ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 09. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮದ್ದಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ವೇಗವಾಗಿ ತೆರಳುತ್ತಿದ್ದ ಬಸ್ಸು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಪೊಲೀಸ್ ಠಾಣಾ ಕಾಮಗಾರಿ ಶೀಘ್ರವೇ ಪ್ರಾರಂಭ ➤ ಗೃಹ ಸಚಿವ ಅರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 09. ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಬಲವರ್ಧಿನೆಗೆ 100 ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು, ಹಾಗಯೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ಒಂದು ಕೋಟಿ ರೂಪಾಯಿಗಳನ್ನು ಅನುದಾನ ಇಡಲಾಗಿದೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಸೋಮವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿ, ಪೊಲೀಸರಿಗೆ 20-25ರ ಗೃಹ ಯೋಜನೆಯಲ್ಲಿ 2025ನೇ ಇಸವಿಯವರೆಗೆ ಹತ್ತು

ಸುಬ್ರಹ್ಮಣ್ಯ: ಪೊಲೀಸ್ ಠಾಣಾ ಕಾಮಗಾರಿ ಶೀಘ್ರವೇ ಪ್ರಾರಂಭ ➤ ಗೃಹ ಸಚಿವ ಅರಗ ಜ್ಞಾನೇಂದ್ರ Read More »

ಕರಾವಳಿ, ಕರ್ನಾಟಕ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಂ ಟೆಂಪೋ ಪಲ್ಟಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 09. ಚಾಲಕನ ನಿಯಂತ್ತಣ ತಪ್ಪಿದ ಐಸ್ ಕ್ರೀಂ ಟೆಂಪೊವೊಂದು ಪಲ್ಟಿಯಾದ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ತಿರುವಿನಲ್ಲಿ ನಡೆದಿದೆ. ಕೆಮ್ಮಾಯಿ ಸಮೀಪ ರಸ್ತೆ ಬಳಿ ಚರಂಡಿಯ ದುರಸ್ಥಿಕಾರ್ಯ ನಡೆಯುತ್ತಿದ್ದು, ಇದೇ ವೇಳೆ ಐಸ್ ಕ್ರೀಮ್ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಂ ಟೆಂಪೋ ಪಲ್ಟಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ನ. 09. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಸರಕಾರ ಹಾಕಿಕೊಂಡಿರುವ ಯೋಜನೆಗಳು ಸಮರ್ಪಕವಾಗಿ ತಲುಪಬೇಕು. ಆಗ ಮಾತ್ರ ಸಮುದಾಯದ ಅಭಿವೃದ್ಧಿಯಾಗಲು ಸಾಧ್ಯ ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರಿನ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ಅಂಬೇಡ್ಕರ್ ಭವನದಲ್ಲಿ ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಅಲ್ಲದೇ ಸಮುದಾಯದಲ್ಲಿ ಇನ್ನೂ ಶೋಷಣೆಗೆ ಒಳಗಾದವರಿದ್ದಾರೆ, ಅವರನ್ನು ಮೇಲೆತ್ತಬೇಕು. ಈ ನಿಟ್ಟಿನಲ್ಲಿ ಸವಲತ್ತುಗಳ

ಕಡಬ: ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಘಟಕ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮರಳುಗಾರಿಕೆಗೆ ವಿಶೇಷ ರಿಯಾಯಿತಿ ➤ ಗ್ರಾ.ಪಂ. ವ್ಯಾಪ್ತಿಯ ಮರಳುಗಾರಿಕೆಗೆ ಆಯಾ ಗ್ರಾ.ಪಂ. ಗಳಿಗೆ ಅಧಿಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 09. ಕಡಿಮೆ ದರದಲ್ಲಿ ಮರಳು ದೊರೆಯಲು ಹಾಗೂ ಮರಳುಗಾರಿಕೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ರಾಜ್ಯ ಸರ್ಕಾರವು ಹೊಸ ಮರಳು ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮರಳುಗಾರಿಕೆಗೆ ಸೋಮವಾರದಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಅನುಮತಿ ನೀಡಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಮರಳು ಮಾರಾಟಕ್ಕೆ ಒಂದು ಟನ್ ಗೆ 300 ರೂ. ಹಾಗೂ ನದಿ ಪಾತ್ರಗಳಲ್ಲಿ ಮರಳು ತೆಗೆದು ಮಾರಲು ಪ್ರತೀ ಟನ್ ಗೆ 700 ರೂ. ನಿಗದಿಗೊಳಿಸಲಾಗಿದೆ. ಗ್ರಾ.ಪಂ.

