ಕ್ರೈಮ್ ನ್ಯೂಸ್

ಅನಂತ್ ನಾಗ್: ಭದ್ರತೆ ಪಡೆಯ ಗುಂಡಿಗೆ ಬಲಿಯಾದ ನಾಲ್ವರು ಉಗ್ರರು

ಜಮ್ಮು, ಮಾ.15: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ಬೆಳಿಗ್ಗೆ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಲಷ್ಕರ್-ಎ-ತೊಯ್ಬೆ (ಎಲ್‌ಇಟಿ) ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ, ಜಮ್ಮು- ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಇಂದು ಮುಂಜಾನೆ ಅನಂತ್‌ನಾಗ್‌ನ ವಾಟರಿಗಮ್‌ನಲ್ಲಿ ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಶೋಧ […]

ಅನಂತ್ ನಾಗ್: ಭದ್ರತೆ ಪಡೆಯ ಗುಂಡಿಗೆ ಬಲಿಯಾದ ನಾಲ್ವರು ಉಗ್ರರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ

ಕಾಸರಗೋಡು, ಮಾ.15: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್‌ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಪೆರಿಯ ಮೂನಂಕಡವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡು ಪೊಳ್ಳಾಚ್ಚಿಯ ಮಣಿ (43) ಎಂದು ಗುರುತಿಸಲಾಗಿದೆ. ಚಾಲಕ ಶಕ್ತಿ ವೇಲು ಮತ್ತು ಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುಚಿ ಬಿದ್ದ ಲಾರಿಯಡಿಯಲ್ಲಿ ಸಿಲುಕಿದ್ದ ಮೂವರನ್ನು ಗಂಟೆಗಳ ಶ್ರಮದ ಬಳಿಕ ಅಗ್ನಿಶಾಮಕ ಮತ್ತು ಪೊಲೀಸರು ಹೊರತೆಗೆದರೂ ಮಣಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೋಧ್‌ಪುರ: ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಬಲಿ

ಜೋಧ್‌ಪುರ, ಮಾ.14: ಜೀಪ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿಗಳು ಸೇರಿ 11 ಮಂದಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ರಾಜಸ್ತಾನದ ಜೋಧ್ಪುರ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಮೃತರಲ್ಲಿ 6 ಮಹಿಳೆಯರು, 1 ಮಗು ಹಾಗೂ 4 ಮಂದಿ ಪುರುಷರು ಸೇರಿದ್ದು ಇದರಲ್ಲಿ ಕಳೆದ ಫೆಬ್ರವರಿ 27ರಂದು ಮದುವೆಯಾದ ನವ ಜೋಡಿಗಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಬಲೋತ್ರ ಗ್ರಾಮದ ನಿವಾಸಿಗಳು ರಾಮ ದೇವೋರ್ ಪ್ರದೇಶದಲ್ಲಿರುವ ರಾಮದೇವೋ ದೇವರಿಗೆ ಪೂಜೆ ಸಲ್ಲಿಸಲು

ಜೋಧ್‌ಪುರ: ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಬಲಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ ➤ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.13. ಉಪ್ಪಿನಂಗಡಿ ಹಾಗೂ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 13 ಕ್ಕೂ ಹೆಚ್ಚಿನ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದ ಅಪರಾಧ ಪತ್ತೆ ದಳವು ಓರ್ವ ಆರೋಪಿಯನ್ನು ಬಂಧಿಸಿ, 18 ಲಕ್ಷ ರೂ‌. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮೂಲತಃ ಚಿಕ್ಕಮಗಳೂರು ಜಿಲ್ಲೆಯವನಾದ ಪ್ರಸ್ತುತ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅಳಿರಾ ನಿವಾಸಿ ಶೌಕತ್ ಅಲಿ ಯಾನರ ಶೌಕತ್(56) ಎಂದು ಗುರುತಿಸಲಾಗಿದೆ. ಆರೋಪಿಯು ಉಪ್ಪಿನಂಗಡಿ ಪೊಲೀಸ್

ಉಪ್ಪಿನಂಗಡಿ: ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ ➤ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಮೆಸ್ಕಾಂ ಎಇ ಮತ್ತು ಗುತ್ತಿಗೆದಾರರಿಗೆ ಅವಾಚ್ಯ ನಿಂದನೆ ಆರೋಪ ➤ ‘ಸೊಬಗು ನ್ಯೂಸ್‌’ ಬ್ಲಾಗ್‌ನ ಅನೀಶ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೋಡಿಂಬಾಳ ಗ್ರಾಮದ ನಾಕೂರು ಎಂಬಲ್ಲಿನ ವಿದ್ಯುತ್ ಕಾಮಗಾರಿಯೊಂದರ ಕುರಿತಂತೆ ಕಡಬ ಮೆಸ್ಕಾಂ ಎ.ಇ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಕಡಬದ ಸೊಬಗು ನ್ಯೂಸ್ ಬ್ಲಾಗ್‌ನ ಅನಿಶ್ ಕೋಡಿಂಬಾಳ ಅವರು ಅವಾಚ್ಯ ಶಬ್ದ ಬಳಸಿ ನಿಂದನೆ ಹಾಗೂ ಬೆದರಿಕೆ ಒಡ್ಡಿದ ಹಿನ್ನಲೆಯಲ್ಲಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳುವಂತೆ ಪುತ್ತೂರು ಜೆ.ಎಮ್.ಎಫ್.ಸಿ ನ್ಯಾಯಾಲಯ ಕಡಬ ಪೋಲಿಸರಿಗೆ ಆದೇಶ ನೀಡಿದ್ದು, ಈ ಬಗ್ಗೆ ಅನಿಶ್ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಡಿಂಬಾಳ ಗ್ರಾಮದ ನಾಕೂರು

