ಕರಾವಳಿ

ಸೌದಿ ಅರೇಬಿಯಾ- ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ..! ➤ ಆರೋಗ್ಯ ಇಲಾಖೆಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜಿದ್ದಾ, ಡಿ. 01. ಕೊರೋನಾ ರೂಪಾಂತರಿ ತಳಿ ಒಮಿಕ್ರಾನ್ ಮೊದಲ ಪ್ರಕರಣವನ್ನು ಪತ್ತೆ ಹಚ್ಚಿರುವುದಾಗಿ ಸೌದಿ ಅರೇಬಿಯಾ ಆರೋಗ್ಯ ಇಲಾಖೆ ಬಹಧವಾರದಂದು ತಿಳಿಸಿದೆ. ಉತ್ತರ ಆಫ್ರಿಕಾದ ನಾಗರಿಕನ ಮೂಲಕ ಪ್ರಕರಣ ಬೆಳಕಿಗೆ ಬಂದಿದ್ದು, ಆತನನ್ನು ಮತ್ತು ಆತನ ನಿಕಟ ಸಂಪರ್ಕದಲ್ಲಿ ಇರುವವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.    

ಸೌದಿ ಅರೇಬಿಯಾ- ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ..! ➤ ಆರೋಗ್ಯ ಇಲಾಖೆಯ ಸ್ಪಷ್ಟನೆ Read More »

ಕರಾವಳಿ

Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 01. ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸ್ನಾನಕ್ಕೆಂದ ನೀರಿಗಿಳಿದ ಯುವಕ ಕಣ್ಮರೆಯಾಗಿದ್ದು, ಯುವಕನ ಪತ್ತೆಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ‌.

Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಿ. 08, 09ರಂದು ರಾಜ್ಯ ಆಹಾರ ಆಯೋಗ ಅಧ್ಯಕ್ಷ ಎಚ್.ವಿ.ಶಿವಶಂಕರ್ ದ.ಕ. ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಎಚ್.ವಿ. ಶಿವಶಂಕರ್ ಅವರು 2021ರ ಡಿಸೆಂಬರ್ 8 ಹಾಗೂ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸ ಕಾರ್ಯಕ್ರಮಗಳ ವಿವರ ಇಂತಿವೆ: ಡಿಸೆಂಬರ್ 8ರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 9ರ ಬೆಳಿಗ್ಗೆ 8 ರಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪಡಿತರ ಕಾರ್ಡುದಾರರಿಗೆ ಪಡಿತರ ಆಹಾರ ಧಾನ್ಯಗಳ ವಿತರಣೆ, ಅಂಗನವಾಡಿಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯ

ಡಿ. 08, 09ರಂದು ರಾಜ್ಯ ಆಹಾರ ಆಯೋಗ ಅಧ್ಯಕ್ಷ ಎಚ್.ವಿ.ಶಿವಶಂಕರ್ ದ.ಕ. ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಶ್ವ ವಿದ್ಯಾನಿಲಯ- ಸರಕಾರಿ ಕೋಟಾ ಸೀಟುಗಳಿಗೆ ಅರ್ಜಿ ಸಲ್ಲಿಕೆಯ‌ ಅವಧಿ‌ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ನವೆಂಬರ್ 30ರಿಂದ ಡಿಸೆಂಬರ್ 9ರ ವರೆಗೆ

ಮಂಗಳೂರು ವಿಶ್ವ ವಿದ್ಯಾನಿಲಯ- ಸರಕಾರಿ ಕೋಟಾ ಸೀಟುಗಳಿಗೆ ಅರ್ಜಿ ಸಲ್ಲಿಕೆಯ‌ ಅವಧಿ‌ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಅಕಾಲಿಕ ಮಳೆಯಿಂದಾಗಿ ಬೆಳೆಹಾನಿ ಉಂಟಾದಲ್ಲಿ ವಿಮಾ ಸಂಸ್ಥೆಗೆ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ಹಲವೆಡೆ ಬೆಳೆಹಾನಿ ಸಂಭವಿಸುತ್ತಿದೆ. ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿದ ರೈತರಿಗೆ ಬೆಳೆ ಹಾನಿ ಸಂಭವಿಸಿದ್ದಲ್ಲಿ ಪರಿಹಾರ ನೀಡಲು ಅವಕಾಶವಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಭತ್ತ(ಮಳೆ ಆಶ್ರಿತ) ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಬೆಳೆಯಾಗಿರುತ್ತದೆ. ಪ್ರಸ್ತುತ ಮುಂಗಾರು ಹಂಗಾಮಿನ ಭತ್ತದ ಬೆಳೆಯು ಕಟಾವು ಹಂತದಲ್ಲಿದ್ದು, ಈ ಯೋಜನೆಯಡಿ ನೋಂದಣಿ/ ವಿಮೆ ಮಾಡಲಾದ ರೈತರ ಜಮೀನಿನಲ್ಲಿ ಮಳೆಯಿಂದಾಗಿ

