ಕ್ರೈಮ್ ನ್ಯೂಸ್

ಬೆಳ್ಳಾರೆ: ಬೈಕ್ ಹಿಟ್ ಆ್ಯಂಡ್ ರನ್ ➤ ಜಾತ್ರೆಗೆ ತೆರಳಿ ಹಿಂತಿರುಗುತ್ತಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.22. ಬೈಕೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಪೆರ್ಲಂಪಾಡಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಕೊಳ್ತಿಗೆ ಗ್ರಾಮದ ಎಕ್ಕಡ್ಕ‌ ನಿವಾಸಿ ಮೋಹನ್ ಎಂಬವರ ಪುತ್ರ ಅವಿನಾಶ್ (10) ಎಂದು ಗುರುತಿಸಲಾಗಿದೆ. ಅವಿನಾಶ್ ತನ್ನ ಮನೆಯವರೊಂದಿಗೆ ಜಾತ್ರೆಗೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕನನ್ನು ಬೆಳ್ಳಾರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ […]

ಬೆಳ್ಳಾರೆ: ಬೈಕ್ ಹಿಟ್ ಆ್ಯಂಡ್ ರನ್ ➤ ಜಾತ್ರೆಗೆ ತೆರಳಿ ಹಿಂತಿರುಗುತ್ತಿದ್ದ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಸವಾರರು ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ.22. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ಬುಧವಾರದಂದು ಸಂಭವಿಸಿದೆ. ಮೃತ ಸವಾರರನ್ನು ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿಗಳಾದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ. ಮೃತರು ಕೂಲಿ ಕಾರ್ಮಿಕರಾಗಿದ್ದು, ಸುಳ್ಯದಿಂದ ಸಾರಣೆ ಕೆಲಸಕ್ಕೆಂದು ಪಳ್ಳತ್ತಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಈ ಅಪಘಾತ ಸಂಭವಿಸಿದೆ. ಬೈಕ್ ಲಾರಿಗೆ ಗುದ್ದಿ ಮಗುಚಿಬಿದ್ದಿದೆ.

ಸುಳ್ಯ: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಸವಾರರು ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಇಟ್ಟ ಶಂಕಿತ ವ್ಯಕ್ತಿಯ ಚಿತ್ರ ಬಿಡುಗಡೆ

ಮಂಗಳೂರು, ಜ 20: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಅಮಾನಸ್ಪದ ಬ್ಯಾಗೊಂದು ಪತ್ತೆಯಾಗಿದ್ದು, ಬ್ಯಾಗಿಟ್ಟ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಶಂಕಿತ ವ್ಯಕ್ತಿ ಆಟೊರಿಕ್ಷಾ ಮೂಲಕ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದಲ್ಲಿ ಬ್ಯಾಗ್ ಇಟ್ಟು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅಧಿಕೃತವಾಗಿ ಆಟೊರಿಕ್ಷಾ ಮತ್ತು ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಹಾಗೂ ಹುಬ್ಬಳ್ಳಿ ವಿಮಾಣ ನಿಲ್ದಾಣದಲ್ಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ. ‘ಬಾಂಬ್’

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಇಟ್ಟ ಶಂಕಿತ ವ್ಯಕ್ತಿಯ ಚಿತ್ರ ಬಿಡುಗಡೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಡ್ಯಾರ್ ಕಣ್ಣೂರು ಪ್ರತಿಭಟನೆ: ಆರ್‌ಎಎಫ್ ವಿರುದ್ಧ ಘೋಷಣೆ ಕೂಗಿದ ಆರೋಪ; ಪ್ರಕರಣ ದಾಖಲು

ಮಂಗಳೂರು, ಜ.17: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ದಾಖಲೆ (ಎನ್‌ಪಿಆರ್) ವಿರುದ್ಧ ಅಡ್ಯಾರ್ ಕಣ್ಣೂರಿನಲ್ಲಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ತಂಡದ ವಿರುದ್ಧ ಘೋಷಣೆ ಕೂಗಿದ ಆರೋಪದಲ್ಲಿ ಕೆಲವು ಪ್ರತಿಭಟನಾಕಾರರ ವಿರುದ್ಧ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಎಫ್ ತುಕಡಿ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಅಲ್ಲಿದ್ದ ಕೆಲವರು ‘ಗೋ ಬ್ಯಾಕ್’ ಎಂದು ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ. ಅದರಂತೆ ಘೋಷಣೆ ಕೂಗಿದ

ಅಡ್ಯಾರ್ ಕಣ್ಣೂರು ಪ್ರತಿಭಟನೆ: ಆರ್‌ಎಎಫ್ ವಿರುದ್ಧ ಘೋಷಣೆ ಕೂಗಿದ ಆರೋಪ; ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೋಳಿ ಸಾಗಾಟದ ವಾಹನ ಪಲ್ಟಿ ➤ ನೂರಾರು ಕೋಳಿಗಳ ಸಾವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.17. ಕೋಳಿ ಸಾಗಾಟದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಟ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಈಚರ್ ಲಾರಿಯು ಪೆರ್ನೆ ಸಮೀಪದ ದೋರ್ಮೆ ಮಸೀದಿ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ವಾಹನ ನಜ್ಜುಗುಜ್ಜಾಗಿದ್ದು, 200 ಕ್ಕೂ ಅಧಿಕ ಕೋಳಿಗಳು ಸಾವಿಗೀಡಾಗಿವೆ. ಉಳಿದ ಕೋಳಿಗಳನ್ನು ಬೇರೆ ವಾಹನದ ಮೂಲಕ ಸಾಗಿಸಲಾಗಿದೆ.