ಕಡಬ ಮೆಸ್ಕಾಂ ಎಇ ಮತ್ತು ಗುತ್ತಿಗೆದಾರರಿಗೆ ಅವಾಚ್ಯ ನಿಂದನೆ ಆರೋಪ ➤ ‘ಸೊಬಗು ನ್ಯೂಸ್‌’ ಬ್ಲಾಗ್‌ನ ಅನೀಶ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ

ಹೊಸದಿಲ್ಲಿ, ಮಾ.11: ಭಾರತದಲ್ಲಿ ದಿನೇ ದಿನೇ ಕೊರೋನ ಭೀತಿ ಹೆಚ್ಚಾಗುತ್ತಲೇ ಇದ್ದು, ಮತ್ತೆ 14 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ 8 ಪ್ರಕರಣಗಳು ಕೇರಳದಲ್ಲಿ, ಕರ್ನಾಟಕದಲ್ಲಿ 3 ಹಾಗೂ ಮಹಾರಾಷ್ಟ್ರದ ಪುಣೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗಿರುವುದು ಸಹಜವಾಗಿಯೇ ದೇಶದಾದ್ಯಂತ, ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆತಂಕವನ್ನು ಹುಟ್ಟುಹಾಕಿದೆ. ಮಂಗಳವಾರ 8 ಹೊಸ

ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮಲಗಿದ್ದ ಚಾಲಕ ಮೃತ್ಯು ► ಹೃದಯಾಘಾತದ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಕೆಎಸ್ಸಾರ್ಟಿಸಿ ಬಸ್ ಚಾಲಕರೋರ್ವರ ಮೃತದೇಹವೊಂದು ಬಸ್ಸಿನಲ್ಲಿ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತ ಚಾಲಕನನ್ನು ಬೀದರ್ ನಿವಾಸಿ ರೇವಣ್ಣಪ್ಪ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳವಾರ ಸಂಜೆ ಕಡಬಕ್ಕೆ ಆಗಮಿಸಿದ ಬಸ್ಸನ್ನು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಮೀಪ ಹೆದ್ದಾರಿಯ ಪಕ್ಕದಲ್ಲಿ ರಾತ್ರಿ ನಿಲುಗಡೆಗೊಳಿಸಲಾಗಿದ್ದು, ಬೆಳಿಗ್ಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಿತ್ತು‌. ಬೆಳಿಗ್ಗೆ ನಿರ್ವಾಹಕ ಎದ್ದು ಚಾಲಕನನ್ನು ಕರೆಯಲೆಂದು ನೋಡಿದಾಗ ಚಾಲಕ ಮುಗ್ಗರಿಸಿ ಬಿದ್ದು ಮೃತಪಟ್ಟಿರುವುದು

ಕಡಬ: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮಲಗಿದ್ದ ಚಾಲಕ ಮೃತ್ಯು ► ಹೃದಯಾಘಾತದ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.08. ಕಾರು ಹಾಗೂ ಪೊಲೀಸ್ ಇಲಾಖೆಯ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೊಲೆರೋ ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಕೌಡಿಚ್ಚಾರ್ ಸಮೀಪದ ಮಡ್ಯಂಗಳ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸೆನ್ ವಿಭಾಗಕ್ಕೆ ಸೇರಿದ ಬೊಲೆರೋ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿಯಾಗಿ ಬಿದ್ದಿದ್ದು, ಬೊಲೆರೋದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು

ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.08. ಕೆಎಸ್ಸಾರ್ಟಿಸಿ ಬಸ್ ಹಾಗೂ ಮಾರುತಿ ಸುಝುಕಿ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ದಯೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೆಲಂಗಾಣ: ಮರ್ಯಾದ ಹತ್ಯೆ ಪ್ರಕರಣದ ಆರೋಪಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಹೊಸದಿಲ್ಲಿ,  ಮಾ.8: ದೇಶವನ್ನೇ ಬೆಚ್ಚಿಬೀಳಿಸಿದ 2018ರ ತೆಲಂಗಾಣದ ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿ, ಯುವತಿಯ ತಂದೆ ಮಾರುತಿ ರಾವ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. 2018ರಲ್ಲಿ ತನ್ನ ಪುತ್ರಿಯನ್ನು ಪ್ರೀತಿಸಿ ಮದುವೆಯಾದ ಪ್ರಣಯ್ ಪೆರುಮಳ್ಳ ಎಂಬ ಯುವಕನನ್ನು ಮಾರುತಿ ರಾವ್ ಸುಪಾರಿ ನೀಡಿ ಕೊಲೆ ಮಾಡಿಸಿದ್ದರು. ಪ್ರಣಯ್ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಅಮೃತಾ ಮೇಲ್ಜಾತಿಗೆ ಸೇರಿದ ಯುವತಿಯಾಗಿದ್ದಳು. 2018ರ ಸೆಪ್ಟಂಬರ್ 14ರಂದು ಮಾರುತಿ ರಾವ್ 1 ಕೋಟಿ ರೂ. ಸುಪಾರಿ ನೀಡಿ ಪ್ರಣಯ್

ತೆಲಂಗಾಣ: ಮರ್ಯಾದ ಹತ್ಯೆ ಪ್ರಕರಣದ ಆರೋಪಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top