ಕರಾವಳಿ

ವಿಟ್ಲ: ಪದವಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಪೆರ್ಲ, ಅ. 30. ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕರವರ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ. ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಅ. 29ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಧ್ಯಾಹ್ನದ ವೇಳೆ ತಂದೆ-ತಾಯಿ ತೋಟದ […]

ವಿಟ್ಲ: ಪದವಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಕ್ಟಿವಾ ಮತ್ತು ಟಿಪ್ಪರ್ ನಡುವೆ ಢಿಕ್ಕಿ ➤ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಮೃತ್ಯು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 30. ಆಕ್ಟಿವಾ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡೀಲ್ ನಲ್ಲಿ ನಡೆದಿದೆ. ಮೃತರನ್ನು ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ತೆರಳುತ್ತಿದ್ದ ಆಕ್ಟಿವಾ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ವಿದ್ಯಾರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ಆಕ್ಟಿವಾ ಮತ್ತು ಟಿಪ್ಪರ್ ನಡುವೆ ಢಿಕ್ಕಿ ➤ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಾದಚಾರಿಗೆ ಜೀಪು ಢಿಕ್ಕಿ ➤ ನೆಲ್ಯಾಡಿಯ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 30. ಜೀಪು ಢಿಕ್ಕಿ ಹೊಡೆದು ನೆಲ್ಯಾಡಿಯ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ. ಮೃತರನ್ನು ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ (40) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಲಾರಿಯೊಂದರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರದಂದು ರಾತ್ರಿ ವೇಳೆ ಬೈಕಂಪಾಡಿ ಸಮೀಪ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಜೀಪು ಡಿಕ್ಕಿ ಹೊಡೆದು, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಪಾದಚಾರಿಗೆ ಜೀಪು ಢಿಕ್ಕಿ ➤ ನೆಲ್ಯಾಡಿಯ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿ ಖಂಡನೀಯ ➤ ಬೆಳ್ತಂಗಡಿಯಲ್ಲಿ ಪಿಎಫ್ಐ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಅ. 30. ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ಮತ್ತು ಸಂಘಪರಿವಾರದ ಗೂಂಡಾಗಳಿಂದ ನಡೆಯುವ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಮತ್ತು ನಾವೂರು ಡಿವಿಝನ್ ವತಿಯಿಂದ ಮಿನಿ ವಿಧಾನಸಭಾ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಇಂಜಿನಿಯರ್ ದಿಕ್ಸೂಚಿ ಭಾಷಣವನ್ನು ಮಾಡಿದರು. ಈ ಸಮಯದಲ್ಲಿ ತ್ರಿಪುರ ಸರ್ಕಾರ ಮತ್ತು ಸಂಘಪರಿವಾರದ ವಿರುದ್ದ ಗಟ್ಟಿ ಧ್ವನಿಯಲ್ಲಿ ಘೋಷಣೆ ಕೂಗಲಾಯಿತು.

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿ ಖಂಡನೀಯ ➤ ಬೆಳ್ತಂಗಡಿಯಲ್ಲಿ ಪಿಎಫ್ಐ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಅರಂತೋಡು: ಮಾತೃ ಕೃಪಾ ಇಂಡಸ್ಟ್ರೀಸ್ ಶುಭಾರಂಭ

(ನ್ಯೂಸ್ ಕಡಬ) Newskadaba.com ಅರಂತೋಡು, ಅ. 30. ಇಲ್ಲಿನ ಕೆ.ಇ.ಬಿ.ಕಚೇರಿ ಮುಂಭಾಗದಲ್ಲಿ ಶಿವಪ್ರಕಾಶ್ ಮಾಲಕತ್ವದ ಮಾತೃ ಕೃಪಾ ಇಂಡಸ್ಟ್ರೀಸ್ ಶುಭಾರಂಭಗೊಂಡಿತು. ಸಮಾರಂಭದಲ್ಲಿ ಸುಳ್ಯ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ಮಾಲಕರ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಲ್ಲಿ ಗೇಟ್, ಗ್ರೀಲ್ಸ್, ಮಾಡಿನ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿ ಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.  

