ಕ್ರೈಮ್ ನ್ಯೂಸ್

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com  ವಿಜಯಪುರ, ಜೂ 02: 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಡೆದಿದೆ.ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದರು .     ಮನೆಯಲ್ಲಿ ಬಾಲಕಿಯ ತಾಯಿ ಇಲ್ಲದನ್ನು ಗಮನಿಸುತಿದ್ದ ಕಿರಾತಕ, ಪ್ರತಿ ಬಾರಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿ ತಾಯಿ ಮನೆಯಲ್ಲಿ ಇಲ್ಲದ ವೇಳೆ ಸಿಂಧಗಿ ಮೂಲದ 35 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ […]

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.! 

(ನ್ಯೂಸ್ ಕಡಬ) newskadaba.com  ಶಿವಮೊಗ್ಗ,ಜೂ.02: ರಾಷ್ಟ್ರೀಯ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಮೀಪದ ಮಂಡಗದ್ದೆ ಗ್ರಾಮದ ಬಳಿ ನಡೆದಿದೆ ಮೃತನನ್ನು ಅರುಣ್(27) ಎಂದು ಹೇಳಲಾಗಿದೆ. ಅರುಣ್ ರಾಷ್ಟ್ರೀಯ ಖೋ ಖೋ ತಂಡ ಪ್ರತಿನಿಧಿಸಿದ್ದರು. ಸದ್ಯ ಶಿವಮೊಗ್ಗದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಅವರು ಪುನಃ ವಾಪಸ್ಸು ಮನೆಗೆ ಬಂದಿರಲಿಲ್ಲ. ಶನಿವಾರ ಮಂಡಗದ್ದೆ ಕಾಡಿನ ಬಳಿ ಅವರ ಮೋಟಾರ್ ಬೈಕ್ ಸಿಕ್ಕರೆ, ಪಕ್ಕದಲ್ಲಿಯೇ ಹರಿಯುವ ತುಂಗಾ ನದಿಯ ದಂಡೆಯಲ್ಲಿದ್ದ ಹರಿಗೋಲಿನಲ್ಲಿ ಷರಟು,

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಪತ್ನಿ, ಅತ್ತೆ ಕಿರುಕುಳದಿಂದ ಪತಿರಾಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ದರ್ಶನ್ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ದರ್ಶನ್ ಪತ್ನಿ ಮತ್ತು ಅತ್ತೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದ ದರ್ಶನ್ 5 ತಿಂಗಳ ಹಿಂದೆ ಮದುವೆಯಾಗಿದ್ದು, ದಂಪತಿ ಕೆಂಗೇರಿಯ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು.   ಮದುವೆಯಾದ ಒಂದು ತಿಂಗಳ ನಂತರ ಮನೆಯಲ್ಲಿ

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ಅಪರಿಚಿತ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.01. ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಸಂಪಾಜೆ ಕಡೆಯಿಂದ ಸುಳ್ಯದತ್ತ ಆಗಮಿಸುತ್ತಿದ್ದ ಅಡ್ಕಾರಿನ ವ್ಯಕ್ತಿಯೋರ್ವರಿಗೆ ಸೇರಿದ ಹ್ಯುಂಡೈ ಕ್ರೆಟಾ ಕಾರು ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಅಪರಿಚಿತ ಪಾದಚಾರಿಯು ರಸ್ತೆ ದಾಟಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದೆ ಪಾದಚಾರಿಗೆ ಗುದ್ದಿ ರಸ್ತೆಯ ಪಕ್ಕದ ದಿಣ್ಣೆಯ ಮೇಲೆ ತಿರುಗಿ

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ಅಪರಿಚಿತ ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.    

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..!

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ,ಮೇ.31: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ,ಮೇ.31: ಕಡಬ ತಾಲೂಕಿನ ಐತ್ತೂರು ಗ್ರಾಮದ 72 ಕಾಲೋನಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.   ಘಟನೆ ಇಂದು(ಮೇ.31) ನಡೆದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದಿ.ರಾಜೇಂದ್ರನ್ ಅವರ ಪುತ್ರ ಗೌತಮ್ ಎಂದು ಗುರುತಿಸಲಾಗಿದೆ. ಯುವಕನ ಆತ್ಮಹತ್ಯೆ ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿಡಲಾಗಿದೆ.    

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮೈಸೂರು ,ಮೇ.29:  ನಿಂದಿಸಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಹುಣಸೂರಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಿಳಿಕೆರೆಯ ನಿವಾಸಿ ಕಾಳಪ್ಪ ನಾಯಕ್(35) ಆಸಿಡ್ ದಾಳಿಗೆ ಒಳಗಾದವರು. ಆಸಿಡ್ ದಾಳಿಯಿಂದ ಮುಖದ ಬಲ ಭಾಗ, ಕಿವಿ ಹಾಗೂ ಬೆನ್ನಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.     ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆಸಿಡ್ ದಾಳಿ ನಡೆಸಿದ ಬಿಳಿಕೆರೆಯ ಚಂದ್ರಶೇಖರಾಚಾರಿ(40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಳಪ್ಪ ನಾಯಕ ನಿಂದಿಸಿದ್ದಕ್ಕೆ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top