ಕರಾವಳಿ

ಸಿನಿಮೀಯ ಶೈಲಿಯಲ್ಲಿ ಕಾರು ಪಲ್ಟಿ ➤ ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಜು.18. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಅಡ್ಕಾರಿನ ಅಯ್ಯಪ್ಪ ಮಂದಿರದ ಬಳಿ ತಲುಪುತ್ತಿದ್ದಂತೆ ಚಾಲಕನಿಗೆ ನಿದ್ದೆ ತೂಕಡಿಸಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಬೇಲಿಗೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ […]

ಸಿನಿಮೀಯ ಶೈಲಿಯಲ್ಲಿ ಕಾರು ಪಲ್ಟಿ ➤ ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉ.ಕ ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ಅಧಿಕಾರಿ ಮಂಗಳೂರು ಡಿವೈಎಸ್ಪಿಯಾಗಿ ಆಯ್ಕೆ ➤ ಜು. 19ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 17. ಉತ್ತರಕನ್ನಡ ಜಿಲ್ಲೆಯ ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಂಕೋಲಾ ತಾಲೂಕಿನ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ಅವರು ಡಿವೈಎಸ್ಪಿ ಹುದ್ದೆಗೆ ನೇಮಕಗೊಂಡಿದ್ದು, ಜು. 19ರಂದು ದ.ಕ ಜಿಲ್ಲೆಯ ಡಿವೈಎಸ್ಪಿ ಯಾಗಿ ಅಧಿಕಾರ ಸ್ವೀಕರಿಸಿಲಿದ್ದಾರೆ. ಧನ್ಯಾ ನಾಯಕ್ ಅವರು 2019-20ರಲ್ಲಿ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಉ.ಕ ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ಅಧಿಕಾರಿ ಮಂಗಳೂರು ಡಿವೈಎಸ್ಪಿಯಾಗಿ ಆಯ್ಕೆ ➤ ಜು. 19ರಂದು ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

(ನ್ಯೂಸ್ ಕಡಬ) Newskadaba.com ಮೂಡುಬಿದಿರೆ, ಜು. 17. ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಪ್ರಸಿದ್ದಿ ಗಳಿಸಿರುವ ಅಶ್ವತ್ಥಪುರದ ಶ್ರೀನಿವಾಸ ಗೌಡ ರವರಿಗೆ ಪ್ರಶಾಂತ್ ಎಂಬಾತ ದೂರವಾಣಿ ಮುಖಾಂತರ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋವೊಂದು ಇದೀಗ ವೈರಲ್ ಆಗಿದೆ. ದೂರವಾಣಿ ಕರೆ ಮೂಲಕ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.

ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ‌ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ➤ ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) Newskadaba.com ಉಡುಪಿ, ಜು. 17. ಶಿಕ್ಷಣದ ವಿಷಯದಲ್ಲಿ ರಾಜ್ಯದಲ್ಲೇ ಸುಪ್ರಸಿದ್ಧವಾದ ನಮ್ಮ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರದ ಮೇಲೆ ಉಂಟಾದ ಒತ್ತಡದಿಂದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಈ ವರ್ಷದಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲಿ ಪ್ರಮುಖ ಆಕ್ಷೇಪವೇನೆಂದರೆ ಡಾ. ಸುಧಾಕರ್ ರವರು ಪರಿಪೂರ್ಣವಾಗಿ

ಖಾಸಗಿ‌ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ➤ ಕ್ಯಾಂಪಸ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ದಿನೇ ದಿನೇ ಪೆಟ್ರೋಲ್, ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ➤ ಎಸ್ಸೆಸ್ಸೆಫ್ ಕಡಬ ಸೆಕ್ಟರ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.16: ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್ಸೆಸ್ಸೆಫ್) ಕಡಬ ಸೆಕ್ಟರ್ ವತಿಯಿಂದ ಕಡಬ ತಾಲೂಕು ಕಛೇರಿ ಎದುರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್‍ಎಸ್‍ಎಫ್ ಉಪ್ಪಿನಂಗಡಿ ವಿಭಾಗೀಯ ವಕ್ತಾರ ಉಮ್ಮರ್ ಮುಸ್ಲಿಯಾರ್ ನೀರಕಟ್ಟೆ ಮಾತನಾಡಿ ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರವು ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಅಚ್ಚೇ ದಿನ್ ತರುತ್ತೇವೆ

