ಕರಾವಳಿ

ಮಂತ್ರಾಲಯ ಶ್ರೀಮಠದ ಹೆಸರಿನಲ್ಲಿ ಸೈಬರ್ ವಂಚನೆ: ಭಕ್ತರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಸೆ. 07. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಕುರಿತು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರಿಗೆ ನೀಡಿರುವ ಎಚ್ಚರಿಕೆ ಸಂದೇಶ..ಆರಾಧನಾ ಮಹೋತ್ಸವ, ಗುರು ವೈಭವೋತ್ಸವ ಹಾಗೂ ಸಾಮಾನ್ಯ ದಿನಗಳಲ್ಲಿಯೂ ಕೊಠಡಿ (ರೂಂ) ಬುಕ್ಕಿಂಗ್, ಪರಿಮಳ ಪ್ರಸಾದ ಮತ್ತು ದೇಣಿಗೆ ಸಂಗ್ರಹಣೆ ಹೆಸರಿನಲ್ಲಿ ನಕಲಿ ಜಾಲತಾಣಗಳು ಹಾಗೂ ವಾಟ್ಸ್‌ಆಪ್‌ ಮೂಲಕ ಭಕ್ತರಿಂದ ಹಣ ಪಡೆದು ವಂಚಿಸಲಾಗುತ್ತಿದೆ. ಶ್ರೀಮಠದ ಹೆಸರಿನಲ್ಲಿ ಹಣ ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ. ಮಠದಿಂದ […]

ಮಂತ್ರಾಲಯ ಶ್ರೀಮಠದ ಹೆಸರಿನಲ್ಲಿ ಸೈಬರ್ ವಂಚನೆ: ಭಕ್ತರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಎಚ್ಚರಿಕೆ Read More »

ಕರಾವಳಿ

ಮಲ್ಪೆ ಬಳಿಯ ಹೂಡೆಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ!

(ನ್ಯೂಸ್‌ ಕಡಬ) newskadaba.com,  ಸೆ. 07.ಸೋಮವಾರ ಬೆಳಗ್ಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ  ನವಜಾತ ಹೆಣ್ಣು ಮಗುವೊಂದು ಎಸೆಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮಗುವನ್ನು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪರೀಕ್ಷೆಯಲ್ಲಿ ಮಗುವಿಗೆ ಹೃದಯಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

ಮಲ್ಪೆ ಬಳಿಯ ಹೂಡೆಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ! Read More »

ಕರಾವಳಿ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ

(ನ್ಯೂಸ್‌ ಕಡಬ) newskadaba.com, ಸೆ.05 ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ದಿನಾಂಕ. ಶನಿವಾರದಂದು ಜರಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಂದರ ಗೌಡ ಪಣೆಮಜಲು ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಹ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಇವರು ಶಿಕ್ಷಕರು ಕ್ರೀಯಾಶೀಲರಾಗಬೇಕು ಹಾಗೂ ಎಲ್ಲಾ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ನೀಡಿದಾಗ ಮಾತ್ರ ಉತ್ತಮ ಶಿಕ್ಷಕರರಾಗಲು ಸಾಧ್ಯ ಎಂದು ಹೇಳಿದರು.

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ಸಿಹಿ ಸುದ್ದಿ: ಇಂದು ಚಿನ್ನದ ದರದಲ್ಲಿ ಗಣನೀಯ ಇಳಿಕೆ!

(ನ್ಯೂಸ್‌ ಕಡಬ) newskadaba.com, ಸೆ.05 ಇಂದು ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಹಬ್ಬದ ಆಭರಣ ಖರೀದಿದಾರರಲ್ಲಿ ಹೊಸ ಉತ್ಸಾಹ ತಂದಿದೆ.. 24 ಕ್ಯಾರೆಟ್ದ ಬೆಲೆ ₹1,54,800 (₹1,860 ಇಳಿಕೆ) .22 ಕ್ಯಾರೆಟ್ ದ ಬೆಲೆ ₹1,41,900 (₹1,700 ಇಳಿಕೆ). 18 ಕ್ಯಾರೆಟ್ ದ ಬೆಲೆ ₹1,16,100 (₹1,390 ಇಳಿಕೆ)

