ಕರಾವಳಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅಪರಿಚಿತ ವ್ಯಕ್ತಿಯಿಂದ ಕಿರುಕುಳ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಸ್ಕೂಟರಿನಲ್ಲಿ ಬಂದ ವ್ಯಕ್ತಿಯೋರ್ವ ಲೈಂಗಿಕ ಕುರುಕುಳ ನೀಡಿದ ಘಟನೆ ತಲಪಾಡಿಯ ಆಲಂಕಾರುಗುಡ್ಡೆ ಎಂಬಲ್ಲಿ ನಡೆದಿದೆ. ಕೋಟೆಕಾರು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ಬರುತ್ತಿದ್ದ ವೇಳೆ ಸ್ಕೂಟರ್ ನಲ್ಲಿ ಬಂದ ವ್ಯಕ್ತಿಯೋರ್ವ ಕಿರುಕುಳ ನೀಡಿದ್ದು, ಇದರಿಂದ ಹೆದರಿದ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು, ಸ್ಥಳೀಯರು ಬರುವಷ್ಟರಲ್ಲೇ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ. ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಸ್ಥಳೀಯರು […]

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅಪರಿಚಿತ ವ್ಯಕ್ತಿಯಿಂದ ಕಿರುಕುಳ..! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಚಂಪಾಷಷ್ಟಿ ಪ್ರಯುಕ್ತ ಮೂಲಮೃತ್ತಿಕಾ ಪ್ರಸಾದ ವಿತರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 01. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಯ ಚಂಪಾಷಷ್ಟಿ ಮಹೋತ್ಸವದ ಪ್ರಯುಕ್ತ ಕ್ಷೇತ್ರ ಮೂಲಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕ ವೇ/ ಮೂ/ ಸೀತಾರಾಮ ಎಡಪಡಿತ್ತಾಯ ಅವರು ವೈದಿಕ ವಿಧಿ ವಿಧಾನಗಳೊಂದಿಗೆ ಮೂಲ ಪ್ರಸಾದವನ್ನು ತೆಗೆದು, ಬಳಿಕ ಪುರೋಹಿತರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಜ, ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡಲಾಯಿತು. ಅಪರಾಹ್ನ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ

ಸುಬ್ರಹ್ಮಣ್ಯ: ಚಂಪಾಷಷ್ಟಿ ಪ್ರಯುಕ್ತ ಮೂಲಮೃತ್ತಿಕಾ ಪ್ರಸಾದ ವಿತರಣೆ Read More »

ಕರಾವಳಿ, ಕರ್ನಾಟಕ

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ➤ ಎಸ್ಡಿಪಿಐ ವತಿಯಿಂದ ಸವಣೂರಿನಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಡಿ. 01. ದ.ಕ ವಿಧಾನಪರಿಷತ್ ಚುನಾವಣಾ ಅಂಗವಾಗಿ ಎಸ್ಡಿಪಿಐ ಸುಳ್ಯ ಕ್ಷೇತ್ರದ ವತಿಯಿಂದ ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆಯವರ ಪರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಸಭೆ ನಡೆಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಅಭ್ಯರ್ಥಿ ಶಾಫಿ ಬೆಳ್ಳಾರೆ, ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಮಜೀದ್ ಖಾನ್ ಸುಳ್ಯ, ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಉಪಾಧ್ಯಕ್ಷ ಬಾಬು ಸವಣೂರು ಮೊದಲಾದವರು ಉಪಸ್ಥಿತರಿದ್ದರು.  

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ➤ ಎಸ್ಡಿಪಿಐ ವತಿಯಿಂದ ಸವಣೂರಿನಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ‘ಜನಾರೋಗ್ಯವೇ ರಾಷ್ಟ್ರ ಶಕ್ತಿ’ ಅಭಿಯಾನದಡಿ ಪಿಎಫ್ಐ ವತಿಯಿಂದ ಉಜಿರೆಯಲ್ಲಿ ಮ್ಯಾರಥಾನ್ ಹಾಗೂ ದೈಹಿಕ ಕಸರತ್ತು ಪ್ರದರ್ಶನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 01. “ಜನಾರೋಗ್ಯವೇ ರಾಷ್ಟ್ರಶಕ್ತಿ” ರಾಷ್ಟ್ರೀಯ ಆರೋಗ್ಯ ಜಾಗೃತಿ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಮ್ಯಾರಥಾನ್ ಓಟ ಮತ್ತು ದೈಹಿಕ ಕಸರತ್ತು ಪ್ರದರ್ಶನ ಕಾರ್ಯಕ್ರಮ ಉಜಿರೆಯಲ್ಲಿ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಸ್ ಎಂ ಕೋಯಾ ಮತ್ತು ಪತ್ರಕರ್ತ ಅಶ್ರಫ್ ಅಲಿಕುಂಞಿಯವರ ಜತೆಗೂಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಉಜಿರೆ ಡಿವಿಷನ್ ಅಧ್ಯಕ್ಷರಾದ ಮಹಮ್ಮದ್ ಅಲಿಯವರು ಕರೀಂ ಜಿ.ಕೆ.ಯವರಿಗೆ

