ಕರಾವಳಿ

ಶಿರಾಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.05. ಶಿರಾಡಿಯ ಕೆಂಪುಹೊಳೆ ಎಂಬಲ್ಲಿ ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ. ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪದ ಕಾಡಿನಲ್ಲಿ ಸುಮಾರು 50 ವರ್ಷ ಪ್ರಾಯದ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದನ್ನು ಸ್ಥಳೀಯ ವ್ಯಕ್ತಿಯೋರ್ವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಕಲೇಶಪುರ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಶಿರಾಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಕರಾವಳಿ

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ ನಿಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.03. ಹಿರಿಯ ಕಾಂಗ್ರೆಸ್ ಮುಖಂಡ, ಜಿ.ಪಂ.ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್(55) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಭಾವಿ ರಾಜಕೀಯ, ಸಾಮಾಜಿಕ, ಸಹಕಾರಿ ಮುಖಂಡರಾಗಿದ್ದ ಅವರು‌ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ ಸೊಸೈಟಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.      

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ ನಿಧನ Read More »

ಕರಾವಳಿ

ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.03. ಇತ್ತೀಚೆಗೆ ಆತೂರು ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಡಬ ಪೋಲಿಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ರಾಮಕುಂಜ ಗ್ರಾಮದ ಹಲ್ಲಿ ಅರಮನೆ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಆಫೀಸ್ (28) ಹಾಗೂ ಕೊಯಿಲ ಗ್ರಾಮದ ಎಂತಾರು ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ನವಾಜ್ (27) ಎಂಬವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಷರತ್ತು ಬದ್ಧ

ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್

(ನ್ಯೂಸ್ ಕಡಬ) newskadaba,ಮುಂಬೈ ಜು.03:ಬಿಟೌನ್ ಸ್ಟಾರ್ ಕಪಲ್ ಆಮಿರ್ ಖಾನ್ ಮತ್ತು ಕಿರಣ್ ರಾವ್ ಮದುವೆ ಬಂಧನದಿಂದ ಹೊರ ಬಂದಿದ್ದು, ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.ಆಮಿರ್ ಖಾನ್ ಮತ್ತು ಕಿರಣ್ ರಾವ್ ಜೊತೆಯಾಗಿ ಹೇಳಿಕೆ ಬಿಡುಗಡೆಯಾಗಿದ್ದು, ಇನ್ಮುಂದೆ ಇಬ್ಬರ ದಾರಿ ಬೇರೆ ಆಗಿರಲಿದೆ. ನಾವಿಬ್ಬರು ಪರಸ್ಪರ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಈ 15 ವರ್ಷಗಳಲ್ಲಿ ಇಬ್ಬರೂ ಸುಂದರ ಜೀವನವನ್ನು ಕಳೆದಿದ್ದೇವೆ. ಹೊಸ ಅನುಭವ ಆನಂದ, ಸಂತೋಷವನ್ನು ಶೇರ್ ಮಾಡಿಕೊಂಡಿದ್ದೇವೆ. ನಮ್ಮಿಬ್ಬರ

15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್ Read More »

ಕರಾವಳಿ

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಇಂದು ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ Read More »

ಕರಾವಳಿ, ಕರ್ನಾಟಕ

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲ ಪತ್ತೆ ಮಾಡಿದ್ದಾರೆ. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 35 ವರ್ಷದ ಮಹಿಳೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೂಟ್ ಕೇಸ್ ತಳ ಭಾಗದಲ್ಲಿ ಮರೆಮಾಚಿ 8 ಕೆ.ಜಿ. ತೂಕದ 56 ಕೋಟಿ ರೂ. ಮೌಲ್ಯದ ಹೆರಾಯಿನ್ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಮಹಿಳೆಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ.

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!!

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!! Read More »

ಕರಾವಳಿ

ಕಡಬ: ಅವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) Newskadaba.com ಕಡಬ, ಜು. 02. ಮಹಿಳೆಯೋರ್ವರು ನಾಪತ್ತೆಯಾದ ಘಟನೆ ತಾಲೂಕಿನ ದೋಳ್ಪಾಡಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಳು ಪಚ್ಚೋಳಿ ಎಂಬವರ ಪುತ್ರಿ ಲಲಿತಾ(30 ಎಂದು ಗುರುತಿಸಲಾಗಿದೆ. ಇವರು ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದರೆನ್ನಲಾಗಿದೆ. ಜೂನ್ 29ರಂದು ಸಹೋದರ ಹಾಗೂ ಆತನ ಪತ್ನಿ ಕೆಲಸಕ್ಕೆ ಹೋಗಿದ್ದು, ಸಂಜೆ ಮನೆಗೆ ಮರಳಿದಾಗ ಮನೆಗೆ ಬೀಗ ಹಾಕಿದ್ದು, ಬೀಗದ ಕೀ ಸ್ಥಳದಲ್ಲೇ ಬಿದ್ದಿತ್ತು. ಲಲಿತಾ ಅವರನ್ನು ಎಲ್ಲೆಡೆ ಹುಡುಕಾಡಿದರೂ ಅವರು ಪತ್ತೆಯಾಗದ ಕಾರಣ ಲಲಿತಾ ಅವರ

ಕಡಬ: ಅವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್ ನಲ್ಲಿ ‘ಬರ್ಲಿನ್’ ಪುರುಷರ ಉಡುಪುಗಳ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಇಲ್ಲಿನ ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್‌ನಲ್ಲಿ ಬರ್ಲಿನ್ ಪುರುಷರ ಮದುವೆ ಉಡುಪುಗಳ ಮಳಿಗೆ ಜು. 01 ರಂದು ಶುಭಾರಂಭಗೊಂಡಿತು. ಕಡಬ ಠಾಣಾ ಪೋಲಿಸ್ ಉಪನಿರೀಕ್ಷಕ ರುಕ್ಮ ನಾಯ್ಕ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ಫಾ/ ರೊನಾಲ್ಡ್ ಲೋಬೋ ಮಾತನಾಡಿ, ವ್ಯವಹಾರದಲ್ಲಿ ಸತ್ಯ, ನಿಷ್ಠೆ ಪ್ರಾಮಾಣಿಕತೆ ಇದ್ದರೆ ಯಶಸ್ಸು ಖಂಡಿತ ಸಾಧಿಸಬಹುದು, ಇದರಿಂದ ಗುಣಮಟ್ಟದ ವಸ್ತುಗಳನ್ನು ಮಾರಾಟ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು

ಕಡಬ: ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್ ನಲ್ಲಿ ‘ಬರ್ಲಿನ್’ ಪುರುಷರ ಉಡುಪುಗಳ ಮಳಿಗೆ ಶುಭಾರಂಭ Read More »

ಕರಾವಳಿ, ಕರ್ನಾಟಕ
Scroll to Top