ಉಪ್ಪಿನಂಗಡಿ: ಕೋಳಿ ಸಾಗಾಟದ ವಾಹನ ಪಲ್ಟಿ ➤ ನೂರಾರು ಕೋಳಿಗಳ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤ Big Breaking News. ಮಾಣಿ: ಬೈಕ್ – ಆ್ಯಕ್ಟೀವಾ ನಡುವೆ ಢಿಕ್ಕಿ ➤ ಸವಾರರಿಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬೈಕ್ ಮತ್ತು ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಗಳನ್ನು ಕಲ್ಲಡ್ಕ ನಿವಾಸಿ ಅಝ್ಮಾನ್ ಹಾಗೂ ಕೊಡಾಜೆ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ಕೊಡಾಜೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆ್ಯಕ್ಟೀವಾ ನಡುವೆ ಢಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

➤➤ Big Breaking News. ಮಾಣಿ: ಬೈಕ್ – ಆ್ಯಕ್ಟೀವಾ ನಡುವೆ ಢಿಕ್ಕಿ ➤ ಸವಾರರಿಬ್ಬರ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಟೆಂಪೊ – ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.14. ದ್ವಿಚಕ್ರ ವಾಹನ ಹಾಗೂ ಪ್ರಯಾಣಿಕರ ಟೂರಿಸ್ಟ್ ಟೆಂಪೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಾವಿನ ಮೂಲೆ ಎಂಬಲ್ಲಿ ಮಂಗಳವಾರದಂದು ಸಂಭವಿಸಿದೆ. ಮೃತ ಸವಾರನನ್ನು ಸುಳ್ಯ ತಾಲೂಕು ಕೊಲ್ಲಮೊಗರು ಗ್ರಾಮದ ಚಿದಾನಂದ(40) ಎಂದು ಗುರುತಿಸಲಾಗಿದೆ. ಮೃತರು ತನ್ಮ ದ್ವಿಚಕ್ರ ವಾಹನದಲ್ಲಿ ಬೆಳ್ಳಾರೆ – ಸುಳ್ಯ ಸಾರ್ವಜನಿಕ ರಸ್ತೆಯಲ್ಲಿ ಸೋಣಂಗೇರಿ ಕಡೆಯಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ವೇಳೆ ಕಾವಿನ ಮೂಲೆ ಎಂಬಲ್ಲಿ ಪ್ರಯಾಣಿಕರ ಟೂರಿಸ್ಟ್

ಬೆಳ್ಳಾರೆ: ಟೆಂಪೊ – ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇರಳಕಟ್ಟೆ: 2500 ಚಯರ್ ತುಂಬಿಸಿಟ್ಟಿದ್ದ ಲಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಲಾರಿ ಸಂಪೂರ್ಣ ಸುಟ್ಟು ಕರಕಲು – ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ದೇರಳಕಟ್ಟೆ, ಜ.13. ಪೌರತ್ವ ಕಾಯ್ದೆಯನ್ನು ವಿರೋಧಿಸಿ ಭಾನುವಾರದಂದು ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಬಳಸಲಾಗಿದ್ದ 2,500 ಕುರ್ಚಿಗಳಿಗೆ ಹಾಗೂ ಲಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯಲ್ಲಿ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಭಾನುವಾರ ದೇರಳಕಟ್ಟೆಯಲ್ಲಿ ಪೌರತ್ವ ಸಂರಕ್ಷಣಾ ಸಮಿತಿಯ ವತಿಯಿಂದ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲಾಗಿತ್ತು. ರ್ಯಾಲಿ ಮುಗಿದ ನಂತರ, 2500 ಕುರ್ಚಿಗಳನ್ನು ಐಷರ್ ವಾಹನಕ್ಕೆ ತುಂಬಿಸಿಡಲಾಗಿತ್ತು. ಕುರ್ಚಿಗಳು ಮತ್ತು ಅವುಗಳನ್ನು ಲೋಡ್

ದೇರಳಕಟ್ಟೆ: 2500 ಚಯರ್ ತುಂಬಿಸಿಟ್ಟಿದ್ದ ಲಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಲಾರಿ ಸಂಪೂರ್ಣ ಸುಟ್ಟು ಕರಕಲು – ಲಕ್ಷಾಂತರ ರೂ. ನಷ್ಟ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಬೆದರಿಕೆ ➤ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.12. ನಗರದ ಹೊರವಲಯದ ಸುರತ್ಕಲ್ ಸಮೀಪದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ 4ನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪಂಜಿಮೊಗರು ನಿವಾಸಿ ಮುಹಮ್ಮದ್ ತಬ್ಸೀದ್ (24), ಮರಕಡದ ನಿವಾಸಿ ಸೈಯದ್ ಆಫ್ರಿದಿ (24), ಕುಂಜತ್‌ಬೈಲ್‌ನ ಮುಹಮ್ಮದ್ ಮುಕ್ಸಿತ್ (24), ಮೂಡುಬಿದಿರೆಯ ಅಹ್ಮದ್ ಹುಸೈನ್ (24), ಖಾದರ್ ಸಫ್ವಾ (24) ಜೀವಾವಧಿ ಶಿಕ್ಷೆಗೊಳಗಾದವರು. 2015ರಲ್ಲಿ ಸುರತ್ಕಲ್‌ನ ಖಾಸಗಿ

ಮಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಬೆದರಿಕೆ ➤ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರು ಅಂದರ್

➤➤ ವೀಡಿಯೋ ನ್ಯೂಸ್ ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರ ಬಂಧನ ➤ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುದರ್ಶನ್ ಮೂಡುಬಿದಿರೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರು ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top