ಕ್ರೈಮ್ ನ್ಯೂಸ್

ಫಿಲಿಫೈನ್ಸ್ ನಲ್ಲಿ ಚಂಡಮಾರುತ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

(ನ್ಯೂಸ್ ಕಡಬ) newskadaba.com ಮನಿಲಾ, ಸೆ. 03.  ಫಿಲಿಫೈನ್ಸ್ ನಲ್ಲಿ ಚಂಡಮಾರುತದ ಪರಿಣಾಮ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶಾದ್ಯಂತ ವಿಮಾನಗಳ ಹಾರಾಟ ಹಾಗೂ ಹಡಗು ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಸಾವಿರಾರು ಜನ ಪ್ರಯಾಣಿಕರು ಪರದಾಡುತವಂತಾಗಿದೆ ಅಲ್ಲದೇ ದೇಶಯಾಗಿ ಇಲೋಕೋಸ್ ನಾರ್ಟೆ ಪ್ರಾಂತ್ಯದ ಪಾವೊಯ್ ನಗರ ಸೇರಿದಂತೆ ದಕ್ಷಿಣ ಚೀನಾ ಸಮುದ್ರದ ಭಾಗದಲ್ಲಿ ಗಂಟೆಗೆ 75-125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ […]

ಫಿಲಿಫೈನ್ಸ್ ನಲ್ಲಿ ಚಂಡಮಾರುತ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಮಳೆ ಬಂದ ಕಾರಣ ಅಂಗಡಿಯ ಜಗಲಿಯಲ್ಲಿ ಕುಳಿತಿದ್ದ ದಲಿತ ವೃದ್ದನ ಮೇಲೆ ಅಂಗಡಿ ಮಾಲೀಕನೋರ್ವ ಜಾತಿ ನಿಂದನೆ ಮಾಡಿ ಮರದ ತುಂಡಿನಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾದವರನ್ನು ಕೊಕ್ಕಡ ಗ್ರಾಮದ ಮಂಚ ಮೊಗೇರ (67) ಎಂದು ಗುರುತಿಸಲಾಗಿದೆ. ಕೊಕ್ಕಡ ನಿವಾಸಿಯಾಗಿರುವ ರಾಮಣ್ಣ ಗೌಡ ಎಂಬವರೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾರೆ.   ಘಟನೆಯ ವಿವರ- ಕೊಕ್ಕಡ

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ – 33 ಪವನ್, ಬೈಕ್ ಸಹಿತ ಆರೋಪಿ ಅಂದರ್..!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03. ಮನೆಯೊಂದರ ಬೀಗ ತೆಗೆದು ಚಿನ್ನ ಕಳ್ಳತನ ಪ್ರಕರಣದ ಆರೋಪಿಯನ್ನು ಕದ್ದ ವಸ್ತು ಸಹಿತ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಾಳ ಗ್ರಾಮದಲ್ಲಿ ವಾಸ್ತವ್ಯವಿರುವ ತಂಗಚ್ಚನ್‌ ಮಗ ಸಂತೋಷ್‌ ಟಿ ಎಂದು ಗುರುತಿಸಲಾಗಿದೆ. ಆಗಸ್ಟ್ ಮೂವತ್ತರಂದು ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ತೆರೆದು ಬೆಡ್‌ ರೂಂನ ಲಾಕರ್‌ ನಲ್ಲಿದ್ದ ಸುಮಾರು 10,05,000 ರೂ. ಮೌಲ್ಯದ 33 ಪವನ್ ವಿವಿಧ

ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ – 33 ಪವನ್, ಬೈಕ್ ಸಹಿತ ಆರೋಪಿ ಅಂದರ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್  ಮೂವರು ನಾಪತ್ತೆ..!                                           

(ನ್ಯೂಸ್ ಕಡಬ) newskadaba.com ಗಾಂಧಿನಗರ, ಸೆ. 03.  ಗುಜರಾತ್‌ ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಅದರಲ್ಲಿದ್ದ ಪೈಲಟ್ ಗಳು ಮತ್ತು ಡೈವರ್ ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದ ವೇಳೆ ಮುಳುಗಿದೆ. ಈ ಹೆಲಿಕಾಪ್ಟರ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮೂಲಕ ನಾಪತ್ತೆಯಾದವರಿಗಾಗಿ ಶೋಧ

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್  ಮೂವರು ನಾಪತ್ತೆ..!                                            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 03.  ಬ್ರಹ್ಮಾವರ ಮತ್ತು ಉಡುಪಿಯಲ್ಲಿ ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಒಟ್ಟು 25 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟವಾಗಿದೆ. ಮೊದಲ ಪ್ರಕರಣದಲ್ಲಿ ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಅಲಿಶಾ (26) ಎಂಬುವವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಲಾಗಿದೆ. ಮೇ 29 ರಿಂದ ಆಗಸ್ಟ್ 16 ರ ನಡುವೆ, ಆರೋಪಿಯ ಖಾತೆಗೆ ದೂರುದಾರರು 8,96,448 ರೂ. ವರ್ಗಾಯಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ದೂರು ದಾಖಲಿಸಲು ವೆಬ್‌ಸೈಟ್ ಸಂಪರ್ಕಿಸಿದಾಗ

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ   

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 03.  ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಗ್ರರ ದಾಳಿಯಿಂದ ಯೋಧ ಹುತಾತ್ಮರಾಗಿರುವ ಸಂಶಯ ವ್ಯಕ್ತವಾಗಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಉಗ್ರರ ದಾಳಿಯಿಂದಾಗಿ ಯೋಧ ಸಾವನ್ನಪ್ಪಿರಬಹುದು ಎಂದು ಭಾರತೀಯ ಸೇನೆ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಭಾರತೀಯ ಸೇನೆ ಹಾಗೂ ಪೊಲೀಸ್ ತಂಡ ಶೋಧ ಕಾರ್ಯಚರಣೆ ಪ್ರಾರಂಭಿಸಿದೆ. ಇದರೊಂದಿಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆ ಕಳ್ಳತನ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03.  ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳ ನಿವಾಸಿ ಸಂತೋಷ್ ಟಿ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮನೆಯ ಮಲಗುವ ಕೋಣೆಯಲ್ಲಿದ್ದ ಗೋದ್ರೇಜ್ ಲಾಕರ್‌ನಿಂದ 10.05 ಲಕ್ಷ ಮೌಲ್ಯದ 33 ಪವನ್ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ

ಮನೆ ಕಳ್ಳತನ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 03. ನಗರದಲ್ಲಿರುವ ಖಾಸಗಿ ಅಪಾರ್ಟ್‌ ಮೆಂಟ್‌ ಒಂದರಲ್ಲಿ ಲ್ಯಾಪ್‌ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತರನ್ನು ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಂದನ್ ಎಂದು ಗುರುತಿಸಲಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಆಕಾಶ್ ಸಿ. ಸೂರ್ಯವಂಶಿ ಎಂಬವರ ನಿವಾಸದಿಂದ ಅಂದಾಜು 4,00,000 ರೂಪಾಯಿ ಮೌಲ್ಯದ ಎರಡು ಲ್ಯಾಪ್‌ ಟಾಪ್‌ಗಳು ಮತ್ತು ಆಪಲ್ ಐಪಾಡ್ ಮೊಬೈಲ್‌ ಕಳ್ಳತನವಾಧ

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top