ಕರಾವಳಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಮೇ.23”   ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಇಲಾಖೆ ಡಿಜಿಟಲ್ ಮಾರ್ಕ್ಸ್‌ವಣ್ ಪತ್ರ ವ್ಯವಸ್ಥೆ ಜಾರಿಗೆ ಮುಂದಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಸೇರಿದಂತೆ ವಿವಿಧ ತರಗತಿಗಳ ಅಂಕಪಟ್ಟಿಗಳಿಗೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತಿದ್ದು, ಇದರಿಂದ ದಾಖಲೆಗಳ ಅಸಲಿತನವನ್ನು ತಕ್ಷಣವೇ ಪರಿಶೀಲಿಸಬಹುದಾಗಿದೆ. ನಕಲಿ ಅಂಕಪಟ್ಟಿ ತಡೆಗಟ್ಟುವ ಜೊತೆಗೆ ವಿದ್ಯಾರ್ಥಿಗಳಿಗೆ ಸುರಕ್ಷಿತ ಡಿಜಿಟಲ್ ದಾಖಲೆ ವ್ಯವಸ್ಥೆ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.. ಇದೇ ವೇಳೆ, ವಿದ್ಯಾರ್ಥಿಗಳ ದಾಖಲೆಗಳನ್ನು […]

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಮೇ. 23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ಕದ್ರಿ ಸಮಾಜ ಕಲ್ಯಾಣ ಇಲಾಖೆ  ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ

ಬಂಟ್ವಾಳ:ಇರ್ಫಾನ್ ಮೃತದೇಹ ಪತ್ತೆ ಪ್ರಕರಣ ಸಮಗ್ರ ತನಿಖೆಗೆ ಎಸ್ಡಿಪಿಐ ಆಗ್ರಹ

(ನ್ಯೂಸ್‌ ಕಡಬ) newskadaba.com ಮೇ. 23. ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರಪೇಟೆ ಸಮೀಪ ನೇತ್ರಾವತಿ ನದಿಯ ಹೊಸ ಸೇತುವೆಯಡಿಯಲ್ಲಿ ಸ್ಥಳೀಯ ಯುವಕ ಇರ್ಫಾನ್ ಅವರ ಮೃತದೇಹ ಪತ್ತೆಯಾಗಿರುವ ಘಟನೆ ಅತ್ಯಂತ ದುಃಖಕರ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿರುವ ಸಂಗತಿಯಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.   ಮೃತ ಇರ್ಫಾನ್ (37) ಅವರು ಗೂಡಿನಬಳಿ

ಬಂಟ್ವಾಳ:ಇರ್ಫಾನ್ ಮೃತದೇಹ ಪತ್ತೆ ಪ್ರಕರಣ ಸಮಗ್ರ ತನಿಖೆಗೆ ಎಸ್ಡಿಪಿಐ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com ಮಂಗಳೂರು, ಮೇ. 23. ರಾ. ಹೆ. 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಮೇ. 23. ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ Read More »

ಕರಾವಳಿ, ಸಿನಿಮಾ

ಇಂದಿನ ಚಿನ್ನದ ದರ ಇಲ್ಲಿದೆ ನೋಡಿ

(ನ್ಯೂಸ್‌ ಕಡಬ) newskadaba.com,  ಮೇ.23: ಅಮೆರಿಕ- ಹಾಗೂ ಇರಾನ್ ಸಂಘರ್ಷ ಹಿನ್ನೆಲೆ, ಕಚ್ಚಾ ತೈಲ ಬೆಲೆ ಏರುತ್ತಲೇ ಇದ್ದು, ಹಣದುಬ್ಬರದ ಭೀತಿ ಹೆಚ್ಚಾಗಿದೆ. ಪರಿಣಾಮವಾಗಿ ಅಮೂಲ್ಯ ಲೋಹಗಳ ಬೆಲೆ ಮೇಲೆ ಒತ್ತಡ ಸೃಷ್ಟಿಯಾಗಿದ್ದು, ಚಿನ್ನದ ಬೆಲೆಯಲ್ಲಿ ಕಡಿತ ಆಗಿದೆ… ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಮೇ 23 2026 ಶನಿವಾರದಂದು, 24 ಕ್ಯಾರೆಟ್ 10 ಗ್ರಾಂ ನಲ್ಲಿ 430 ರೂ ಇಳಿಕೆ ಆಗಿ 1,59,060 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 43

ಇಂದಿನ ಚಿನ್ನದ ದರ ಇಲ್ಲಿದೆ ನೋಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.23: ಶನಿವಾರ ಬೆಳಗ್ಗೆ ಪ್ರತಿ ಲೀಟರ್‌ ಪೆಟ್ರೋಲ್‌ ದರ 87 ಪೈಸೆ ಮತ್ತು ಡೀಸೆಲ್ ದರ 91 ಪೈಸೆ ಮತ್ತೆ ಏರಿಕೆಯಾದ ಕಲವೇ ಕ್ಷಣದಲ್ಲಿ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‌ಜಿ) ದರವನ್ನು(CNG Price Hiked) ಪ್ರತಿ ಕೆ.ಜಿಗೆ ಮತ್ತೆ ₹1ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರವು ಕೂಡ ತಕ್ಷಣದಿಂದಲೇ ಜಾರಿಗೆ ಬಂದಿದೆ. ಇದು ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಅಡೆತಡೆಗಳಿಗೆ ಸಂಬಂಧಿಸಿದ ಜಾಗತಿಕ ಇಂಧನ ಬೆಲೆಗಳ ಏರಿಕೆಯ ಮಧ್ಯೆ 10

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ತೆರೆ ಎಳೆದ ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ಮೇ.23: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದಿಪ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳಿಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. “ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ನನ್ನ ಗಮನಕ್ಕೆ ಬಂದ ತಕ್ಷಣವೇ ಕಾರಾಗೃಹದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ವಿಷಯ ಇಲ್ಲ”

ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ತೆರೆ ಎಳೆದ ಗೃಹ ಸಚಿವ ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು

(ನ್ಯೂಸ್‌ ಕಡಬ) newskadaba.com,  ಮೇ.23: ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ನಡೆದಿದೆ…. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ

ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ದಕ ಜಿಲ್ಲಾಡಳಿತ ಶ್ರದ್ಧಾಂಜಲಿ

(ನ್ಯೂಸ್‌ ಕಡಬ) newskadaba.com,  ಮೇ.22: 2010 ರ ಮೇ 22 ರಂದು ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸ್ಮರಣಾರ್ಥ ಜಿಲ್ಲಾಡಳಿತ ವತಿಯಿಂದ ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಶುಕ್ರವಾರ ನಡೆಯಿತು. ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ. ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ದಕ ಜಿಲ್ಲಾಡಳಿತ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top