ಕರಾವಳಿ

ನೆಲ್ಯಾಡಿ: ವ್ಯಾಕ್ಸಿನ್ ಸಾಗಾಟದ ಸುಮೋ – ಲಾರಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.17. ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಸೋಮವಾರದಂದು ನಡೆದಿದೆ. ಸರಕಾರಿ ಟಾಟಾ ಸುಮೋ ವಾಹನದಲ್ಲಿ ಕೊರೋನಾ ವ್ಯಾಕ್ಸಿನ್ ಸಾಗಾಟ ಮಾಡಲಾಗುತ್ತಿದ್ದ ವೇಳೆ ಧರ್ಮಸ್ಥಳ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಟಾಟಾ ಸುಮೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ನೆಲ್ಯಾಡಿ: ವ್ಯಾಕ್ಸಿನ್ ಸಾಗಾಟದ ಸುಮೋ – ಲಾರಿ ನಡುವೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ನರಿಮೊಗರು: ಮಳೆಗೆ ಕುಸಿದ ಮನೆಯ ಕಾಂಪೌಂಡ್ ➤ ಮನೆ ಕುಸಿತದ ಭೀತಿಯಲ್ಲಿ ಕುಟುಂಬ

(ನ್ಯೂಸ್ ಕಡಬ) Newskadaba.com ನರಿಮೊಗರು, ಮೇ. 16. ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಾದ್ಯಂತ ಭಾರೀ ಮಳೆ ಸುರಿದಿದ್ದು, ಪರಿಣಾಮ ಮುಂಡೂರು ಗ್ರಾಮದ ಕಾಳಿಂಗಹಿತ್ತಲು ಎಂಬಲ್ಲಿನ ರಹಿಮಾನ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಮಣ್ಣು ಪಾಲಾಗಿದ್ದಲ್ಲದೇ ಮನೆಯ ಜಗಲಿ ಕೂಡಾ ಬಿರುಕು ಬಿಟ್ಟು ಮನೆ ಕುಸಿಯುವ ಬೀತಿಯಲ್ಲಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಮುಖಂಡ ಅರುಣ್ ಪುತ್ತಿಲ, ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಪುತ್ತಿಲ, ಬಾಲಕೃಷ್ಣ ಪೂಜಾರಿ, ಅರುಣಾ ಕಣ್ಣರ್ ನೂಜಿ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್,

ನರಿಮೊಗರು: ಮಳೆಗೆ ಕುಸಿದ ಮನೆಯ ಕಾಂಪೌಂಡ್ ➤ ಮನೆ ಕುಸಿತದ ಭೀತಿಯಲ್ಲಿ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತರ್ ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆ ➤ ಕಡಬದ ಸಮ್ಯಕ್ ಜೈನ್ ಪ್ರಥಮ

(ನ್ಯೂಸ್ ಕಡಬ) Newskadaba.com ಕಡಬ, ಮೇ. 16. ಜಗದ್ಗುರು ಬಸವೇಶ್ವರರ ಜನ್ಮದಿನದ ಅಂಗವಾಗಿ ಭಾರತೀಯ ಸೃಜನಶೀಲ ಕನ್ನಡ ಸಾಹಿತ್ಯ ಬಳಗ ಜಿಲ್ಲಾ ಘಟಕ ಹಾವೇರಿ ವತಿಯಿಂದ ‘ಯುವ ಪೀಳಿಗೆಯೂ ವಚನ ಸಾಹಿತ್ಯದಲ್ಲಿ ತೊಡಗಬೇಕು’ ಎಂಬ ಉದ್ದೇಶದಿಂದ ಅಂತರ್ ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು .   ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ, ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಹಾಗು ಮಂಜುಳಾರವರ ಸುಪುತ್ರ ಯುವ ಪ್ರತಿಭೆ ಸಮ್ಯಕ್ತ್ ಜೈನ್ ರವರು ಪ್ರಥಮ ಸ್ಥಾನವನ್ನು

ಅಂತರ್ ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆ ➤ ಕಡಬದ ಸಮ್ಯಕ್ ಜೈನ್ ಪ್ರಥಮ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಹಳ್ಳದಲ್ಲಿ ನೀರುನಾಯಿಗಳ ಹಿಂಡು ಪತ್ತೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಮೇ. 16. ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಇದೀಗ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿನ ಫಲ್ಗುಣಿ ನದಿಯನ್ನು ಸಂಪರ್ಕಿಸುವ ಹಳ್ಳವೊಂದರಲ್ಲಿ ನೀರು ನಾಯಿಗಳು ಕಂಡು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ. ಇದೀಗ ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಬೆಳ್ತಂಗಡಿ: ಹಳ್ಳದಲ್ಲಿ ನೀರುನಾಯಿಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ

ಇಂದಿನ (ಮೇ. 16) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 38 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಮೇ. 16. ಇಂದಿನ ಆರೋಗ್ಯ ಇಲಾಖಾ ವರದಿಯ ಪ್ರಕಾರ ತಾಲೂಕಿನಲ್ಲಿ 38 ಮಂದಿಗೆ ಕೊರೋನಾ ದೃಢಪಟ್ಟಿದೆ. ಹಾಗೆಯೇ ಪುತ್ತೂರು ತಾಲೂಕಿನಲ್ಲಿ 42 ಹಾಗೂ ಸುಳ್ಯ ತಾಲೂಕಿನಲ್ಲಿ 35 ಮಂದಿಗೆ ಕೊರೋನಾ ದೃಢಗೊಂಡಿದೆ.

