ಕ್ರೈಮ್ ನ್ಯೂಸ್

crime, arrest, suspected

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 12. ಇವೆಂಟ್ ಮ್ಯಾನೇಜ್ಮೆಂಟ್ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಎಂದು ಗುರುತಿಸಲಾಗಿದೆ. ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು ಇವರು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸಿ […]

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚೆನೈ,ಅ. 12.  ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಮಧ್ಯೆ ಚೆನ್ನೈಗೆ ಸಮೀಪವಿರುವ ಕವರೈಪೆಟ್ಟೈ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.   ಹಳಿತಪ್ಪಿದ ಬಾಗ್ಮತಿ ಎಕ್ಸ್‌ ಪ್ರೆಸ್‌ನ 13 ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಗಂಭೀರ ಗಾಯಗೊಂಡ ಮೂವರು ಪ್ರಯಾಣಿಕರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಅ. 12. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸವಾರನನ್ನು ಅಡ್ಯಾರ್‌ ಪದವಿನ ಜೋಸೆಫ್ ಎಂದು ಗುರುತಿಸಲಾಗಿದೆ. ಪಡೀಲ್‌ನಿಂದ ಬಿ.ಸಿ‌.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ‌ಹೊಡೆದಿದ್ದು, ಪರಿಣಾಮ ಸವಾರ ಜೋಸೆಫ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಆಯಧ ಪೂಜೆಯ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮರತ ಯುವಕನನ್ನು ಅತ್ತಾಜೆ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ಗುರುತಿಸಲಾಗಿದೆ. ಆದಿತ್ಯರವರು ಶುಕ್ರವಾರದಂದು ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು ಎನ್ನಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ

ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ. 11. ಹಲವೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕಡಬ ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿರುವ ಘಟನೆ ನಡೆದಿದೆ. ಬಂಧಿತನನ್ನು ಕಡಬ ತಾಲೂಕು ಕುಂತೂರು ನಿವಾಸಿ ರಾಝಿಕ್ ಅಲಿಯಾಸ್ ಎರ್ಮಾಳ ರಾಝಿಕ್ ಎಂದು ಗುರುತಿಸಲಾಗಿದೆ. ಈತ ಕಳೆದ ಒಂದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಅ. 10ರಂದು ತಮಿಳುನಾಡಿನ ಕೊಯಮತ್ತೂರಿನಿಂದ ಪೊಲೀಸರು ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು14 ದಿನಗಳ ನ್ಯಾಯಾಂಗ ಬಂಧನ

ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್‌ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಅ.9ರಂದು ರಾತ್ರಿ ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ

(ನ್ಯೂಸ್ ಕಡಬ)newskadaba.com ಸುರತ್ಕಲ್, ಅ. 11.  ಇಲ್ಲಿನ ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯಲ್ಲಿ

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top