ಕರಾವಳಿ

ನೆಲ್ಯಾಡಿಯಲ್ಲಿ ಮತ್ತೆ ಕಳ್ಳರ ಕೈಚಳಕ ➤ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.18. ವಾರದ ಹಿಂದಷ್ಟೇ ಸರಣಿ ಕಳ್ಳತನದಿಂದ ಹೈರಾಣಾಗಿದ್ದ ನೆಲ್ಯಾಡಿಯಲ್ಲಿ ಇಂದು ಮತ್ತೆ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ತಡರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಗುಜರಿ ಅಂಗಡಿಯ ಬಾಗಿಲು ನುರಿದು ಒಳನುಗ್ಗಿರುವ ಕಳ್ಳರು ಸ್ವತ್ತುಗಳನ್ನು ಕಳವುಗೈದಿದ್ದಾರೆ. ಇದನ್ನು ಗಮನಿಸಿದ ಅಲ್ಲಿದ್ದವರು ಸ್ಥಳಕ್ಕಾಗಮಿಸಿದ ವೇಳೆ ಪಿಕಪ್ ವಾಹನದಲ್ಲಿ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ನೆಲ್ಯಾಡಿಯಲ್ಲಿ ಮತ್ತೆ ಕಳ್ಳರ ಕೈಚಳಕ ➤ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ನ.17. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶರಣ್ ಪಂಪ್ ವೆಲ್ ಕ್ಷಮೆ ಯಾಚಿಸದಿದ್ದರೆ ಪ್ರತಿಭಟನೆ ➤ ಬಿರುವೆರ್ ಕುಡ್ಲ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 17. ನಾಳೆಯೊಳಗೆ ಶರಣ್ ಪಂಪ್ವೆಲ್ ಕ್ಷಮೆ ಕೇಳದಿದ್ದರೆ ಬಳ್ಳಾಲ್ ಬಾಗ್ ನಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ. ಈ ಕುರಿತು ಉಡುಪಿ ಬಿರುವೆರ್ ಕುಡ್ಲ ಘಟಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದು, ಬಿರುವೆರ್ ಕುಡ್ಲ ಸಂಘಟನೆಯ ಹೆಸರು ಕೆಡಿಸಲು ಷಡ್ಯಂತ್ರ ನಡೆಯುತ್ತಿದ್ದು, ಸಂಘಟನೆಯ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗರ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಶರಣ್ ಪಂಪ್ವೆಲ್ ಪೂರ್ಣ ಮಾಹಿತಿ

ಶರಣ್ ಪಂಪ್ ವೆಲ್ ಕ್ಷಮೆ ಯಾಚಿಸದಿದ್ದರೆ ಪ್ರತಿಭಟನೆ ➤ ಬಿರುವೆರ್ ಕುಡ್ಲ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಏರ್ಪೋರ್ಟ್ ರನ್ ವೇಯಲ್ಲಿ ಕಾಡುಪ್ರಾಣಿ ಹಾವಳಿ..! ➤ ಆತಂಕದಲ್ಲಿ ಸಿಬ್ಬಂದಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿರತೆ ಹಾಗೂ ಇತರ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತು ಏರ್ಪೋರ್ಟ್ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ವಿಮಾನ ನಿಲ್ದಾಣದ ಸುತ್ತಲೂ ಬೋನ್ ಇರಿಸಲಾಗಿದೆ. ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ರನ್ ವೇ ಸುತ್ತಮುತ್ತ ಚಿರತೆಗಳು ಕಂಡುಬಂದಿದ್ದು, ಅಲ್ಲದೇ ನವಲಿ, ನರಿ ಹಾಗೂ ಹಕ್ಕಿಗಳ ಕಾಟವೂ ಹೆಚ್ಚಾಗಿದ್ದು, ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದಕ್ಕೆ ಸಂಬಂಧಿಸಿ ಅರಣ್ಯ ಇಲಾಖೆಯು ಕಾರ್ಯಾಚರಣೆ ಕೈಗೊಂಡಿದೆ.

ಮಂಗಳೂರು: ಏರ್ಪೋರ್ಟ್ ರನ್ ವೇಯಲ್ಲಿ ಕಾಡುಪ್ರಾಣಿ ಹಾವಳಿ..! ➤ ಆತಂಕದಲ್ಲಿ ಸಿಬ್ಬಂದಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಂತಿಮೊಗರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಶಾಂತಿಮೊಗರು, ನ. 17. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಶಾಂತಿಮೊಗರು ಎಂಬಲ್ಲಿ ನಡೆದಿದೆ. ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕ್ರೆಟಾ ಕಾರಿನ ಮಧ್ಯೆ ಅಪಫಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ನುಜ್ಜುಗುಜ್ಜಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ತಿಳಿದುಬಂದಿದೆ.      

ಶಾಂತಿಮೊಗರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ Read More »

ಕರಾವಳಿ

ಪುತ್ತೂರು: ಮೇಯಲು ಬಿಟ್ಟಿದ್ದ ದನ-ಕರುಗಳು ನಾಪತ್ತೆ ➤ ಕಾರಿನಲ್ಲಿ ಅಪಹರಿಸುತ್ತಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ ➤➤ ಗೋಕಳ್ಳರ ಪತ್ತೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 17. ಮೇಯಲು ಬಿಟ್ಟಿದ ದನ ಮತ್ತು ಎರಡು ಕರುಗಳನ್ನು ಅಪಹರಿಸಿರುವ ಘಟನೆ ಕೊಡಿಪ್ಪಾಡಿಯಲ್ಲಿ ನಡೆದಿದೆ. ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಲಕ್ಷ್ಮಣ ಗೌಡ ಎಂಬವರ ಒಂದು ದನ ಮತ್ತು ಎರಡು ಕರುವನ್ನು‌ ಅಲ್ಲಿನ ಸಮೀಪದ ಗುಡ್ಡೆಯಲ್ಲಿ ಮೇಯಲು ಬಿಟ್ಟಿದ್ದು, ದನ ಹಾಗೂ ಕರುಗಳು ವಾಪಸ್ ಬಾರದೇ ಇದ್ದ ಹಿನ್ನೆಲೆ ಹಲವೆಡೆ ಹುಡುಕಾಟ ನಡೆಸಲಾಗಿತ್ತು. ಎಲ್ಲಿಯೂ ಪತ್ತೆಯಾಗದ ನಿಟ್ಟಿನಲ್ಲಿ ಲಕ್ಷ್ಮಣ ಗೌಡರವರ ಪುತ್ರಿ ರಕ್ಷಿತಾರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ

ಪುತ್ತೂರು: ಮೇಯಲು ಬಿಟ್ಟಿದ್ದ ದನ-ಕರುಗಳು ನಾಪತ್ತೆ ➤ ಕಾರಿನಲ್ಲಿ ಅಪಹರಿಸುತ್ತಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ ➤➤ ಗೋಕಳ್ಳರ ಪತ್ತೆಗೆ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಷಷ್ಠೀ ಜಾತ್ರಾ ಮಹೋತ್ಸವ ಪೂರ್ವಭಾವಿ‌ ಸಭೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 17. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಪುತ್ತೂರು ಸಹಾಯ ಆಯುಕ್ತರಾದ ಯತೀಶ್ ಉಳ್ಳಾಲ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಇದರನ್ವಯ ನ. 30ರಂದು ಮೂಲ ಮೃತ್ತಿಕೆ ತೆಗೆಯುವ ಕಾರ್ಯಕ್ರಮ, ಡಿ.01 ರಂದು ಕೊಪ್ಪರಿಗೆ ಏರುವುದು, ಡಿ. 03ರಂದು ಲಕ್ಷ ದೀಪೋತ್ಸವ, ಡಿ. 07ರಂದು ಚೌತಿ, ಡಿ. 08ರಂದು ಪಂಚಮಿ, ಡಿ. 09ರಂದು ಮಹಾ ರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಷಷ್ಠೀ ಜಾತ್ರಾ ಮಹೋತ್ಸವ ಪೂರ್ವಭಾವಿ‌ ಸಭೆ Read More »

ಕರಾವಳಿ, ಕರ್ನಾಟಕ

ಎಡಮಂಗಲ: ನಾಯಿ ಅಡ್ಡಬಂದ ಪರಿಣಾಮ ಮಗುಚಿಬಿದ್ದ ಸ್ಕೂಟರ್ ➤ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ. 17. ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಪರಿಣಾಮ ಅಪಘಾತ ಸಂಭವಿಸಿ ಸಹಸವಾರ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಸುರೇಶ್ (53) ಎಂದು ಗುರುತಿಸಲಾಗಿದೆ. ಇವರು ಎಡಮಂಗಲದಿಂದ ಕೊಳಂಬೆ ಎಂಬಲ್ಲಿಗೆ ಟ್ಯಾಪಿಂಗ್ ಗೆ ಮಾಡಲು ತಮ್ಮ ಸಂತೋಷ್ ಎಂಬವರೊಂದಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಸುರೇಶ್ ಎಂಬವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ

ಎಡಮಂಗಲ: ನಾಯಿ ಅಡ್ಡಬಂದ ಪರಿಣಾಮ ಮಗುಚಿಬಿದ್ದ ಸ್ಕೂಟರ್ ➤ ಸಹಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬೈಕ್ ಲಾರಿ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 17. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ಸವಾರನನ್ನು ಮಂಗಳೂರು ನಿವಾಸಿ ಗಣೇಶ್(36) ಎಂದು ಗುರುತಿಸಲಾಗಿದೆ. ಗಣೇಶ್ ಅವರು ಬೈಕ್ ನಲ್ಲಿ ಮೆಲ್ಕಾರ್ ನಿಂದ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿಯು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.‌ ತಕ್ಷಣ ಅವರನ್ನು

ಬಂಟ್ವಾಳ: ಬೈಕ್ ಲಾರಿ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಸಿನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ನ. 17. ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸವಣೂರಿನಲ್ಲಿ ನಡೆದಿದೆ. ಮೃತರನ್ನು ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60 ವ.)ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ನ.15 ರಂದು ಸಂಜೆ ಸ್ನಾನಕ್ಕೆಂದು ಕಾಯಿಸಿಟ್ಟಿದ್ದ ಬಿಸಿನೀರಿನ ಪಾತ್ರೆಯನ್ನು ಎತ್ತಿಕೊಂಡು ಬಚ್ಚಲು ಕೋಣೆಗೆ ಒಯ್ಯುತ್ತಿದ್ದಾಗ ಆಕಸ್ಮಿಕವಾಗಿ ಬಿಸಿನೀರು ತುಂಬಿದ್ದ ಪಾತ್ರೆ ಕೈ ಹಿಡಿತದಿಂದ ಜಾರಿ ಬಿಸಿ

ಬಿಸಿನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top