ಕ್ರೈಮ್ ನ್ಯೂಸ್

Crime

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 13. ಕೆಎಸ್ಸಾರ್ಟಿಸಿ ನೌಕರನೋರ್ವ ಕೆಎಸ್ಸಾರ್ಟಿಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿದಿದ್ದರಿಂದ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಚಾಕುವಿನಿಂದ ಚುಚ್ಚಿದ್ದು, ಆತನನ್ನು ಬಂಧಿಸಲಾಗಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ರಿತೇಶ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. […]

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಸೆ. 13. ವಿಷ ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧರೋರ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಬಲ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬಲ್ಯ ಗ್ರಾಮದ ದೇರಾಜೆ ಮಾದೇರಿಕೆ ನಿವಾಸಿ ಕುಶಾಲಪ್ಪ ಗೌಡ(75) ಎಂದು ಗುರುತಿಸಲಾಗಿದೆ. ಇವರು ಕಳೆದ 2 ವರ್ಷಗಳಿಂದ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದು ಈ ಬಗ್ಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರೂ ಸರಿಯಾಗಿ ಗುಣಮುಖವಾಗದ ಕಾರಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಸೆ.12ರ ಗುರುವಾರದಂದು ಇವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಯಾವುದೋ ವಿಷ ಪದಾರ್ಥ ಸೇವಿಸಿದ್ದು,

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಹೊಸ ಬೈಕ್ ಕೊಡಿಸಲು ತಾಯಿ ನಿರಾಕರಿಸಿದ್ದಕ್ಕೆ ಮನನೊಂದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಯ್ಯಪ್ಪ ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬ ಬೆಂಗಳೂರಿನ ತಣಿಸಂದ್ರದಲ್ಲಿ ನೆಲೆಸಿತ್ತು. ಆರು ವರ್ಷಗಳ ಹಿಂದೆ ತಂದೆ ತೀರಿಕೊಂಡ ಬಳಿಕ ಯುವಕನ ತಾಯಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ಅಡಚಣೆಯಿಂದಾಗಿ, ಬೈಕ್ ಖರೀದಿಸಲು ಸಾಧ್ಯವಾಗಲಿಲ್ಲ. ಮತ್ತು ಸ್ವಲ್ಪ ಸಮಯ ಕಾಯುವಂತೆಯೂ

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 13. ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಜೀವ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸತೀಶ ಎಂದು ಗುರುತಿಸಲಾಗಿದೆ. ಪಿಯುಸಿ ವಿದ್ಯಾರ್ಥಿನಿಯು ಕಳೆದ ಜೂನ್ 14ರಂದು ತಾಯಿಯೊಂದಿಗೆ ಪುತ್ತೂರಿನ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಅಲ್ಲಿಗೆ ಬಂದಿದ್ದ ಆರೋಪಿಯು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಆಕೆಯ ತಾಯಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದು, ಅದೇ ದಿನ ಆರೋಪಿಯು ಮೆಸೇಜ್ ಮಾಡಿ ವಿದ್ಯಾರ್ಥಿನಿಯ ಸಂಪರ್ಕಿಸಿ

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top