರು ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಮಧ್ಯಾಹ್ನ 1 ಗಂಟೆಯವರೆಗೆ ಚಿರು ಅಂತಿಮ ದರ್ಶನಕ್ಕೆ ಅವಕಾಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

Breaking News ವಿಮಾನ ಪತನ ➤ ಮಹಿಳಾ ಫೈಲಟ್ ಸಹಿತ ಇಬ್ಬರ ದುರ್ಮರಣ

(ನ್ಯೂಸ್ ಕಡಬ)newskadaba.com ಜೂ. 8, ಒಡಿಶಾದಲ್ಲಿ ಸೋಮವಾರದಂದು ತರಬೇತಿ ವಿಮಾನ ಪತನವಾಗಿದ್ದು, ಬಿಹಾರ ಮತ್ತು ತಮಿಳುನಾಡು ಮೂಲದ ಇಬ್ಬರು ಪೈಲಟ್ ಗಳು ಮೃತಪಟ್ಟಿದ್ದಾರೆನ್ನಲಾಗಿದೆ. ಒಡಿಶಾದ ಧೇಂಕ್ ನಲ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದ ದುರಂತದಲ್ಲಿ ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಹಾಗೂ ಇನ್ ಸ್ರಕ್ಟರ್ ಸಾವನ್ನಪ್ಪಿದ್ದಾರೆ. ಈ ಘಟನೆಯು ಕಂಕದಾಹದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ತರಬೇತಿ ಸಂದರ್ಭ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನ ಪತನವಾಗಿದೆ ಎನ್ನಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು,

Breaking News ವಿಮಾನ ಪತನ ➤ ಮಹಿಳಾ ಫೈಲಟ್ ಸಹಿತ ಇಬ್ಬರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇತುವೆಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 7, ಯುವಕನೋರ್ವ ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಮಂತರಪಾಳ್ಯದ ಸುರೇಶ್ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮೇಲ್ಸೇತುವೆಯಿಂದ ಏಕಾಏಕಿ ಜಿಗಿದ ಇವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಇವರನ್ನು ಸಾರ್ವಜನಿಕರು ಮತ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು- ಕಾಶ್ಮೀರ ಎನ್ ಕೌಂಟರ್ ➤ ಮೂವರು ಉಗ್ರರು ಬಲೆಗೆ

(ನ್ಯೂಸ್ ಕಡಬ)newskadaba.com ಶ್ರೀನಗರ: ಜೂ. 7, ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ರಕ್ಷಣಾಪಡೆಯು ಜಂಟಿ ಕಾರ್ಯಾಚರಣೆ ಆರಂಭಿಸಿದ ವೇಳೆ ಉಗ್ರರು ದಾಳಿ ಆರಂಭಿಸಿದ ಕಾರಣ ಅಲ್ಲಿ ಗುಂಡಿನ ಚಕಮಕಿ ನಡೆದಿದೆ‌. ಅಲ್ಲಿನ ಪ್ರಾಥಮಿಕ ವರದಿಯ ಪ್ರಕಾರ ಕನಿಷ್ಠ ಮೂವರು ಉಗ್ರರು ರಕ್ಷಣಾ ಪಡೆಯ ಕಾರ್ಯಾಚರಣೆ ವೇಳೆ ಸಿಲುಕಿದ್ದಾರೆ. ರಕ್ಷಣಾ ಪಡೆಗಳ ಬಳಿ ಸಿಲುಕಿದ್ದ ಉಗ್ರರು ಪರಾರಿಯಾಗಲು ಬೇಕಾಗಿ ಗುಂಡಿನ ದಾಳಿ ನಡೆಸಿದ್ದರಿಂದ ರಕ್ಷಣಾ ಪಡೆಯು ಪ್ರತಿದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್

ಜಮ್ಮು- ಕಾಶ್ಮೀರ ಎನ್ ಕೌಂಟರ್ ➤ ಮೂವರು ಉಗ್ರರು ಬಲೆಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.6: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.   ಬಂಧಿತರನ್ನು ಮುಲ್ಕಿ ಕಾರ್ನಾಡ್ ಬಪ್ಪನಾಡು ನಿವಾಸಿ ಮೊಹ್ಮದ್ ಹಾಸಿಮ್ (27), ನಿಸಾರ್ @ರಿಯಾಝ್ (33), ಮೊಹಮ್ಮದ್ ರಾಝೀಂ (24) ಮತ್ತು ಬಡಾ ಉಚ್ಚಿಲ ನಿವಾಸಿ ಅಬೂಬಕ್ಕರ್ ಸಿದ್ದಿಕ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹತ್ಯಾರು, ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಕಾರಣವಾದ ಅಂಶಗಳ ಬಗ್ಗೆ ಮತ್ತು ದಸ್ತಗಿರಿಗೆ

ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ

(ನ್ಯೂಸ್ ಕಡಬ) newskadaba.com ರಾಮನಗರ, ಜೂ6: ರಾಮನಗರದಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು! ದುಷ್ಕರ್ಮಿಗಳ ಗುಂಪೊಂದು ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಮಾಡಿರುವ ಘಟನ ತಡರಾತ್ರಿ ರಾಮನಗರದ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಅವರ ತೋಟದಲ್ಲಿ ನಡೆದಿದೆ. ತಡರಾತ್ರಿ ತೋಟಕ್ಕೆ ಎಂಟ್ರಿಕೊಟ್ಟ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ 300ಕ್ಕೂ ಅಧಿಕ ಬಾಳೆಗಿಡಗಳನ್ನ ನಾಶ ಮಾಡಿ ವಿಕೃತಿ ಮೆರೆದಿದ್ದಾರೆ. ಪಟೇಲ್ ರಾಜಣ್ಣ ಅವರ 6 ಎಕರೆ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top