ಕ್ರೈಮ್ ನ್ಯೂಸ್

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರುತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು. ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ […]

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ‌ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 27. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯೋರ್ವನನ್ನು ಬಂಧಿಸಲಾಗಿದೆ.   ಬಂಧಿತ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾರ್ಕಳ ತೆಲ್ಲರು ನಿವಾಸಿ ಅಭಯ್ ಎಂದು ತಿಳಿದುಬಂದಿದೆ. ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಸ್ನೇಹಿತರಾಗಿದ್ದು, ಇವರಿಬ್ಬರೂ ಒಟ್ಟಿಗೆ ತಿರುಗಾಡುತ್ತಿದ್ದಾರೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಕಾರ್ಕಳ‌ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲಬಾಧೆ- ರೈತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಯಾದಗಿರಿ, ಆ. 27. ಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಸುರಪುರ ತಾಲೂಕಿನ‌ ನಗನೂರ ಗ್ರಾಮದಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡ ರೈತನನ್ನು ತಿಪ್ಪಣ್ಣ ಕಟ್ಟಿಮನಿ (45) ಎಂದು‌ ಗುರುತಿಸಲಾಗಿದೆ. ಬ್ಯಾಂಕ್ ಸಾಲ ಹಾಗೂ ಕೈ ಸಾಲ ಸೇರಿ ಒಟ್ಟು 8 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಇವರು ಸಾಲತೀರಿಸಲಾಗದೇ ಕಂಗಾಲಾಗಿದ್ದರು. ಇದರಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾಲಬಾಧೆ- ರೈತ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಗರದಲ್ಲಿ ನಡೆದ ಕೊಲೆಯೊಂದಕ್ಕೆ ಎಚ್‌ಎಎಲ್ ತರಕಾರಿ ವ್ಯಾಪಾರಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು. ಆಕೆಯ

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                        

(ನ್ಯೂಸ್ ಕಡಬ) newskadaba.c0m ಸುಡಾನ್, ಆ. 27.  ಯುದ್ಧ ಪೀಡಿತ ಸುಡಾನ್‌ ನಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ಸಂಭವಿಸಿದೆ. ವ್ಯಾಪಕ ಮಳೆಗೆ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದ್ದು, 20 ಕ್ಕೂ ಹೆಚ್ಚು ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರು ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ. ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಪೋರ್ಟ್ ಸುಡಾನ್‌ ನ

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                         Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!            

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 27.  ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಕೈಗಾರಿಕೋದ್ಯಮಿ ಅನಂತ ಪದ್ಮನಾಭ ಖೋಡೆ ನಿಧನ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಖ್ಯಾತ ಕೈಗಾರಿಕೋದ್ಯಮಿ ಮತ್ತು ಪ್ರಸಿದ್ಧ ಖೋಡೆ ಕುಟುಂಬದ ಸದಸ್ಯ ಅನಂತ ಪದ್ಮನಾಭ ಖೋಡೆ(85) ಸೋಮವಾರ ನಿಧನರಾದರು. ಅನಂತ ಪದ್ಮನಾಭ ಖೋಡೆ ದಿವಂಗತ ರಾಮಚಂದ್ರ ಖೋಡೆ ಮತ್ತು ಶ್ರೀಹರಿ ಖೋಡೆಯವರ ಸಹೋದರರಾಗಿದ್ದರು, ಅವರಿಬ್ಬರೂ ಕುಟುಂಬದ ವ್ಯವಹಾರಗಳಲ್ಲಿ ಪ್ರಭಾವಿ ವ್ಯಕ್ತಿಗಳಾಗಿದ್ದರು. ತಮ್ಮ ಕೈಗಾರಿಕಾ ಉದ್ಯಮಗಳು ಮತ್ತು ಮದ್ಯದ ವ್ಯಾಪಾರಕ್ಕೆ ಹೆಸರುವಾಸಿಯಾದ ಖೋಡೆಗಳು ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ವಲಯಗಳಲ್ಲಿ ದೀರ್ಘಕಾಲ ಪ್ರಭಾವ ಬೀರಿದ್ದಾರೆ ಎನ್ನಲಾಗಿದೆ.                                                                                    

ಖ್ಯಾತ ಕೈಗಾರಿಕೋದ್ಯಮಿ ಅನಂತ ಪದ್ಮನಾಭ ಖೋಡೆ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

(ನ್ಯೂಸ್ ಕಡಬ) newskadaba.com ಆ. 27. ಆಹಾರ ಅರಸಿಕೊಂಡು ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಯು ಬೇಲಿ ದಾಟುವ ವೇಳೆ ತೋಟಕ್ಕೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು

(ನ್ಯೂಸ್ ಕಡಬ) newskadaba.com ಕಡಬ, ಆ.26. ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top