ಕರಾವಳಿ

ನದಿಯಲ್ಲಿ ಸಿಲುಕಿ ಯುವಕ ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ನದಿ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಬುಧವಾರದಂದು ಸಂಭವಿಸಿದೆ. ನೀರುಪಾಲಾದ ಯುವಕನನ್ನು ಸ್ಥಳೀಯ ನಿವಾಸಿ ಶಫೀಕ್(19) ಎಂದು ಗುರುತಿಸಲಾಗಿದೆ. ವಿಪರೀತ ಮಳೆ ಸುರಿಯುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ನೀರಿನಲ್ಲಿ ಕಣ್ಮರೆಯಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಊರವರ ಸಹಾಯದಿಂದ ಯುವಕನ ಶೋಧ ಕಾರ್ಯ ಆರಂಭಗೊಂಡಿದೆ.      

ನದಿಯಲ್ಲಿ ಸಿಲುಕಿ ಯುವಕ ನೀರುಪಾಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಡುಗೆ ಅನಿಲ ಸೇರಿದಂತೆ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ ➤ ಎಸ್‌ಡಿಪಿಐ ಕಡಬ ಬ್ಲಾಕ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಕೇಂದ್ರ ಮತ್ತು ರಾಜ್ಯ ಸರಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಸ್‌ಡಿಪಿಐ ಕಡಬ ಬ್ಲಾಕ್ ವತಿಯಿಂದ, ಕಡಬದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಅಡುಗೆ ಅನಿಲದ ಸಿಲಿಂಡರ್ ಗಳ ಅಣುಕು ಶವಯಾತ್ರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಎಸ್‌ಡಿಪಿಐ ರಾಜ್ಯ ಸಮಿತಿ ನಾಯಕರಾದ

ಅಡುಗೆ ಅನಿಲ ಸೇರಿದಂತೆ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ ➤ ಎಸ್‌ಡಿಪಿಐ ಕಡಬ ಬ್ಲಾಕ್ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೋಟರಿ ನ್ಯಾಯವಾದಿ ಮನೋಹರ್ ಸಬಳೂರ್ ಅವರ ಕಛೇರಿ ಸ್ಥಳಾಂತರಗೊಂಡು ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಇಲ್ಲಿನ ಯಶೋದಾ ಸೂಪರ್‌ ಶಾಪ್‌ ನ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನೋಟರಿ ವಕೀಲರಾದ ಮನೋಹರ್ ಸಬಳೂರ್ ಅವರ ಕಛೇರಿಯು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿರುವ ಎಪಿಎಂಸಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ನೂತನ ಕಛೇರಿಯನ್ನು ಅಚ್ಚುತ ಪ್ರಭು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ| ಸದಾನಂದ ರಾವ್, ನಿವೃತ್ತ ಗ್ರಾಮಕರಣಿಕರಾದ ಕೃಷ್ಣಪ್ಪ ಗೌಡ ಸಬಳೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಳೆದ ಹಲವು ವರ್ಷಗಳಿಂದ ಕಡಬದಲ್ಲಿ ನೋಟರಿ ನ್ಯಾಯವಾದಿ ಹಾಗೂ ದಸ್ತಾವೇಜು

ನೋಟರಿ ನ್ಯಾಯವಾದಿ ಮನೋಹರ್ ಸಬಳೂರ್ ಅವರ ಕಛೇರಿ ಸ್ಥಳಾಂತರಗೊಂಡು ಶುಭಾರಂಭ Read More »

ಕರಾವಳಿ

ಕಡಬ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ. ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ ಮೆಸ್ಟ್ರೋ ವಾಹನ ಸವಾರ ಪೊಲೀಸ್ ವಾಹನವನ್ನು ಕಂಡು ಎಡಬದಿಗೆ ತಿರುಗಿಸಿದ್ದು, ಈ ಸಂದರ್ಭದಲ್ಲಿ ಮುಂದಿನಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಸಣ್ಣಪುಟ್ಟ ಗಾಯಗೊಂಡ ವಾಹನ ಸವಾರರನ್ನು ತಕ್ಷಣವೇ ಪೊಲೀಸ್ ವಾಹನದಲ್ಲಿ ಕಡಬ ಸಮುದಾಯ ಆರೋಗ್ಯ

ಕಡಬ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಇಂದು ಏರಿಕೆ ಕಂಡ ಕೊರೋನಾ ಸೋಂಕು ➤ 6 ಮಂದಿ ಬಲಿ, 248 ಮಂದಿ ಗುಣಮುಖ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆ ಕಂಡಿದ್ದು, ಇಂದು 224 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಕೊರೋನಾ ಸೋಂಕಿಗೆ 6 ಮಂದಿ ಬಲಿಯಾಗಿದ್ದು, ಇಂದಿನ ಪಾಸಿಟಿವಿಟಿ ರೇಟ್ 2.60% ದಾಖಲಾಗಿದೆ. ಇಂದು 248 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2322 ಆ್ಯಕ್ಟಿವ್ ಕೇಸ್ ಇದೆ.      

