ಕರಾವಳಿ

ಕಡಬ ಏಮ್ಸ್ ಕಾಲೇಜು ಪ್ರಿನ್ಸಿಪಾಲ್ ಸಮೀರಾ ಕೆ.ಎ ರವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಉಪನ್ಯಾಸ, ಸನ್ಮಾನ ಕಾರ್ಯಕ್ರಮ, ಭಾಷಣ ಸ್ಪರ್ಧೆಯು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ರವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರದ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆಯಿತು. ಕನ್ನಡದಲ್ಲಿ ಸಾಧನೆಗೈದವರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಸ್ಥಾಪಕ ಟ್ರಸ್ಟಿ, ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲೆ ಸಮೀರಾ ಕೆ.ಎ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ […]

ಕಡಬ ಏಮ್ಸ್ ಕಾಲೇಜು ಪ್ರಿನ್ಸಿಪಾಲ್ ಸಮೀರಾ ಕೆ.ಎ ರವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಉಡುಪಿ: ಮನೆಗೆ ನುಗ್ಗಿದ ಕಳ್ಳರು ➤ 18.35 ಲಕ್ಷ ರೂ ಮೌಲ್ಯದ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಉಡುಪಿ, ನ. 08. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಸಹಿತ ಅಪಾರ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದ ಘಟನೆ ಅಂಬಲ್ಪಾಡಿ ಎಂಬಲ್ಲಿ ನಡೆದಿದೆ. ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ ನ ಜಯಗಣೇಶ್ ಬೀಡು ಎಂಬವರ ಮನೆಗೆ ಯಾರೂ ಇಲ್ಲದ ಸಮಯ ಮನೆಯ ಹಿಂದುಗಡೆಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಮಾಸ್ಟರ್ ಬೆಡ್ ರೂಮಿನ ಕೀ ತೆಗೆದು ಕಪಾಟು ಹಾಗೂ ಲಾಕರ್ ನ್ನು ಬಲಾತ್ಕಾರದಿಂದ ತೆಗೆದು ಕಳ್ಳತನಗೈದಿದ್ದಾರೆ.

ಉಡುಪಿ: ಮನೆಗೆ ನುಗ್ಗಿದ ಕಳ್ಳರು ➤ 18.35 ಲಕ್ಷ ರೂ ಮೌಲ್ಯದ ನಗ-ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೈಂಟಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪೈಂಟಿಂಗ್ ಮಾಡುತ್ತಿದ್ದ ವೇಳೆ ಮೇಲಿನಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೇಲ್ಪರಂಬ ಕೈನೋತ್ ನಿವಾಸಿ ಭಾಸ್ಕರ(56) ಎಂದು ಗುರುತಿಸಲಾಗಿದೆ. ಮೇಲ್ಪರಂಬ ಎಂಬಲ್ಲಿ ಮನೆಯೊಂದರ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆಬಿದ್ದು, ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೇಕಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೈಂಟಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅಂಬೇಡ್ಕರ್‌ ಅಪತ್ಬಾಂಧವ ಟ್ರಸ್ಟ್‌ ನ ಅಧ್ಯಕ್ಷನ ವಿರುದ್ದ ಪೊಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ಹೊಸ್ಮಠ ಎಂದು ಗುರುತಿಸಲಾಗಿದೆ. 2019ರಲ್ಲಿ ತಂದೆ ಜೊತೆ ರಾಜು ಅವರ ಕಛೇರಿಗೆ ತೆರಳಿದ ಯುವತಿಗೆ ಆರೋಪಿಯ ಪರಿಚಯವಾಗಿತ್ತು. ನಂತರ ಆರೋಪಿ ಮದುವೆಯಾಗುವುದಾಗಿ ನಂಬಿಸಿ, ಆಕೆಗೆ ಆತನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಕುರಿತು ಸಂತ್ರಸ್ತೆ ನೀಡಿದ ದೂರಿನಂತೆ ಪುತ್ತೂರು

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಯುವಜನ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ. 08. ತಾಲೂಕಿನ ಯುವಜನ ಒಕ್ಕೂಟದ ಪ್ರಪ್ರಥಮ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಭಾನುವಾರದಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಡಾ. ಎಸ್ ಬಾಲಾಜಿ ವಹಿಸಿದ್ದರು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ರಾಜ್ಯ ಸಚಿವರಾದ ಎಸ್. ಅಂಗಾರ ಅವರು ನೆರವೇರಿಸಿದರು. ಪ್ರತಿಜ್ಞಾವಿಧಿ ಭೋದನೆಯನ್ನು ದ.ಕ ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷರಾಗಿರುವ ಸುರೇಶ್ ರೈ ಸೂಡಿಮುಳ್ಳು ಭೋದಿಸಿದರು. ಈ ಸಂದರ್ಭದಲ್ಲಿ

ಕಡಬ: ಯುವಜನ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಆಕಸ್ಮಿಕವಾಗಿ ತೆಂಗಿನಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 08. ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪೆರ್ಲಾಪು ನಿವಾಸಿ ಸುರೇಶ್(38) ಎಂದು ಗುರುತಿಸಲಾಗಿದೆ. ಸುರೇಶ್ ನೆರೆಮನೆಯ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಒಂದು ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೇ ಇದ್ದ ಸತ್ತು ಒಣಗಿದ ತೆಂಗಿನ ಮರವು