ಅಕಾಲಿಕ ಮಳೆಯಿಂದಾಗಿ ಬೆಳೆಹಾನಿ ಉಂಟಾದಲ್ಲಿ ವಿಮಾ ಸಂಸ್ಥೆಗೆ ಮಾಹಿತಿ ನೀಡಲು ಮನವಿ Read More »

ಕರಾವಳಿ, ಕರ್ನಾಟಕ

ಕಡಬ: ಡಿ. 04ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಡಬ ತಾಲೂಕಿನ ತಾಲೂಕು ಯುವಜನ ಒಕ್ಕೂಟ, ಸವಣೂರಿನ ಸವಣೂರು ಯುವಕ ಮಂಡಲ ಹಾಗೂ ವಿದ್ಯಾರಶ್ಮಿ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ 2021ರ ಡಿಸೆಂಬರ್ 4ರಂದು ಬೆಳಗ್ಗೆ 9.30ಕ್ಕೆ ಕಡಬ ತಾಲೂಕಿನ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಜನಪದ ನೃತ್ಯ, ಜನಪದ ಹಾಡು, ಏಕಪಾತ್ರಾಭಿನಯ, ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ವಾದ್ಯ, ಹಾರ್ಮೋನಿಯಂ, ಗಿಟಾರ್ ವಾದನ,

ಕಡಬ: ಡಿ. 04ರಂದು ಜಿಲ್ಲಾ ಮಟ್ಟದ ಯುವಜನೋತ್ಸವ Read More »

ಕರಾವಳಿ, ಕರ್ನಾಟಕ

ಕೋವಿಡ್ ನಿರ್ಬಂಧ ಹಿನ್ನೆಲೆ ➤ ಭಾರತ ಸೇರಿದಂತೆ ಹಲವು ದೇಶಗಳ ಪ್ರಯಾಣ ನಿಷೇಧವನ್ನು ಹಿಂಪಡೆದ ಸೌದಿ ಸರಕಾರ..!

(ನ್ಯೂಸ್ ಕಡಬ) newskadaba.com ರಿಯಾದ್, ಡಿ. 01. ಕೊರೋನಾ ಸಾಂಕ್ರಾಮಿಕ ಹಿನ್ನೆಲೆ ಸೌದಿ ಅರೇಬಿಯಾ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೇರಿದ್ದ ನಿಷೇಧವನ್ನು ಬುಧವಾರದಂದು ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಈಜಿಫ್ಟ್, ಭಾರತ, ಪಾಕಿಸ್ತಾನ, ಇಂಡೋನೇಷ್ಯಾ, ಬ್ರೆಝಿಲ್ ಹಾಗೂ ವಿಯೆಟ್ನಾಂ ರಾಷ್ಟ್ರಗಳ ಪ್ರಯಾಣಿಕರು ಸೌದಿ ಪ್ರವೇಶಿಸುವ ಮುನ್ನ 14 ದಿನಗಳ ಕಾಲ ಕ್ವಾರಂಟೈನ್ ಇಲ್ಲದೆಯೇ ತಲುಪಬಹುದು. ಸೌದಿ ಪ್ರಯಾಣಿಸುವವರಿಗೆ ಆರೋಗ್ಯ ಇಲಾಖೆಯಿಂದ ಮಾನ್ಯತೆ ಪಡೆದ PCR ಪ್ರಮಾಣಪತ್ರ ಕಡ್ಡಾಯವಾಗಲಿದೆ ಮತ್ತು ಪ್ರಯಾಣದ 72 ಗಂಟೆಗಳ ಮೊದಲು ಆನ್