ಚಿನ್ನದ ಪ್ರಿಯರಿಗೆ ಸಿಹಿ ಸುದ್ದಿ: ಇಂದು ಚಿನ್ನದ ದರದಲ್ಲಿ ಗಣನೀಯ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 7 ರಾಜ್ಯಗಳಲ್ಲಿ ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಸೆ.05. ಕೋರ್ಟ್‌ಗಳಲ್ಲಿ ನ್ಯಾಯಾಧೀಶರ ಕೊರತೆ ನೀಗಿಸಲು ಹಾಗೂ ಅನುಭವಿ ಜಡ್ಜ್‌ಗಳ ಸೇವೆಯನ್ನು ಬಳಸಿಕೊಳ್ಳಲು ದೇಶದ 7 ರಾಜ್ಯಗಳಲ್ಲಿ ಜಿಲ್ಲಾ ಮತ್ತು ಕೆಳ ಹಂತದ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ಹೆಚ್ಚಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ವಯೋಮಿತಿ ಏರಿಕೆ ಎಲ್ಲರಿಗೂ ನೇರವಾಗಿ ಅನ್ವಯಿಸುವುದಿಲ್ಲ. 60 ವರ್ಷ ತುಂಬಿದ ನಂತರ ನ್ಯಾಯಾಧೀಶರ ಕಾರ್ಯಕ್ಷಮತೆ, ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಆಯಾ ಹೈಕೋರ್ಟ್ ಮೌಲ್ಯಮಾಪನ ಮಾಡಿ, ಅರ್ಹರಿಗೆ ಮಾತ್ರ 2 ವರ್ಷಗಳ ಸೇವಾ

ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 7 ರಾಜ್ಯಗಳಲ್ಲಿ ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೋಕೂರು: ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com, ಸೆ.05. ಅಷ್ಟಮಿ ಆಚರಣೆಯ ಅಂಗವಾಗಿ ಶುಕ್ರವಾರ ತಡರಾತ್ರಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಆಚರಣೆಯ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮರಳಿದ್ದರು. ಸ್ಥಳೀಯ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ತೋಕೂರು: ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವಸಂಸ್ಥೆಯಲ್ಲಿ ಹೊಸ ‘ಈಕ್ವಲ್ ಅರ್ಥ್’ ಭೂಪಟ ಅಂಗೀಕಾರ: ಭಾರತ ಬೆಂಬಲ, ಅಮೆರಿಕ ವಿರೋಧ

(ನ್ಯೂಸ್‌ ಕಡಬ) newskadaba.com, ಸೆ.05. ವಿಶ್ವಸಂಸ್ಥೆಯ ಸಾಮಾನ್ಯ ಸಭೆ ‘ಈಕ್ವಲ್ ಅರ್ಥ್ ಪ್ರೊಜೆಕ್ಷನ್’ ಎಂಬ ನೂತನ ಭೂಪಟವನ್ನು ಅಳವಡಿಸಿಕೊಳ್ಳಲು ನಿರ್ಣಯ ಅಂಗೀಕರಿಸಿದೆ.ನಿರ್ಣಯದ ಪರವಾಗಿ ಭಾರತ ಸೇರಿದಂತೆ 164 ದೇಶಗಳು ಮತ ಚಲಾಯಿಸಿದರೆ, ಅಮೆರಿಕ ಮಾತ್ರ ವಿರುದ್ಧವಾಗಿ ಮತ ಹಾಕಿತು. 6 ದೇಶಗಳು ಮತದಾನದಿಂದ ದೂರ ಉಳಿದವು. 1569ರ ‘ಮೆರ್ಕೆಟರ್ ಪ್ರೊಜೆಕ್ಷನ್’ ಭೂಮಿಯ ನಿಜವಾದ ವಿಸ್ತೀರ್ಣಕ್ಕಿಂತ ಉತ್ತರ ಅಮೆರಿಕ ಹಾಗೂ ಯುರೋಪ್ ಖಂಡಗಳನ್ನು ದೊಡ್ಡದಾಗಿ ತೋರಿಸುತ್ತಿತ್ತು.ಹಳೆಯ ನಕ್ಷೆಯಲ್ಲಿ ಗ್ರೀನ್‌ಲ್ಯಾಂಡ್ ಮತ್ತು ಆಫ್ರಿಕಾ ಒಂದೇ ಗಾತ್ರದಲ್ಲಿ ಕಾಣಿಸುತ್ತಿದ್ದವು. ಆದರೆ ನೈಜವಾಗಿ

