ಕರಾವಳಿ

ಕಡಬದ ಸ್ಮಶಾನದಲ್ಲಿ ಅರೆ ಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವೊಂದು ಶನಿವಾರ ರಾತ್ರಿ ಕಂಡುಬಂದಿದೆ. ಕಡಬ ಸಮೀಪದ ಗೋಳಿಯಡ್ಕ ನಿವಾಸಿಯೋರ್ವರು ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು ಎನ್ನಲಾಗಿದೆ. ಸಂಜೆ ವೇಳೆಗೆ ಪರಿಸರದ ವಾಸಿಗಳಿಗೆ ವಾಸನೆ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿ‌ಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. […]

ಕಡಬದ ಸ್ಮಶಾನದಲ್ಲಿ ಅರೆ ಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ.07. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ನಡುವಿನ ಎಡಮಂಗಲದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಎಡಮಂಗಲ ನಿವಾಸಿ ಭರತ ಎಂದು ಗುರುತಿಸಲಾಗಿದೆ. ಭರತನಿಗೆ 22 ವರ್ಷ ವಯಸ್ಸಾಗಿತ್ತು. ಶನಿವಾರ ಸಂಜೆ ರೈಲು ಹಳಿಯ ಮೇಲೆ ಭರತನ ಮೃತದೇಹ ದೊರೆತಿದ್ದು, ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.      

ರೈಲಿನಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.07. ಅತ್ತಿಗೆಯ ಜೊತೆ ಅನೈತಿಕ ಸಂಬಂಧ ಹೊಂದಿದ ಆರೋಪದಲ್ಲಿ ಸ್ವಂತ ತಮ್ಮನನ್ನು ಅಣ್ಣನೇ ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂದು ಗುರುತಿಸಲಾಗಿದೆ. ಅವಿವಾಹಿತವಾಗಿದ್ದ ಸುಂದರ ಮೂಲ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ಆತನ ಮನೆಯ ಸಮೀಪದಲ್ಲಿರುವ ಅಣ್ಣನ ಮನೆಯಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು ಎನ್ನಲಾಗಿದೆ. ಅತ್ತಿಗೆಯ ಜೊತೆ ಅನೈತಿಕ‌ ಸಂಬಂಧವಿದೆ ಎಂದು

ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

BIG NEWS: ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ➤ ಇಂದು ರಾತ್ರಿಯಿಂದಲೇ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದು ರಾತ್ರಿಯಿದಲೇ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಘೋಷಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.  

BIG NEWS: ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ➤ ಇಂದು ರಾತ್ರಿಯಿಂದಲೇ ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

BIG NEWS: ಡೆಲ್ಟಾ ಆಯ್ತು, ಇದೀಗ ‘ಇಟಾ’ ಸೋಂಕು ಮಂಗಳೂರಿನಲ್ಲಿ ಪತ್ತೆ ➤ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸಾಧ್ಯತೆ..?

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕೊರೋನಾ ಏರಿಕೆಯ ನಡುವೆ ಡೆಲ್ಟಾ ಸೋಂಕಿನ ಜೊತೆಗೆ ಇದೀಗ ಮತ್ತೊಂದು ಶಾಕ್ ಗೆ ಕರಾವಳಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಎರಡು ತಿಂಗಳ ಹಿಂದೆ ಕತರ್ ನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಗುರುವಾರದಂದು ಕೊರೋನಾ ಸೋಂಕಿನ ಹೊಸ ತಳಿ ‘ಇಟಾ’ (ಬಿ.1.525) ವೈರಾಣು ಪತ್ತೆಯಾಗಿದೆ. ಇದರ ಜೊತೆಗೆ ಹೊಸದಾಗಿ ಒಂದು ಡೆಲ್ಟಾ ಪ್ಲಸ್‌ ಪ್ರಕರಣ ಕೂಡ ಕಂಡುಬಂದಿದ್ದು, ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಹೊಂದಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಂಡುಬಂದಿರುವ ಇಟಾ

BIG NEWS: ಡೆಲ್ಟಾ ಆಯ್ತು, ಇದೀಗ ‘ಇಟಾ’ ಸೋಂಕು ಮಂಗಳೂರಿನಲ್ಲಿ ಪತ್ತೆ ➤ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸಾಧ್ಯತೆ..? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದೇವಸ್ಥಾನಗಳಲ್ಲಿ ಸೇವೆ ಸ್ಥಗಿತ ➤ ಕೊರೋನಾ ಏರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕುಕ್ಕೇ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಮುಂದಿನ ಆದೇಶದವರೆಗೆ ಸೇವೆಗಳನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ನೆರೆಯ ಕೇರಳ ರಾಜ್ಯದಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದ್ದು, ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಇಂದಿನಿಂದ ಸುಬ್ರಹ್ಮಣ್ಯ ಮತ್ತು

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದೇವಸ್ಥಾನಗಳಲ್ಲಿ ಸೇವೆ ಸ್ಥಗಿತ ➤ ಕೊರೋನಾ ಏರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬೊಲೆರೋ ➤ ವೃದ್ಧೆಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.04. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ನದಿಗೆ ಬಿದ್ದ ಘಟನೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಸೇತುವೆಯ ಬಳಿ ಬುಧವಾರದಂದು ಸಂಭವಿಸಿದೆ. ಕಡಮಕಲ್ಲು ಎಸ್ಟೇಟ್‌ನವರಿಗೆ ಸೇರಿದ್ದು ಎನ್ನಲಾದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ವೃದ್ಧೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.      

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬೊಲೆರೋ ➤ ವೃದ್ಧೆಗೆ ಗಂಭೀರ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ➤ ಲಾರಿ, ಬೈಕ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಅಕ್ರಮ ಮರದ ದಿಮ್ಮಿ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿದ ಪುತ್ತೂರು ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು 9 ಮರದ ದಿಮ್ಮಿ, ಒಂದು ಲಾರಿ, ಒಂದು ಬೈಕ್ ಸಹಿತ 8 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸೋಮವಾರದಂದು ವಶಪಡಿಸಿಕೊಂಡಿದ್ದಾರೆ. ಲಾರಿಯೊಂದರಲ್ಲಿ ಕಿರಾಲ್ ಬೋಗಿ ಜಾತಿಗೆ ಸೇರಿದ ಮರದ ದಿಮ್ಮಿಗಳನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸುಳ್ಯ ತಾಲೂಕಿನ ಜಾಲ್ಸೂರು

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ➤ ಲಾರಿ, ಬೈಕ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಟಿಎಮ್ ಬೈಕ್ – ಕಾರು ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ.02. ಕೆಟಿಎಮ್ ಬೈಕ್ ಹಾಗೂ ಕಾರಿನ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಸಮೀಪ ಸೋಮವಾರದಂದು ನಡೆದಿದೆ. ಸಕಲೇಶಪುರ ಸಮೀಪದ ಬ್ಯಾಕರವಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಸಕಲೇಶಪುರದ ಬಾಲಗದ್ದೆ ನಿವಾಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಗಂಭೀರ ಗಾಯಗೊಂಡಿರುವ ಸಹ ಸವಾರನನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ

ಕೆಟಿಎಮ್ ಬೈಕ್ – ಕಾರು ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು, ಸಹ ಸವಾರ ಗಂಭೀರ Read More »

ಕರಾವಳಿ
Scroll to Top