ಕರಾವಳಿ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ  ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ  ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ […]

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ Read More »

ಕರಾವಳಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರು ವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ತಿಳಿಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾದ ಶ್ರೀ ಸುಬ್ರಾಯ ಬೈಪಡಿತ್ತಾಯ ಬಂಟ್ರ ಇವರು  ದೇಶಸೇವೆ ಮತ್ತು ಸಂಸ್ಕಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು.

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನ್ಯ ಬದ್ರಿಯಾ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ವಿಶ್ವ ಪರಿಸರ ದಿನಾಚರಣೆಯನ್ನು ಕಡಬ ಪಟ್ಟಣ ಪಂಚಾಯತ್ ನ ಪನ್ಯ ವಾರ್ಡಿನ ಬದ್ರಿಯಾ ಜುಮಾ ಮಸೀದಿಯಲ್ಲಿ ಸಸಿ ನೆಡುವ ಮುಖಾಂತರ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪನ್ಯ ವಾರ್ಡಿನ ಸದಸ್ಯರಾದ ಮಹಮ್ಮದ್ ಫೈಜಲ್, ಮಸೀದಿ ಅಧ್ಯಕ್ಷರಾದ ಶರೀಫ್ ಫೈಝಿ ಉಸ್ತಾದ್, ಖತೀಬರಾದ ರಝಾಕ್ ದಾರಿಮಿ ಉಸ್ತಾದ್, ಪನ್ಯ ವಾರ್ಡ್ ಅಧ್ಯಕ್ಷರಾದ ಹಮೀದ್ ಪನ್ಯ, ಇಂಥಿಯಾಜ್ ಪನ್ಯ, ಕಲೀಂ ಪನ್ಯ, ಇಬ್ರಾಹಿಂ ಪನ್ಯ, ಶಾಫಿ ಪನ್ಯ, ಖಾದರ್ ಪನ್ಯ, ಮುಸ್ತಫ ಪನ್ಯ,

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನ್ಯ ಬದ್ರಿಯಾ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಜ್ಞಾನವಿ ಎನ್ 10ನೇ ತರಗತಿ ಮತ್ತು ಪ್ರಜ್ವಲ್ 9ನೇ ತರಗತಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ.ರೈ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 05. ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮದ್ದಡ್ಕ-ವರಕದೆ ಸಮೀಪ ಗುರುವಾರ ನಡೆದಿದೆ.   ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ. ಘಟನೆಯಿಂದ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

(ನ್ಯೂಸ್‌ ಕಡಬ) com,  ಜೂ.05: ಭಾರತೀಯ ವಾಯುಪಡೆಯ ಅತ್ಯಂತ ಅನುಭವಿ ಮತ್ತು ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾಗಿರುವ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಅವರನ್ನು ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಶುತೋಷ್ ದೀಕ್ಷಿತ್ ಅವರು

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಂಪತಿ ಪ್ರಾಣಾಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಜೂ.05: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಂಪತಿ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!

(ನ್ಯೂಸ್‌ ಕಡಬ) newskadaba.com,  ಜೂ.05: ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆಗೆ ಕಾರವಾರದ ಜಿಲ್ಲಾ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠಕ್ಕೆ ಸೇರಿಸಬಾರದು. ಪ್ರಸ್ತುತ ನಾವಿರುವ ಧಾರವಾಡ ಪೀಠದ ವ್ಯಾಪ್ತಿಯಲ್ಲೇ ನಮ್ಮನ್ನು ಮುಂದುವರಿಸಬೇಕು, ಇಲ್ಲದಿದ್ದರೆ ಜಿಲ್ಲೆಯ ಭೌಗೋಳಿಕ ಮಧ್ಯವರ್ತಿ ಪ್ರದೇಶದಲ್ಲೇ ಹೊಸ ಪೀಠವನ್ನು ಸ್ಥಾಪಿಸಬೇಕು ಎಂದು ಸಂಘವು ಸರ್ಕಾರ ಹಾಗೂ ಹೈಕೋರ್ಟ್‌ಗೆ ದೃಢವಾಗಿ ಆಗ್ರಹಿಸಿದೆ. ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಜೂ.05: : ಅಮೆರಿಕ- ಇರಾನ್ ನಡುವೆ ಮುಂದುವರಿದ ಮಾತುಕತೆ, ಇತ್ತ ತೈಲ ಬೆಲೆ ಏರಿಕೆಯಿಮದಾಗಿ ಚಿನ್ನದ ಮೇಲೆ ನಿರಂತರವಾಗಿ ಒತ್ತಡ ಸೃಷ್ಟಿಯಾಗಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಸತತ ಕಳೆದ 10 ದಿನದಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಬಂದಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 5 2026 ಶುಕ್ರವಾರದಂದು, ಗ್ರಾಂ ಬೆಲೆಯಲ್ಲಿ 38 ರೂ ಕಡಿತವಾಗಿ, 15,573 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 380 ರೂ ಕಡಿತಗೊಂಡು,

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್

(ನ್ಯೂಸ್‌ ಕಡಬ) newskadaba.com,  ಜೂ.05: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಆಪ್ತ ಸ್ನೇಹಿತ. ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ಜೊತೆಗೆ ಭಾರತ ಹಾಗೂ ಅಮೆರಿಕ ನಡುವೆ ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದ ಆಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಶೀಘ್ರದಲ್ಲೇ ಈ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ನನಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದರೆ ತುಂಬಾ ಇಷ್ಟ. ಅವರು ನನ್ನ ಉತ್ತಮ ಸ್ನೇಹಿತರೂ ಹೌದು. ನಮ್ಮಿಬ್ಬರ ಮಧ್ಯೆ

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top