ದಕ್ಷಿಣ ಕನ್ನಡದಲ್ಲಿ ಇಂದು ಏರಿಕೆ ಕಂಡ ಕೊರೋನಾ ಸೋಂಕು ➤ 6 ಮಂದಿ ಬಲಿ, 248 ಮಂದಿ ಗುಣಮುಖ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದ ಪೋಕ್ಸೋ ಪ್ರಕರಣದ ಆರೋಪಿ ➤ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ಪೋಕ್ಸೋ ಪ್ರಕರಣದ ಆರೋಪಿಯೋರ್ವ ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ಮಂಗಳೂರಿನಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪೋಕ್ಸೋ ಪ್ರಕರಣದ ಆರೋಪಿ ನಾಟೆಕಲ್ ಸಮೀಪದ ಕಿನ್ಯ ನಿವಾಸಿ ರವಿರಾಜ್ (32) ಎಂದು ಗುರುತಿಸಲಾಗಿದೆ. ಈತ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ನೆಲಕ್ಕೆ ಅಪ್ಪಳಿಸಿದ ಆರೋಪಿಯ ತಲೆಗೆ ಭಾರೀ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳೂರು: ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದ ಪೋಕ್ಸೋ ಪ್ರಕರಣದ ಆರೋಪಿ ➤ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಪಿಕಪ್ ಢಿಕ್ಕಿ ➤ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಆ.30. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ

ಉಪ್ಪಿನಂಗಡಿ: ಪಿಕಪ್ ಢಿಕ್ಕಿ ➤ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಆಸ್ತಿ ವಿಚಾರಕ್ಕೆ ಕುಟುಂಬ ಕಲಹ ➤ ಅಣ್ಣನಿಗೆ ತಲವಾರು ಬೀಸಿದ ತಮ್ಮ

(ನ್ಯೂಸ್ ಕಡಬ) newskadaba.com ಕಡಬ, ಆ.28. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಸ್ವಂತ ಅಣ್ಣ‌ನಿಗೆ ತಮ್ಮನೋರ್ವ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೆಂಜಿಲಾಡಿ ಗ್ರಾಮದ ಪದಕ ನಿವಾಸಿ ಶೇಷಪ್ಪ ಗೌಡ ಎಂಬವರ ಪುತ್ರ ಲಕ್ಷ್ಮಣ ಗೌಡ(55) ಎಂಬವರಿಗೆ ತಮ್ಮನಾದ ಪ್ರಭಾಕರ ಗೌಡ ಎಂಬವರು ತಲವಾರಿನಿಂದ ಹಲ್ಲೆಗೊಳಿಸಿದ್ದು, ಗಾಯಗೊಂಡ ಲಕ್ಷ್ಮಣ ಗೌಡರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪ್ರಭಾಕರ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ತಿ ವಿಚಾರದಲ್ಲಿ ಸಹೋದರರ ಮಧ್ಯೆ ಆಗಾಗ

ಕಡಬ: ಆಸ್ತಿ ವಿಚಾರಕ್ಕೆ ಕುಟುಂಬ ಕಲಹ ➤ ಅಣ್ಣನಿಗೆ ತಲವಾರು ಬೀಸಿದ ತಮ್ಮ Read More »

ಕರಾವಳಿ

ವಿಟ್ಲ: ಆಟೋ ರಿಕ್ಷಾ – ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.27. ಆಟೋ ರಿಕ್ಷಾ ಹಾಗೂ ಇಂಡಿಕಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪುಣಚ ಗ್ರಾಮದ ಮಣಿಲ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತ‌ ರಿಕ್ಷಾ ಚಾಲಕನನ್ನು ಪರಿಯಾಲ್ತಡ್ಕ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಮಣಿಲ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಅಶ್ರಫ್ ರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  

ವಿಟ್ಲ: ಆಟೋ ರಿಕ್ಷಾ – ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ನಾಗಾಲೋಟ ➤ ಇಂದು ರಾತ್ರಿಯಿಂದಲೇ ಕರ್ಫ್ಯೂ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.27. ದ.ಕ.ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆಯ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಆ.28ರ ಶನಿವಾರ ಮತ್ತು ಆ.29ರ ಭಾನುವಾರ ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಆದರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ನಾಗಾಲೋಟ ➤ ಇಂದು ರಾತ್ರಿಯಿಂದಲೇ ಕರ್ಫ್ಯೂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top