ಕ್ರೈಮ್ ನ್ಯೂಸ್

ಮೇಲ್ಜಾತಿಯ ವ್ಯಕ್ತಿಯ ಜಮೀನಿನಲ್ಲಿ ಮಲವಿಸರ್ಜನೆ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆಗೈದ ಸ್ಥಳೀಯರು

ಚೆನ್ನೈ, ಫೆ.16: ಮೇಲ್ಜಾತಿಯ ವ್ಯಕ್ತಿಯೊಬ್ಬರಿಗೆ ಸೇರಿದ ಖಾಲಿ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕಾಗಿ ದಲಿತ ಯುವಕನೋರ್ವನನ್ನು ಜನರ ಗುಂಪೊಂದು ಥಳಿಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಆಗಿದೆ. ತಮಿಳುನಾಡಿನ ದಕ್ಷಿಣ ಚೆನ್ನೈನ ವಿಲ್ಲುಪುರಂ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸಂತ್ರಸ್ತನನ್ನು ಶಕ್ತಿವೇಲ್(24) ಎಂದು ಗುರುತಿಸಲಾಗಿದೆ. ಫೆ.12ರಂದು ಘಟನೆ ನಡೆದಿದ್ದು, ಸ್ಥಳೀಯರು ಸೇರಿ ಮಾರಣಾಂತಿಕ ಹಲ್ಲೆ ನಡೆಸಿರುವ ವೀಡಿಯೊ ವೈರಲ್ ಆಗಿದೆ. ಈತ ವಿಲ್ಲುಪುರಂ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಶಕ್ತಿವೇಲ್ ಕೆಲಸ ಮಾಡುತ್ತಿದ್ದರು. ಘಟನೆ ಸಂಬಂಧ ಸಂತ್ರಸ್ತನ ತಂಗಿ ಸ್ಥಳೀಯ […]

ಮೇಲ್ಜಾತಿಯ ವ್ಯಕ್ತಿಯ ಜಮೀನಿನಲ್ಲಿ ಮಲವಿಸರ್ಜನೆ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆಗೈದ ಸ್ಥಳೀಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಮದುವೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಪಲ್ಟಿ ➤ ನಾಲ್ವರು ಗಂಭೀರ, ಹತ್ತಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ‌.16. ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ‌. ಪುತ್ತೂರಿನಲ್ಲಿ ನಡೆಯಲಿದ್ದ ಮದುವೆಗೆಂದು ಸಕಲೇಶಪುರದಿಂದ ಹೊರಟಿದ್ದ ಮಿನಿಬಸ್ ಅಡ್ಡಹೊಳೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಿನಿಬಸ್ ನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ

ನೆಲ್ಯಾಡಿ: ಮದುವೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಪಲ್ಟಿ ➤ ನಾಲ್ವರು ಗಂಭೀರ, ಹತ್ತಕ್ಕೂ ಅಧಿಕ ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆಗುರುಳಿದ ಖಾಸಗಿ ಬಸ್ ➤ 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಫೆ‌.16. ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಪೇರಡ್ಕ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ‌. ಶನಿವಾರ ರಾತ್ರಿ ಪ್ರಯಾಣಿಕರನ್ನು ತುಂಬಿಸಿ ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೇ ಸುಬ್ರಹ್ಮಣ್ಯ ಕ್ಕೆ ಹೊರಟಿದ್ದ ಖಾಸಗಿ ಬಸ್ ಪೇರಡ್ಕ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಬಸ್ಸಿನಲ್ಲಿ 35 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ

ಕಡಬ: ರಸ್ತೆಗುರುಳಿದ ಖಾಸಗಿ ಬಸ್ ➤ 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ಬಂಧನ ➤ ಆರೋಪಿಯ ಗೂಡಂಗಡಿಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.15. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ನಡುವೆ ಅಬ್ದುಲ್ಲ ಎಂಬವರ ಗೂಡಂಗಡಿಗೆ ಬೆಂಕಿ ತಗುಲಿ‌ದ್ದು, ಅಂಗಡಿ ಸಂಪೂರ್ಣ ಭಸ್ಮವಾದ ಘಟನೆ ಶನಿವಾರ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.

ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ಬಂಧನ ➤ ಆರೋಪಿಯ ಗೂಡಂಗಡಿಗೆ ಬೆಂಕಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಆರು ತಿಂಗಳ ಹಿಂದಿನ ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು ➤ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲರ ಕಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಹಳೆಯ ಪ್ರಕರಣವನ್ನು ಹೊರಹಾಕಿದ್ದಾರೆ. 2019 ರ ಸೆಪ್ಟೆಂಬರ್ 09ರಂದು ಸುಬ್ರಹ್ಮಣ್ಯ- ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇನ್ನೋವಾ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತೀವೃವಾಗಿ ಗಾಯಗೊಂಡಿದ್ದ ಮಹಿಳೆ ಸುಮತಿ (48) ಎಂಬವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದರು. ಇದೀಗ ಆರು ತಿಂಗಳುಗಳ ನಂತರ ವಾಹನವನ್ನು ಪೋಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು,

ಕಡಬ: ಆರು ತಿಂಗಳ ಹಿಂದಿನ ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು ➤ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲರ ಕಾರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪಘಾತದ ಗಾಯಾಳು ಮೃತ್ಯು

ಮಂಗಳೂರು, ಫೆ.13: ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಇಂದು ಬೆಳಗ್ಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಬೆಳಗಾವಿ ಓಬಳಾಪುರ ಮೂಲದ ಕಿರಣ್ ರಾಥೋಡ್(22) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಸ್ಟೀಲ್ ಲೋಡ್ ಅನ್ನು ಕಾಸರಗೋಡಿಗೆ ತಂದಿದ್ದ ರಾಥೋಡ್, ಮತ್ತೆ ಬೆಳಗಾವಿಗೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ. ತಲಪಾಡಿ ಟೋಲ್ ಗೇಟ್ ಎದುರುಗಡೆ ಲಾರಿ ನಿಲ್ಲಿಸಿ ಚಹಾ ಕುಡಿಯಲೆಂದು ರಸ್ತೆಯಲ್ಲಿದ್ದ ಸಂದರ್ಭ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆದಿತ್ತು. ತಲಪಾಡಿಯಿಂದ ಮಂಗಳೂರಿಗೆ

ಮಂಗಳೂರು: ಅಪಘಾತದ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೂವರು ಮದ್ರಸ ವಿದ್ಯಾರ್ಥಿಗಳ ಅತ್ಯಾಚಾರ, ಕೊಲೆ ಯತ್ನ ➤ ಮೂವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಮದ್ರಸಕ್ಕೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಪಹರಿಸಿ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದ ಪೊಲೀಸ್ ತಂಡ ಬಂಧಿಸಿದ ಘಟನೆ ಕೊಣಾಜೆ ಸಮೀಪದ ಮಲಾರ್ ಉಗ್ಗನಬೈಲ್ ಎಂಬಲ್ಲಿ ನಡೆದಿದೆ. ಬಂಧಿತರನ್ನು ಪಾವೂರು ಉಗ್ಗನಬೈಲು ಸಮೀಪದ ಗುಣಪಾಲ (25), ಕಿರಣ್ ಕುಮಾರ್ (26) ಹಾಗೂ ನೀರುಮಾರ್ಗದ ಸುಭಾಷ್ (29) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಮಲಾರ್‌ನ ನೂರುಲ್ ಇಸ್ಲಾಮ್

ಮಂಗಳೂರು: ಮೂವರು ಮದ್ರಸ ವಿದ್ಯಾರ್ಥಿಗಳ ಅತ್ಯಾಚಾರ, ಕೊಲೆ ಯತ್ನ ➤ ಮೂವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking ಉಪ್ಪಿನಂಗಡಿ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.09. ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮೃತಪಟ್ಟು ಒರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್ ಅವರ ಸೊಸೆ ಕಾಂಚನ ನಿವಾಸಿ ಶಾಜಿ ಎಂಬವರ ಪತ್ನಿ ಜೈನೀ ಶಾಜಿ (30) ಮತ್ತು ಅವರ ಸಹೋದರ ಜಿಸನ್ (40) ಎಂಬವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ

Breaking ಉಪ್ಪಿನಂಗಡಿ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಂಪ್ ವೆಲ್ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೋರ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಸ್ವಾಗತ್ ಗ್ಯಾರೇಜ್‌ನ ಮುಖ್ಯಸ್ಥ ಪ್ರವೀಣ್ ಫೆರ್ನಾಂಡಿಸ್ (45) ಎಂದು ಗುರುತಿಸಲಾಗಿದೆ. ನಂತೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಂಪ್ವೆಲ್ ಫ್ಲೈಓವರ್ ಕೊನೆಯಲ್ಲಿ ವಿರುದ್ದ ದಿಕ್ಕಿನಿಂದ ಆಗಮಿಸುತ್ತಿದ್ದ ಡಸ್ಟರ್ ಕಾರಿಗೆ ಢಿಕ್ಕಿ ಹೊಡೆದು

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.08. ಬೈಕ್ ಮತ್ತು ಬಸ್ ನಡುವೆ ಢಿಕ್ಕಿ ಉಂಟಾದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಜೋಡುಪಾಲ ಸಮೀಪದ ನಿವಾಸಿ ವಿನುತ್ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ರಾಜಪ್ಪ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ರಾಜಪ್ಪರವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top