ಕರಾವಳಿ

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ

(ನ್ಯೂಸ್ ಕಡಬ) newskadaba,ನವ ದೆಹಲಿ ಜೂ. 20: ಮಾರಕ ಕೊರೋನಾ ವೈರಸ್​ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲಾಗುವುದಿಲ್ಲ. ಏಕೆಂದರೆ ಇದು ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡುತ್ತದೆ ಮತ್ತು COVID-19 ರ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಇಂದು ಅಫಿಡವಿಟ್​ ಸಲ್ಲಿಸಿದೆ.   ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ […]

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ Read More »

ಕರಾವಳಿ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,517 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 120 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,883ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 933 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,05,259ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ Read More »

ಕರಾವಳಿ

ಆಟವಾಡುತ್ತಿದ್ದ ವೇಳೆ ಇಲಿ ಪಾಷಾಣ ಸೇವನೆ ➤ ಎರಡೂವರೆ ವರ್ಷದ ಕಂದಮ್ಮ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಇಲಿ ಪಾಷಾಣ ಸೇವಿಸಿ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಮೃತ ಮಗುವನ್ನು ಕೆಮ್ಮಾರ ನಿವಾಸಿ ನಿವೃತ್ತ ಸೈನಿಕ ಸೈಜು ಎಂಬವರ ಎರಡೂವರೆ ವರ್ಷದ ಪುತ್ರಿ ಶ್ರೇಯಾ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಮನೆಯ ನಾಯಿ ಗೂಡಿನ ಮೇಲೆ ತಂದಿಟ್ಟಿದ್ದ ಇಲಿ ಪಾಷಾಣದ ಟ್ಯೂಬನ್ನು ಶನಿವಾರದಂದು ಮಗು ಆಕಸ್ಮಿಕವಾಗಿ ಸೇವಿಸಿತ್ತು. ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡ

ಆಟವಾಡುತ್ತಿದ್ದ ವೇಳೆ ಇಲಿ ಪಾಷಾಣ ಸೇವನೆ ➤ ಎರಡೂವರೆ ವರ್ಷದ ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು.

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ Read More »

ಕರಾವಳಿ

ಗಂಡು ಮಗುವಿಗಾಗಿ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಅಪ್ಪ

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.19:ಗಂಡು ಮಗು ಬೇಕೇ ಬೇಕೆಂದು ವ್ಯಕ್ತಿ ತನ್ನ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟಿದ್ದಾನೆ. ಮಕ್ಕಳನ್ನು ಮಾರುವುದು ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರದಬ್ಬಿದ್ದಾನೆ.   ನಗರದ ಅಂಬೇಡ್ಕರ್ ಕಾಲೋನಿಯ ಪಾಪಿ ತಂದೆಯ ಹೆಸರು ಮುನಿಯಪ್ಪ, ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಈತ, 8 ವರ್ಷಗಳ ಹಿಂದೆ ಸಂಜು ಅವರನ್ನು ಮದುವೆಯಾಗಿದ್ದ. ಬಳಿಕ 4 ಹೆಣ್ಣು ಮಕ್ಕಳ ತಂದೆಯಾಗಿದ್ದಾನೆ. ಆದರೆ ಗಂಡು ಮಗು ಬೇಕೇ ಬೇಕೆಂದು ಪತ್ನಿಗೆ ಅಪರೇಷನ್ ಮಾಡಿಸಿಲ್ಲ. ಮಾತ್ರವಲ್ಲದೆ

ಗಂಡು ಮಗುವಿಗಾಗಿ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಅಪ್ಪ Read More »

ಕರಾವಳಿ

ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ BSY

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ

ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ BSY Read More »

ಕರಾವಳಿ

ಮಾಣಿ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟ ಲಾರಿ

(ನ್ಯೂಸ್ ಕಡಬ) newskadaba,ಬಂಟ್ವಾಳ ಜೂ.19: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿ, ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ, ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ.ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ನಡೆದಿದೆ.

ಮಾಣಿ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟ ಲಾರಿ Read More »

ಕರಾವಳಿ

25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್ ಬೆಲೆ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ನಿನ್ನೆಯಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಪೆಟ್ರೋಲ್ ಬೆಲೆ ಶತಕ ಬಾರಿಸುವ ಮೂಲಕ ವಾಹನ ಸವಾರರಿಗೆ ಮತ್ತಷ್ಟು ಶಾಕ್ ನೀಡಿದೆ. ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡದ ಶಿರಸಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ,

25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್ ಬೆಲೆ..?! Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬಾರದ ಕೋವಿಡ್ ➤ ಲಾಕ್ ಡೌನ್ ವಿಸ್ತರಣೆ..?!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.19: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 6,931ಆಕ್ವೀವ್ ಕೇಸ್ ಇದ್ದು

ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬಾರದ ಕೋವಿಡ್ ➤ ಲಾಕ್ ಡೌನ್ ವಿಸ್ತರಣೆ..?! Read More »

ಕರಾವಳಿ, ಕರ್ನಾಟಕ

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

(ನ್ಯೂಸ್ ಕಡಬ) newskadaba,ಸುಳ್ಯ, ಜೂ.19: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ಕರಾವಳಿ
Scroll to Top