ವಿಶ್ವಸಂಸ್ಥೆಯಲ್ಲಿ ಹೊಸ ‘ಈಕ್ವಲ್ ಅರ್ಥ್’ ಭೂಪಟ ಅಂಗೀಕಾರ: ಭಾರತ ಬೆಂಬಲ, ಅಮೆರಿಕ ವಿರೋಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

NITK ಸುರತ್ಕಲ್‌ನಲ್ಲಿ ಹಣ ದುರುಪಯೋಗ: ಇಬ್ಬರು ಬೋಧಕರು ಪೊಲೀಸ್ ವಶಕ್ಕೆ

  ಮಂಗಳೂರಿನ NITK ಸುರತ್ಕಲ್ ಸಂಸ್ಥೆಯ ಇಬ್ಬರು ಅಧ್ಯಾಪಕರು ಸಂಸ್ಥೆಯ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ನಡೆಸಿದ ಆಂತರಿಕ ವಿಚಾರಣೆಯಲ್ಲಿ ಹಣಕಾಸಿನ ಅಕ್ರಮ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೇಳಿಕೆಯಂತೆ, ಸಾರ್ವಜನಿಕ ಸೇವಕರ ನಂಬಿಕೆದ್ರೋಹ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರೂ ಬೋಧಕರನ್ನು ವಶಕ್ಕೆ ಪಡೆಯಲಾಗಿದೆ. ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ

NITK ಸುರತ್ಕಲ್‌ನಲ್ಲಿ ಹಣ ದುರುಪಯೋಗ: ಇಬ್ಬರು ಬೋಧಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ

(ನ್ಯೂಸ್‌ ಕಡಬ) newskadaba.com, ಸೆ.05. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಭಾಗದಲ್ಲಿದ್ದ ಕಾಣಿಕೆ ಹುಂಡಿಯನ್ನು ಇತ್ತೀಚೆಗೆ ಕಳವು ಮಾಡಲಾಗಿತ್ತು.ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಕೇರಳದ ಕಾಸರಗೋಡು ನಿವಾಸಿ ಹಾಗೂ ಅಂತಾರಾಜ್ಯ ಕಳ್ಳ ಸತೀಶ್ (31) ಎಂಬಾತನನ್ನು ಬಂಧಿಸಿದ್ದಾರೆ. ಕಳುವಾಗಿದ್ದ ಕಾಣಿಕೆ ಹುಂಡಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆಗಸ್ಟ್ 24ರ ರಾತ್ರಿ ಹುಂಡಿ ಕಳವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಅನುಮಾನಾಸ್ಪದ ಮೃತ್ಯು: ಕೊಲೆ ಶಂಕೆ

(ನ್ಯೂಸ್‌ ಕಡಬ) newskadaba.com, ಸೆ.05. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಹೊಸಂಗಡಿಯ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ (ಕ್ವಾರ್ಟರ್ಸ್) ಈ ಘಟನೆ ನಡೆದಿದೆ. ಕೆಲಸ ಮುಗಿಸಿ ಬಂದ ಇತರ ಕಾರ್ಮಿಕರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದ್ಯಪಾನದ ವೇಳೆ ನಡೆದ ಗಲಾಟೆಯೇ ಕೊಲೆಗೆ

ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಅನುಮಾನಾಸ್ಪದ ಮೃತ್ಯು: ಕೊಲೆ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top