ಕರಾವಳಿಯಲ್ಲಿ ಮರಳುಗಾರಿಕೆಗೆ ವಿಶೇಷ ರಿಯಾಯಿತಿ ➤ ಗ್ರಾ.ಪಂ. ವ್ಯಾಪ್ತಿಯ ಮರಳುಗಾರಿಕೆಗೆ ಆಯಾ ಗ್ರಾ.ಪಂ. ಗಳಿಗೆ ಅಧಿಕಾರ Read More »

ಕರಾವಳಿ, ಕರ್ನಾಟಕ

ಮಂಗಳೂರು ತಲುಪಿದ ಹರೇಕಳ ಹಾಜಬ್ಬ ➤ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ನವದೆಹಲಿಯಲ್ಲಿ ಸೋಮವಾರದಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಮಂಗಳವಾರದಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು ತಲುಪಿದ ಹರೇಕಳ ಹಾಜಬ್ಬ ➤ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಶಿಕ್ಷಕರ ತರಬೇತಿ ಕೇಂದ್ರಕ್ಕೆ ನುಗ್ಗಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಆರೋಪಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯನ್ನು ಕುಂದಾಪುರ ಮೂಲದ ನವೀನ್(31) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮಾನಸಿಕ ತೊಂದರೆ ಹಿನ್ನೆಲೆ ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಈತ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಬೆಡ್ ಶೀಟ್ ಬಳಸಿ ಕಿಟಕಿಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಳೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ನ. 09. ಸಮೀಪದ ಕೊಕ್ಕರ್ಣೆ ಪೆಜಮಂಗೂರು ಗ್ರಾಮದ ಗುಂಡಾಲು ಕಿಂಡಿ‌ ಅಣೆಕಟ್ಟಿನ‌ ಬಳಿ ಸೀತಾ ನದಿಯಲ್ಲಿ ನವಜಾತ ಗಂಡು ಮಗುವಿನ‌ ಮೃತದೇಹವೊಂದು ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ನದಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ. ಈ ನವಜಾತ ಶಿಶುವಿನ ಮೃತದೇಹದಲ್ಲಿ ಹೊಕ್ಕುಳ ಬಳ್ಳಿ ಕೂಡಾ ಇದ್ದು, ಮಗುವಿನ‌ ತಲೆ‌ ಮತ್ತು ದೇಹದ ಕೆಲವೆಡೆ ಮೀನುಗಳು ತಿಂದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೊಳೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 09. ಹಳ್ಳ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲವಂತಿಗೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ಹಿರಿಮಾರು ನಿವಾಸಿ ಕಿನ್ನಿ ಗೌಡರ ಪುತ್ರ ಗಣೇಶ್ (40) ಎಂದು ಗುರುತಿಸಲಾಗಿದೆ. ಇವರು ತಮ್ಮ ತೋಟದಿಂದ ಅಡಕೆ ಹೆಕ್ಕಿ ಮರಳುವ ವೇಳೆ ಮಲ್ಲಕಜಕ್ಕೆ ಎಂಬಲ್ಲಿ ಹಳ್ಳ ದಾಟುವಾಗ ಕಾಲುಜಾರಿ ರಭಸವಾಗಿ ಹರಿಯುವ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದರು. ಬಳಿಕ ಸ್ಥಳೀಯರು ಶೋಧ ನಡೆಸಿ

ಬೆಳ್ತಂಗಡಿ: ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಿಗುರು ಕಲಾ ವೇದಿಕೆಯಿಂದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ➤ ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ- ಮಹಮ್ಮದ್ ಬಡ್ಡೂರು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಚಿಗುರು ಕಲಾ ವೇದಿಕೆ ಕರ್ನಾಟಕದ ವತಿಯಿಂದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ಮಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರು ಕಲಾ ವೇದಿಕೆ ಕರ್ನಾಟಕ ಸಂಚಾಲಕರಾದ ಆರಿಫ್ ಚಿಕ್ಕಮಗಳೂರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬಹುಭಾಷಾ ಕಲಾವಿದರಾದ ಮಹಮ್ಮದ್ ಬಡ್ಡೂರು ಮಾತನಾಡಿ, ಇಂದಿನ ನವ ತಲೆಮಾರಿನ ಯುವಕ- ಯುವತಿಯರಿಗೆ ಅದ್ಬುತವಾದ ಕೌಶಲ್ಯಗಳಿವೆ, ಆದರೆ ಅದನ್ನು ಸಮಾಜಕ್ಕೆ ಉಪಕರಿಸುವಂತೆ ಉಪಯೋಗಿಸುವುದರಲ್ಲಿ ಎಡವಿದ್ದಾರೆ.‌ ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು

ಚಿಗುರು ಕಲಾ ವೇದಿಕೆಯಿಂದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ➤ ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ- ಮಹಮ್ಮದ್ ಬಡ್ಡೂರು Read More »

ಕರಾವಳಿ, ಕರ್ನಾಟಕ
Scroll to Top