ಇಂದಿನ (ಮೇ. 16) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 38 ಮಂದಿಗೆ ಕೊರೋನಾ ದೃಢ Read More »

ಕರಾವಳಿ

ಸರಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಇಳಿಮುಖ ➤ ಕೆಪಿಸಿಸಿ ವಕ್ತಾರ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 16. ಕೊರೋನಾ ಸೋಂಕಿನ ಲಕ್ಷಣ ಹೊಂದಿದವರನ್ನು ಮಾತ್ರ ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂಬ ಮಾಹಿತಿಯಿದ್ದು, ಸೋಂಕಿತರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿಲ್ಲ. ಕೋವಿಡ್ ಪರೀಕ್ಷೆಗಳನ್ನು ಕಡಿತಗೊಳಿಸುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯನ್ನು ಕುಗ್ಗಿಸುವುದು ಸರ್ಕಾರದ ಉದ್ದೇಶವಾಗಿದೆ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಇದು ಸರ್ಕಾರ ಕಂಡುಕೊಂಡ ಹೊಸ ಮಾರ್ಗವೆಂದು ಕೆ.ಪಿ.ಸಿ.ಸಿ ವಕ್ತಾರ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಪರೀಕ್ಷೆಗಳ ಮೂಲಕ ಸೋಂಕಿತರನ್ನು ಪತ್ತೆ ಹಚ್ಚಬಹುದಾಗಿದ್ದು, ಇದರಿಂದ ಸೋಂಕು

ಸರಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಇಳಿಮುಖ ➤ ಕೆಪಿಸಿಸಿ ವಕ್ತಾರ ಶೌವಾದ್ ಗೂನಡ್ಕ Read More »

ಕರಾವಳಿ

ಕೊರೋನಾ ಸೋಂಕಿಗೆ ಕಡಬ ತಾಲೂಕಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕೊರೋನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ಮತ್ತೋರ್ವರು ಮೃತಪಟ್ಟಿದ್ದು, ಈ ಮೂಲಕ ಐದನೇ ಜೀವ ಬಲಿಯಾದಂತಾಗಿದೆ. ಕಡಬ ತಾಲೂಕಿನ ಮರ್ಧಾಳ ಸಮೀಪದ ಐತ್ತೂರು ಗ್ರಾಮದ ಕೇನ್ಯ ನಿವಾಸಿ 53 ವರ್ಷದ ವ್ಯಕ್ತಿಯೋರ್ವರು ಇಂದು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌. ಮೃತದೇಹದ ಅಂತ್ಯಸಂಸ್ಕಾರವನ್ನು ಸೇವಾಭಾರತಿಯ ವತಿಯಿಂದ ಪುತ್ತೂರಿನಲ್ಲಿ ನಡೆಸಲಾಯಿತು.      

ಕೊರೋನಾ ಸೋಂಕಿಗೆ ಕಡಬ ತಾಲೂಕಿನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 1787 ಮಂದಿಗೆ ಪಾಸಿಟಿವ್, ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣವು ಮತ್ತೆ ಹೆಚ್ಚಳವಾಗಿದ್ದು, ಜಿಲ್ಲೆಯಲ್ಲಿ ಇಂದು 1787 ಮಂದಿಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಇಂದು ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಮೂವರು ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 808 ಕ್ಕೆ ಏರಿಕೆಯಾಗಿದೆ. ಇಂದು 1490 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 63,357 ಪಾಸಿಟಿವ್ ಕೇಸ್ ದಾಖಲಾಗಿದೆ.        

ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 1787 ಮಂದಿಗೆ ಪಾಸಿಟಿವ್, ಮೂವರು ಮೃತ್ಯು Read More »

ಕರಾವಳಿ

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 117 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.15. ಗ್ರಾಮೀಣ ಭಾಗದಲ್ಲಿ ಶುಕ್ರವಾರದಿಂದ ಶನಿವಾರಕ್ಕೆ ಕೋವಿಡ್ ಪ್ರಕರಣ ಮತ್ತೆ ಇಳಿಕೆಯಾಗಿದೆ. ಶನಿವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 117 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 19 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 41 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 57 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.      

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 117 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಕಡಬ: ತಮ್ಮನಿಂದ ಅಣ್ಣನಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಕಡಬ, ಮೇ.14. ಸಹೋದರರ ನಡುವೆ ಜಗಳ ನಡೆದು ಅಣ್ಣನಿಗೆ ತಮ್ಮ ಕತ್ತಿಯಿಂದ ಕಡಿದುಕೊಂಡ ಘಟನೆ ತಾಲೂಕಿನ ಮೂಜೂರು ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ಸಮೀಪದ ಮುಂಡಡ್ಕ ನಿವಾಸಿ ಧ್ರುವ ಕುಮಾರ್(35) ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ಇಂದು ಸಂಜೆ ಜಗಳವುಂಟಾಗಿ ತಮ್ಮ ಪ್ರೀತಮ್ ಎಂಬಾತ ಅಣ್ಣನಿಗೆ ಕತ್ತಿಯಿಂದ ಕಡಿದಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ ಅಣ್ಣನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ

ಕಡಬ: ತಮ್ಮನಿಂದ ಅಣ್ಣನಿಗೆ ಚೂರಿ ಇರಿತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top