ದಿನೇ ದಿನೇ ಪೆಟ್ರೋಲ್, ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ➤ ಎಸ್ಸೆಸ್ಸೆಫ್ ಕಡಬ ಸೆಕ್ಟರ್ ವತಿಯಿಂದ ಪ್ರತಿಭಟನೆ Read More »

ಕರಾವಳಿ

ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ವಿವಾದಿತ ಫೇಸ್‍ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿ, ಶೀಘ್ರದಲ್ಲೇ ಹರೀಶ್ ಬಂಗೇರ ರವರು ತಾಯ್ನಾಡಿಗೆ ಮರಳಲಿದ್ದಾರೆ ಎಂದಿದ್ದಾರೆ. ಇವರ ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರು ಅಷೋಷಿಯೇಷನ್ ನ

ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ಮೀನುಗಾರನೋರ್ವ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಅಳಿವೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ತೋಟಬೆಂಗ್ರೆ ನಿವಾಸಿ ಜಯಪುತ್ರನ್ (55) ಎಂದು ಗುರುತಿಸಲಾಗಿದೆ. ಇವರು ಅಳಿವೆಬಾಗಿಲಿನ ಸಮೀಪ ಮೀನು ಹಿಡಿಯುತ್ತಿದ್ದ ವೇಳೆ ಭಾರೀ ಗಾಳಿ- ಮಳೆ ಸುರಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇವರ ಕಾಲಿಗೆ ಮೀನು ಹಿಡಿಯುವ ಬಲೆ ಸಿಲುಕಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಒಂದೇ ದಿನ ಪತಿ- ಪತ್ನಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಜು. 16. ಪತಿ ಹಾಗೂ ಪತ್ನಿ ಒಂದೇ ದಿನ ಕೊರೋನಾಗೆ ಮೃತಪಟ್ಟ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗಿದೆ. ಇವರಿಬ್ಬರಿಗೂ ಜೂ. 25ರಂದು ಜ್ವರ ಕಾಣಿಸಿಕೊಂಡಿದ್ದು, ಔಷಧಿ ಪಡೆದು ಗುಣಮುಖರಾಗಿದ್ದರು. ನಂತರ ಮತ್ತೆ ಜ್ವರ ಉಲ್ಭಣಿಸಿದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇವರಿಬ್ಬರ ಪೈಕಿ ಪತ್ನಿ ಗುರುವಾರದಂದು ಮಧ್ಯಾಹ್ನ

ನೆಲ್ಯಾಡಿ: ಒಂದೇ ದಿನ ಪತಿ- ಪತ್ನಿ ಕೊರೋನಾಗೆ ಬಲಿ Read More »

ಕರಾವಳಿ, ಕರ್ನಾಟಕ

ಕಡಬ: ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ ➤ ಜೀಪ್ ಸಂಪೂರ್ಣ ಜಖಂ

(ನ್ಯೂಸ್ ಕಡಬ) newskadaba.com ಕಡಬ, ಜು.15. ಭಾರೀ ಗಾಳಿ ಮಳೆಗೆ ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದೆ. ಕೊಂಬಾರು ನಿವಾಸಿ ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್ ಜೀಪ್ ಮನೆ ಸಮೀಪ ನಿಲ್ಲಿಸಿದ್ದ ವೇಳೆ ಪಕ್ಕದ ಧರೆಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಬುಡದಿಂದ ಉರುಳಿ ಜೀಪ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಜೀಪ್ ನಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಯಾವುದೇ ಪ್ರಾಣಾಪಾಯ

ಕಡಬ: ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ ➤ ಜೀಪ್ ಸಂಪೂರ್ಣ ಜಖಂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.      

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top