ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್‌ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಎಂದು ಗುರುತಿಸಲಾಗಿದೆ. ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮಂಗಳೂರು ಸಿಸಿಬಿ […]

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..!  Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಆ. 28. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ, ವಶಕ್ಕೆ ತೆಗದುಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತನನ್ನು ಶಿವಸ್ವಾಮಿ ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಮದ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮರೆ ಮಾಚಿ ಸಾಗಾಣಿಕೆ ಮಾಡುತ್ತಿದ್ದಾಗ, ಗಸ್ತು ನಿರತರಾಗಿದ್ದ ಅಬಕಾರಿ ಸಿಬ್ಬಂದಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಶಿವಸ್ವಾಮಿಯಿಂದ 2,918 ರೂ ಮೌಲ್ಯದ ಮದ್ಯ ಹಾಗೂ 70 ಸಾವಿರ ರೂ

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ನದಿಗೆ ಹಸುಗಳನ್ನು ಎಸೆದ ವೀಡಿಯೋ ವೈರಲ್..! ನಾಲ್ವರ ವಿರುದ್ಧ ಪ್ರಕರಣ ದಾಖಲು..! 

(ನ್ಯೂಸ್ ಕಡಬ) newskadaba.com ಸತ್ನಾ, ಆ. 28. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ವ್ಯಕ್ತಿಗಳ ಗುಂಪೊಂದು ನದಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ನಾಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಭವಿಸಿದ ಘಟನೆಯಲ್ಲಿ 15 ರಿಂದ 20 ಹಸುಗಳು ಸಾವನ್ನಪ್ಪಿವೆ, ಆದರೆ ಮಾಹಿತಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋವನ್ನು ಅರಿತು, ಮಾಹಿತಿ ಸಂಗ್ರಹಿಸಲು ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ,

ನದಿಗೆ ಹಸುಗಳನ್ನು ಎಸೆದ ವೀಡಿಯೋ ವೈರಲ್..! ನಾಲ್ವರ ವಿರುದ್ಧ ಪ್ರಕರಣ ದಾಖಲು..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 28. ವಾಲ್ಮಿಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..!

(ನ್ಯೂಸ್ ಕಡಬ) newskadaba.com ಮೈಸೂರು, ಆ. 28. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.   ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ ನಲ್ಲಿ ನಡೆದಿದೆ. ಮಹಿಳೆಯೋರ್ವರು ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿದ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರಗೊಂಡಿದೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ.  ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಟಾನಗರ, ಆ. 28. ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದುಬಂದಿದೆ. ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಹೆಚ್ಚಿನ ವಿವರಗಳು ಇನ್ನೂ ದೊರೆತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರನ್ನು ಹವಾಲ್ದಾರ್ ನಖತ್ ಸಿಂಗ್,

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..!

(ನ್ಯೂಸ್ ಕಡಬ) newskadaba.c0m ಲಖನೌ, ಆ. 27.  ಉತ್ತರ ಪ್ರದೇಶದ ಇಂಡೋ-ನೇಪಾಳ ಗಡಿ ಜಿಲ್ಲೆ ಬಹ್ರೈಚ್‌ ನ ಮಹಾಸಿ ಬ್ಲಾಕ್‌ನ 30 ಗ್ರಾಮಗಳಲ್ಲಿ ತೋಳಗಳ ಗುಂಪು ದಾಳಿ ನಡೆಸಿದ್ದು, ಘಟನೆಯಲ್ಲಿ ಆರು ಮಕ್ಕಳು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು 26 ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅರಣ್ಯ ಇಲಾಖೆಯು ತೋಳಗಳನ್ನು ಸೆರೆ ಹಿಡಿಯಲು ಒಂಬತ್ತು ಜನರ ತಂಡವನ್ನು ನಿಯೋಜಿಸಿದೆ. ತೋಳಗಳ ಗ್ರಾಮಗಳಿಗೆ ನುಗ್ಗಿ ದಾಳಿ ನಡೆಸುತ್ತಿದ್ದು, ಕಳೆದ ಒಂದು ತಿಂಗಳಿಂದ ಈ ಪ್ರದೇಶದ ಗ್ರಾಮಸ್ಥರಲ್ಲಿ ಭೀತಿಯನ್ನು ಸೃಷ್ಟಿಸಿವೆ.

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top