ಬೆಳ್ತಂಗಡಿ: ‘ಜನಾರೋಗ್ಯವೇ ರಾಷ್ಟ್ರ ಶಕ್ತಿ’ ಅಭಿಯಾನದಡಿ ಪಿಎಫ್ಐ ವತಿಯಿಂದ ಉಜಿರೆಯಲ್ಲಿ ಮ್ಯಾರಥಾನ್ ಹಾಗೂ ದೈಹಿಕ ಕಸರತ್ತು ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಕಾಲುಜಾರಿ ನೀರಿಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಮೀನುಗಾರಿಕಾ ಬೋಟ್ ನಲ್ಲಿ ಮೀನುಗಾರಿಕೆಗೆಂದು ತೆರಳಿದ್ದ ಕಾರ್ಮಿಕನೋರ್ವ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬಂದರ್ ದಕ್ಕೆಯಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮೀನುಗಾರಿಕೆಗೆಂದು ಬೋಟ್ ನಲ್ಲಿ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಸುತ್ತಲೂ ಹುಡುಕಾಡಿದರೂ ಅವರು ಪತ್ತೆಯಾಗಿರಲಿಲ್ಲ. ಇಂದು (ಡಿ.01) ಬೆಳಗ್ಗೆ ಅಪ್ಪಯ್ಯ ಅವರ ಮೃತದೇಹವು ಬಂದರು ದಕ್ಕೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಕಾಲುಜಾರಿ ನೀರಿಗೆ ಬಿದ್ದು ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೂಜೆಗೆ ಕರಿಮಣಿ ಸರ ಇಟ್ಟು ಮಹಿಳೆಗೆ ವಂಚಿಸಿದ ಜ್ಯೋತಿಷಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಪೂಜಾ ಸಂದರ್ಭದಲ್ಲಿ ಕಲಶಕ್ಕೆಂದು ಇಡಲಾಗಿದ್ದ ಕರಿಮಣಿ ಸರವೊಂದನ್ನು ವಾಪಸು ನೀಡದೇ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿನ ಕಷ್ಟ ಪರಿಹಾರಕ್ಕೆಂದು ಮಹಿಳೆಯೋರ್ವರು ಅ. 13 ರಂದು ಕುಂಜತ್ ಬೈಲಿನಲ್ಲಿರುವ ಜ್ಯೋತಿಷಿ ವಿನೋದ್ ಪೂಜಾರಿ ಎಂಬವರ ಬಳಿ ಹೋಗಿದ್ದರು. ಈ ಸಂದರ್ಭ ವಿನೋದ್ ಪೂಜಾರಿ, ನಿಮಗೆ ತುಂಬಾ ದೋಷವಿದ್ದು, ಆ ದೋಷದಿಂದ ಮುಕ್ತಿ ಹೊಂದಲು ಪೂಜೆ ಮಾಡಿಸಿಕೊಡುತ್ತೇನೆ. ಪೂಜೆಯ ಸಮಯ ಕಲಶಕ್ಕೆ ಇಡಲು

ಪೂಜೆಗೆ ಕರಿಮಣಿ ಸರ ಇಟ್ಟು ಮಹಿಳೆಗೆ ವಂಚಿಸಿದ ಜ್ಯೋತಿಷಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿ ಪೆರಾಜೆಗೆ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ವಿಧಾನಪರಿಷತ್ ಚುನಾವಣೆಯ ಅಂಗವಾಗಿ ಕೊಡಗು ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರ ಪರವಾಗಿ ಮಂಗಳವಾರದಂದು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಭೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ರಾಬಿನ್ ದೇವಯ್ಯ, ಬಿಜೆಪಿ ತಾಲೂಕ್ ಅಧ್ಯಕ್ಷರಾದ ಕಾಂಗಿರ ಸತೀಶ್, ಜಿಲ್ಲಾ ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ,

ವಿಧಾನಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿ ಪೆರಾಜೆಗೆ ಭೇಟಿ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಅಟೋರಿಕ್ಷಾ ಲಾರಿ ನಡುವೆ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿ‌ನಂಗಡಿ, ಡಿ. 01. ಲಾರಿ ಹಾಗೂ ರಿಕ್ಷಾ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟ ಘಟನೆ ವರದಿಯಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಮಹಿಳೆಯನ್ನು ಬೆಂಗರೆ ನಿವಾಸಿ ಖತೀಜಮ್ಮ ಎಂದು ಗುರುತಿಸಲಾಗಿದೆ. ನ.29ರಂದು ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿದ್ದರು.

ಉಪ್ಪಿನಂಗಡಿ: ಅಟೋರಿಕ್ಷಾ ಲಾರಿ ನಡುವೆ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಅರಂತೋಡು ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎನ್ನಲಾಗಿದೆ.

ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top