ಕೋವಿಡ್ ನಿರ್ಬಂಧ ಹಿನ್ನೆಲೆ ➤ ಭಾರತ ಸೇರಿದಂತೆ ಹಲವು ದೇಶಗಳ ಪ್ರಯಾಣ ನಿಷೇಧವನ್ನು ಹಿಂಪಡೆದ ಸೌದಿ ಸರಕಾರ..! Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ‌ ದೌರ್ಜನ್ಯ ➤ ಆರೋಪಿ ರೌಡಿಶೀಟರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರೌಡಿಶೀಟರ್ ತಂದೆಯನ್ನೇ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ತಂದೆ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಒಂದನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಅಲ್ಲದೇ ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ‌ ದೌರ್ಜನ್ಯ ➤ ಆರೋಪಿ ರೌಡಿಶೀಟರ್ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಚಾಲಕನಿಗೆ ಜಾತಿ ನಿಂದನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 01. ಬುಡಕಟ್ಟು ಸಮುದಾಯದ ವ್ಯಕ್ತಿ ಪ್ರವೀಣ ಎಂಬವರಿಗೆ ಮುನೀರ್ ಎಂಬಾತ ಜಾತಿ ನಿಂದನೆ ಮಾಡಿರುವ ಕುರಿತು ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಕ್ಷಾ ಚಾಲಕನಾಗಿರುವ ಪ್ರವೀಣ್ ಅವರು ನ. 28ರಂದು ಉಡುಪಿಯ ಜಾಮಿಯಾ ಮಸೀದಿ ಬಳಿ ರಿಕ್ಷಾ ನಿಲ್ಲಿಸಿ ಗ್ರಾಹಕರಿಗಾಗಿ ಕಾಯುತ್ತಿದ್ದ ವೇಳೆ, ಮುನೀರ್ ಎಂಬಾತ ತನ್ನ ರಿಕ್ಷಾದಲ್ಲಿ ಬಂದು ಪ್ರವೀಣ್ ಅವರ ರಿಕ್ಷಾಗೆ ಅಡ್ಡ ನಿಲ್ಲಿಸಿ ‘ರಿಕ್ಷಾ ತೆಗಿ, ನಿಮಗೆ ಇಲ್ಲಿ ನಿಲ್ಲಿಸಲು ಯಾರು ಹೇಳಿದ್ದು, ನೀನು ಕೊರಗ

ರಿಕ್ಷಾ ಚಾಲಕನಿಗೆ ಜಾತಿ ನಿಂದನೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ವರದಿ ನೆಗೆಟಿವ್ ಬಂದರೂ ಕ್ವಾರಂಟೈನ್ ಕಡ್ಡಾಯ..! ➤ ಸಚಿವ ಸುಧಾಕರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 01. ಹೊಸ ರೂಪಾಂತರಿ ಒಮಿಕ್ರಾನ್ ಭೀತಿಯ ಹಿನ್ನೆಲೆ ವಿದೇಶದಿಂದ ಬರುವ ಎಲ್ಲರಿಗೂ ಇಂದಿನಿಂದ‌ ವಿಮಾನ ನಿಲ್ದಾಣಗಳಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.   ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಡಿರುವ ಸಿದ್ದತೆಗಳನ್ನು ಪರಿಶೀಲನೆ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರ್ಟಿಪಿಸಿಆರ್ ಟೆಸ್ಟ್ ನಿಂದ ಪಾಸಿಟಿವ್ ಬಂದವರಿಗೆ ನೇರವಾಗಿ ಐಸೋಲೇಷನ್ ವಾರ್ಡ್ ಗೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ನೆಗೆಟಿವ್ ವರದಿ ಬಂದರೆ

ಕೊರೋನಾ ವರದಿ ನೆಗೆಟಿವ್ ಬಂದರೂ ಕ್ವಾರಂಟೈನ್ ಕಡ್ಡಾಯ..! ➤ ಸಚಿವ ಸುಧಾಕರ್ ಸ್ಪಷ್ಟನೆ Read More »

ಕರಾವಳಿ
Scroll to Top