ಅರಂತೋಡು: ಮಾತೃ ಕೃಪಾ ಇಂಡಸ್ಟ್ರೀಸ್ ಶುಭಾರಂಭ Read More »

ಕರಾವಳಿ, ಕರ್ನಾಟಕ

ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ ಖಂಡನೀಯ ➤ ಪಾಪ್ಯುಲರ್ ಫ್ರಂಟ್

(ನ್ಯೂಸ್ ಕಡಬ) Newskadaba.com ಮೂಡಬಿದ್ರೆ, ಅ. 30. ಪ್ರತಿಷ್ಠಿತ ಯೇನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಾಂಪ್ರದಾಯಿಕ ವಸ್ತ್ರದಾರಣೆ ಕುರಿತ ಕಾರ್ಯಕ್ರಮದ ಅಂಗವಾಗಿ ಟೋಪಿ ಧರಿಸುವ ವಿಷಯದಲ್ಲಿ ತರ್ಕ ಮುಂದಿಟ್ಟು , ಎಬಿವಿಪಿಗೆ ಸೇರಿದ ಸುಮಾರು 40 ರಷ್ಟಿದ್ದ ವಿದ್ಯಾರ್ಥಿಗಳು ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಮಂಗಳೂರು ಗ್ರಾಮಾಂತರ ಅಧ್ಯಕ್ಷ ನವಾಝ್ ಕಾವೂರು ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಸಂಘಪರಿವಾರದ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಅನೈತಿಕ ಪೋಲಿಸ್ ಗಿರಿ ನಡೆಸಿದ ದುಷ್ಕ್ರತ್ಯ ಮಾಸುವ ಮುನ್ನವೇ

ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ ಖಂಡನೀಯ ➤ ಪಾಪ್ಯುಲರ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ಮಡಂತ್ಯಾರು: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ PFI ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಮಡಂತ್ಯಾರು, ಅ. 29. ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ಮತ್ತು ಸಂಘಪರಿವಾರದ ಗೂಂಡಗಳಿಂದ ನಡೆಯುವ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ಡಿವಿಝನ್ ವತಿಯಿಂದ ಮಡಂತ್ಯಾರ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಇದರ ಕಾರ್ಯಕರ್ತರಾದ ನವಾಝ್ ಶರೀಫ್ ಕಟ್ಟೆ ದಿಕ್ಸೂಚಿ ಭಾಷಣವನ್ನು ಮಾಡಿದರು. ಈ ಸಮಯದಲ್ಲಿ ತ್ರಿಪುರ ಸರ್ಕಾರ ಮತ್ತು ಸಂಘಪರಿವಾರದ ವಿರುದ್ದ ಗಟ್ಟಿ ಧ್ವನಿಯಲ್ಲಿ ಘೋಷಣೆ ಕೂಗಲಾಯಿತು.

ಮಡಂತ್ಯಾರು: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ PFI ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 29. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಕುರಿತು ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ➤ ಪಂಚಾಯತ್ ನಲ್ಲಿ ಧರಣಿ ಕುಳಿತ ಮೂವರು ಸದಸ್ಯರು

(ನ್ಯೂಸ್ ಕಡಬ) newskadaba.com ಕಡಬ, ಅ.29. ಸದಸ್ಯರ ಗಮನಕ್ಕೆ ತಾರದೆ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಈ ಬಗ್ಗೆ ಅಧ್ಯಕ್ಷರು ಹಾಗೂ ಪಿಡಿಒ ಅವರನ್ನು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರ ನೀಡಿದ್ದಾರೆ ಎಂದು ಆರೋಪಿಸಿ ಮರ್ಧಾಳ ಗ್ರಾಮ ಪಂಚಾಯತ್ ನ ಮೂವರು ಸದಸ್ಯರು ಪಂಚಾಯತ್ ಒಳಗಡೆ ಧರಣಿ ಕುಳಿತಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಒಂದನೇ ವಾರ್ಡ್ ಸದಸ್ಯರಾದ ಶಾಕೀರ್, ಮೀನಾಕ್ಷಿ ಹಾಗೂ ಅಜಯ್ ಕುಮಾರ್ ಅವರು ಇಂದು ಅಪರಾಹ್ನದಿಂದ ಪಂಚಾಯತ್ ಒಳಗೆ ಪ್ರತಿಭಟನೆ ಕುಳಿತಿದ್ದು, ಪಂಚಾಯತ್ ಕಛೇರಿಗೆ ಬೀಗ ಹಾಕಲು

ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ➤ ಪಂಚಾಯತ್ ನಲ್ಲಿ ಧರಣಿ ಕುಳಿತ ಮೂವರು ಸದಸ್ಯರು Read More »

ಕರಾವಳಿ

ಕಡಬ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕನಿಗೆ ಗಾಯ

(ನ್ಯೂಸ್ ಕಡಬ) Newskadaba.com ಕಡಬ, ಅ. 29. ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದ ವೇಳೆ ಕಂಬ ಮುರಿದು ಬಿದ್ದ ಪರಿಣಾಮ ಕಾರ್ಮಿಕರೋರ್ವರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ರಾಜು ಎಂದು ಗುರುತಿಸಲಾಗಿದೆ. ಇವರು ವಿದ್ಯುತ್ ಕಂಬದಲ್ಲಿ ನಿಂತು ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಕಂಬ ತುಂಡಾಗಿ ಬಿದ್ದು, ಸಣ್ಣ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕಡಬ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top