ಕ್ರೈಮ್ ನ್ಯೂಸ್

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ಸ್ ಪಲ್ಟಿ: 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.30. ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮೈಸೂರು-ಬೆಂಗಳೂರು ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಎದುರುಗಡೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ತುಮಕೂರಿನಿಂದ ಮದ್ದೂರು ಮಾರ್ಗವಾಗಿ ಮೈಸೂರಿಗೆ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬಂದ ಗೂಡ್ಸ್ ಟೆಂಪೋಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 50ಕ್ಕೂ

ಕೆಎಸ್ಸಾರ್ಟಿಸಿ ಬಸ್ಸ್ ಪಲ್ಟಿ: 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೃತ ವ್ಯಕ್ತಿ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.30. ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಶೋಕ್ ಜು.13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ ಮೋಹನ್‌ರವರ ಮಗ ದಿನೇಶ್ ಎಂಬಾತನು 2020ರ ಜು.15ರಿಂದ ಆ.18ರ ಮಧ್ಯಾವಧಿ ಯಲ್ಲಿ ಮೃತ ಅಶೋಕ್ ಅವರಿಗೆ ಸೇರಿದ ವಿವಿಧ ಕಂಪೆನಿಗಳ ಸೇರಿದ ಒಟ್ಟು 4,24,90,548.90ರೂ. ಮೌಲ್ಯದ 14,970 ಪೇರುಗಳನ್ನು ಮೃತರ ಮೊಬೈಲ್ ಸಂಖ್ಯೆ ಮತ್ತು ಈ-ಮೇಲ್ ಐ.ಡಿ ದುರ್ಬಳಕೆ

ಮೃತ ವ್ಯಕ್ತಿ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ ಬಳಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪೊಲೀಸರು ಸಂಗ್ರಹ ಮಾಡಲಿದ್ದಾರೆ. ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ.30. ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯ ತಪ್ಪಿ ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಬೆಳ್ಚಾಡ(48) ಎಂದು ಗುರುತಿಸಲಾಗಿದೆ. ನವೀನ್ ಅವರು ರವಿವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಆವರಣ ಗೋಡೆಯನ್ನು ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.30. ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಸೆ. 27ರಂದು ಮೃತಪಟ್ಟಿದ್ದಾರೆ. ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30. ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್ ನಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕನನ್ನು  ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಎಂದು ಗುರುತಿಸಲಾಗಿದೆ. ಸೋಹಾನ್ ಹಬೀಬ್ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್ ಹಬೀಬ್ ದಿಢೀರ್ ನಾಪತ್ತೆಯಾಗಿದ್ದಾನೆ. ಈ ವೇಳೆ ಸಂಬಂಧಿಕರು ಮನೆಯೊಳಗೆ ಹಾಗೂ ಪರಿಸರದ ಮನೆಗಳಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಸಂಬಂಧಿಕರು, ಶೋಧ ನಡೆಸಿದಾಗ ಮನೆ ಸಮೀಪದ 200 ಮೀಟರ್

ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು

(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್‌ ಟೌನ್‌ ನ ಚಿನ್ನಪ್ಪ ಗಾರ್ಡನ್‌ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್‌ ಮೂಲಕ ಆಟೋ ಬುಕ್‌ ಮಾಡಿಕೊಂಡು ಮೆಜೆಸ್ಟಿಕ್‌ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ಅವರು ಜಮಖಂಡಿಯ ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ಚಿತ್ರಕಲಾ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಲಲಿತ ಕಲಾ ಅಕಾಡೆಮಿ ಪ್ರಶಸ್ತಿ, ಬಾಂಬೆ ಆರ್ಟ್‌ ಸೊಸೈಟಿ ಪ್ರಶಸ್ತಿ, ಆರ್ಟ್‌ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top