ಬಂಟ್ವಾಳ: ಆಕಸ್ಮಿಕವಾಗಿ ತೆಂಗಿನಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಕಣ್ಣೀರಾದ ಕುಡಿಯುವ ನೀರು..! ➤ ಮನವಿಗೆ ಕ್ಯಾರೇ ಅನ್ನದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ನ. 08. ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇರ್ನಡ್ಕ ಎಂಬಲ್ಲಿ ಪಂಚಾಯತ್ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿ ಮೂರು ವರ್ಷಗಳೇ ಸಂಧಿವೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಸ್ಥಳೀಯರು ಗ್ರಾಮ ಪಂಚಾಯತ್, ಪುತ್ತೂರು ಉಪ ಆಯುಕ್ತರು, ಪುತ್ತೂರು ಇ.ಓ ಸೇರಿದಂತೆ ಸಾಮಾನ್ಯವಾಗಿ ಎಲ್ಲಾ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದರೂ ಕುಡಿಯುವ ನೀರಿನ ಸಮಸ್ಯೆಗೆ ಮಾತ್ರ ಇನ್ನೂ ಮುಕ್ತಿ ಸಿಕ್ಕಿಲ್ಲ. ಅಂದ ಹಾಗೆ ಇಲ್ಲಿ ಕೊಳವೆ ಬಾವಿಯಲ್ಲಿ ನೀರಿಲ್ಲ ಅಥವಾ

ನೆಲ್ಯಾಡಿ: ಕಣ್ಣೀರಾದ ಕುಡಿಯುವ ನೀರು..! ➤ ಮನವಿಗೆ ಕ್ಯಾರೇ ಅನ್ನದ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ

ಮಂಗಳೂರು: ನಿದ್ದೆ ಮಾತ್ರೆ ಬೆರೆಸಿದ ಜ್ಯೂಸ್ ಕುಡಿಸಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿ ರೌಡಿಶೀಟರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಅಪ್ರಾಪ್ತ ಬಾಲಕಿಯ ಮೇಲೆ ರೌಡಿಶೀಟರ್‌ ಓರ್ವ ಅತ್ಯಾಚಾರ ನಡೆಸಿದ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ. ಈತನಿಗೆ ಬಾಲಕಿಯ ಸಹೋದರನ ಪರಿಚಯವಿದ್ದು, ಇದನ್ನೇ ನೆಪವಾಗಿಸಿ ಆಕೆಯ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಒಬ್ಬಳೇ ಮನೆಯಲ್ಲಿ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ

ಮಂಗಳೂರು: ನಿದ್ದೆ ಮಾತ್ರೆ ಬೆರೆಸಿದ ಜ್ಯೂಸ್ ಕುಡಿಸಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿ ರೌಡಿಶೀಟರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೇಯಲು ಕಟ್ಟಿದ್ದ ದನ ಕಳವುಗೈದು ಮಾರಾಟಕ್ಕೆ ಯತ್ನ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ನ. 08. ಮನೆ ಸಮೀಪದ ತೋಟವೊಂದರಲ್ಲಿ ಮೇಯಲು ಕಟ್ಟಿ ಹಾಕಿದ್ದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶಿರ್ತಾಡಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ವಾಲ್ಪಾಡಿ ಗ್ರಾಮದ ಪವನ್ ಕುಮಾರ್, ಪುರಸಭೆ ವ್ಯಾಪ್ತಿಯ ಮಾರೂರಿನ ಸತೀಶ್ ಹಾಗೂ ಜಯಾನಂದ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಗಿರೀಶ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.  ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶ ಎಂಬವರು ಮನೆ ಸಮೀಪದ ತೋಟದಲ್ಲಿ ಮೇಯಲು

ಮೇಯಲು ಕಟ್ಟಿದ್ದ ದನ ಕಳವುಗೈದು ಮಾರಾಟಕ್ಕೆ ಯತ್ನ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 08. ಇತ್ತೀಚೆಗೆ ನಮ್ಮನ್ನಗಲಿದ ಕರ್ನಾಟಕದ ಖ್ಯಾತ ಚಲನಚಿತ್ರ ನಟ ಹಾಗೂ ಸಮಾಜ ಸೇವಕರಾದ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಗೂನಡ್ಕದ ಯುವಕರು ಏರ್ಪಡಿಸಿದ್ದ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕರವರ ಕಚೇರಿಯಲ್ಲಿ ಜರುಗಿತು. ಫ್ರೆಂಡ್ಸ್ ಯೂತ್ ಕ್ಲಬ್ ಗೂನಡ್ಕ ಇದರ ಮಾಜಿ ಅಧ್ಯಕ್ಷರಾದ ಜಿ.ಜಿ.ನವೀನ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶೌವಾದ್ ಗೂನಡ್ಕರವರು ಸಂತಾಪ ಸೂಚಕ ನುಡಿಗಳನ್ನಾಡಿ, ಪುನೀತ್ ರಾಜ್ ಕುಮಾರ್

ಸುಳ್ಯ: ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಶ್ರದ್ಧಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ
Scroll to Top