ಕರಾವಳಿ

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.     ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ. […]

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.01: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ. ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್‍ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು Read More »

ಕರಾವಳಿ, ಕರ್ನಾಟಕ

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ,

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ Read More »

ಕರಾವಳಿ

ನಾಳೆ (ಮೇ.31) ಕೈಕಂಬ ಶಾಲಾ ಮುಖ್ಯ ಶಿಕ್ಷಕ ತುಕಾರಾಮ ಗೌಡ ಸೇವಾ ನಿವೃತ್ತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕೈಕಂಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತುಕರಾಮ ಗೌಡ ಎಸ್.ರವರು ನಾಳೆ (ಮೇ.31) ಸೇವಾ ನಿವೃತ್ತಿ ಹೊಂದಲಿದ್ದಾರೆ. 1990ರಲ್ಲಿ ಇಡ್ಯಡ್ಕ ಶಾಲೆಯಲ್ಲಿ ಕರ್ತವ್ಯಕ್ಕೆ ಸೇರಿದ ಇವರು ಪುತ್ತೂರು ಹಾಗೂ ಕಡಬ ತಾಲೂಕಿನ ಹಲವು ಶಾಲೆಗಳಲ್ಲಿ ಸಹ ಶಿಕ್ಷಕರಾಗಿ, ಬಂಟ್ರ ಕ್ಲಸ್ಟರ್ ಸಿಆರ್‌ಪಿಯಾಗಿ, ಶಿಕ್ಷಕರ ಸಂಘದ ಪ್ರತಿನಿಧಿಯಾಗಿ ಕಡಬ ತಾಲೂಕು ಶಿಕ್ಷಕರ ಸಂಘದ ಗೌರವಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಬಿಳಿನೆಲೆ ಬೈಲು ಶಾಲೆಯಲ್ಲಿ

ನಾಳೆ (ಮೇ.31) ಕೈಕಂಬ ಶಾಲಾ ಮುಖ್ಯ ಶಿಕ್ಷಕ ತುಕಾರಾಮ ಗೌಡ ಸೇವಾ ನಿವೃತ್ತಿ Read More »

ಕರಾವಳಿ

ಕಡಬ: ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ 63 ವರ್ಷದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.29. ಕಡಬ ತಾಲೂಕಿನಲ್ಲಿ ಕೊರೋನಾ ಎರಡನೇ ಅಲೆಗೆ ಎಂಟನೇ ಬಲಿಯಾಗಿದ್ದು, ಕುಟ್ರುಪ್ಪಾಡಿ ಗ್ರಾಮದ ಮಹಿಳೆಯೊಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ‌. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಟ್ರುಪ್ಪಾಡಿ ಗ್ರಾಮದ ಆಚಾರ್ ಪಾಲ್ ನಿವಾಸಿ 63 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಶನಿವಾರದಂದು ಮೃತಪಟ್ಟಿದ್ದಾರೆ‌. ಮೃತರ ಅಂತ್ಯಸಂಸ್ಕಾರ ಕೋವಿಡ್ ನಿಯಮದಂತೆ ಪದವು ಚರ್ಚಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.      

ಕಡಬ: ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ 63 ವರ್ಷದ ಮಹಿಳೆ ಮೃತ್ಯು Read More »

ಕರಾವಳಿ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಉಡುಪಿ, ಮೇ. 29. ಲಕ್ಷದ್ವೀಪದ ಮೂಲ ನಿವಾಸಿಗಳ ಧಾರ್ಮಿಕ, ಸಾಂಸ್ಕೃತಿಕ, ಭಾಷಿಕ ಅಸ್ಮಿತೆ ಮತ್ತು ನಾಗರಿಕ ಹಕ್ಕುಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ತಾಳುತ್ತಿರುವ ನಡೆಗಳು ಮತ್ತು ಬಿಜೆಪಿ ನಾಯಕ ಮತ್ತು ಮೋದಿಯ ನಿಕಟವರ್ತಿ ಪ್ರಫುಲ್ ಪಟೇಲ್ ರನ್ನು ಅಲ್ಲಿನ ಆಡಳಿತಾಧಿಕಾರಿಯನ್ನಾಗಿ ನೇಮಿಸಿರುವುದರ ಹಿಂದೆ ಇರುವಂತಹ ದುಷ್ಟ ಉದ್ದೇಶವನ್ನು ಖಂಡಿಸಿ ಮತ್ತು ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಉಡುಪಿ ಜಿಲ್ಲಾದ್ಯಂತ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಬಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಭಿತ್ತಿಪತ್ರ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕರಿಗೆ ರಕ್ಷಣೆ ನೀಡಲು ಮುಂದಾದ ನೀತಿ ತಂಡ ➤ ತುರ್ತು ಸ್ಪಂದನೆಗೆ ನೀತಿ ರಕ್ಷಣಾ ತಂಡ ಸನ್ನದ್ಧ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ನೀತಿ ರಕ್ಷಣಾ ತಂಡವು ಕೋವಿಡ್ ಸಂಕಷ್ಟ ಹಾಗೂ ಮಳೆಗಾಲ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನತೆಗೆ ನೆರವು ನೀಡಲು ಮುಂದಾಗಿದೆ ಎಂದು ಕಡಬ ತಾಲೂಕು ನೀತಿ ರಕ್ಷಣಾ ತಂಡದ ಅಧ್ಯಕ್ಷ ರಂಜಿತ್ ಕಡಬ ತಿಳಿಸಿದ್ದಾರೆ. ಕೋವಿಡ್ ವಾರಿಯರ್ಸ್ ಆಗಿ ಜನರಿಗೆ ಸಹಕಾರ ನೀಡಲು ಹಾಗೂ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನೆರವಾಗಲು ನೀತಿ ರಕ್ಷಣಾ ತಂಡವನ್ನು ರಚಿಸಿದೆ. ಕೋವಿಡ್ ತಂಡದಲ್ಲಿ ಸುನೀಶ್ ಟಿ.ಪಿ. ಹಾಗೂ

ಸಾರ್ವಜನಿಕರಿಗೆ ರಕ್ಷಣೆ ನೀಡಲು ಮುಂದಾದ ನೀತಿ ತಂಡ ➤ ತುರ್ತು ಸ್ಪಂದನೆಗೆ ನೀತಿ ರಕ್ಷಣಾ ತಂಡ ಸನ್ನದ್ಧ Read More »

ಕರಾವಳಿ

ಮಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ‌. 27. ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿಬಿದ್ದ ಘಟನೆ ಪಂಪ್‌ವೆಲ್ ಫ್ಲೈಓವರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಪರಿಣಾಮ ದ್ವಿಚಕ್ರ ಸವಾರನಿಗೆ ಗಂಭೀರ ಗಾಯಗಳಾಗಿವೆ. ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದಾನೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ

ಮಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top