ಕರಾವಳಿ

ನಾಗರಹಾವನ್ನು ಹಿಡಿಯುತ್ತಿದ್ದ ವೇಳೆ ಹಾವು ಕಡಿತ ➤ ಉಪ್ಪಿನಂಗಡಿಯ ‘ಸ್ನೇಕ್ ಮುಸ್ತ’ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.17. ಹಾವು ಹಿಡಿಯುವ ಮೂಲಕ ‘ಸ್ನೇಕ್ ಮುಸ್ತಾ’ ಎಂದೇ ಚಿರಪರಿಚಿತರಾಗಿದ್ದ ಉಪ್ಪಿನಂಗಡಿ ನಿವಾಸಿ ಎಂ.ಆರ್.ಮುಹಮ್ಮದ್ ಮುಸ್ತಾಫ ಶನಿವಾರ ನಾಗರಹಾವಿನ ಕಡಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯ 34 ನೆಕ್ಕಿಲಾಡಿ ಗ್ರಾಮದ ಬೊಳಂತಿಲ ಹೊಸ ಕಾಲನಿ ನಿವಾಸಿ ಎಂ.ಆರ್. ಮುಸ್ತಾಫ ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದು, ಇವರು ವಿಷಕಾರಿ ಹಾವುಗಳನ್ನು ಹಿಡಿದು ರಕ್ಷಿಸಿ ಕಾಡಿಗೆ ಬಿಡುವುದನ್ನು ಹವ್ಯಾಸವನ್ನಾಗಿ ಮಾಡಿಕೊಂಡಿದ್ದರು. ಶನಿವಾರ ಸಂಜೆ ಬೆಳ್ತಂಗಡಿ ತಾಲೂಕಿನ ನೇಜಿಕಾರಿನಲ್ಲಿ ಮನೆಯೊಂದಕ್ಕೆ ನಾಗರಹಾವು ಬಂತೆಂದು ಇವರಿಗೆ ಕರೆ ಬಂದಿದ್ದು, […]

ನಾಗರಹಾವನ್ನು ಹಿಡಿಯುತ್ತಿದ್ದ ವೇಳೆ ಹಾವು ಕಡಿತ ➤ ಉಪ್ಪಿನಂಗಡಿಯ ‘ಸ್ನೇಕ್ ಮುಸ್ತ’ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ಹಟ್ಟಿಯಲ್ಲಿ ಕಟ್ಟಿ ಹಾಕಲಾಗಿದ್ದ ದನ ಕಳ್ಳತ‌ನ

(ನ್ಯೂಸ್ ಕಡಬ) newskadaba.com ಕಾರ್ಕಳ, ಎ. 17. ಹಟ್ಟಿಯಲ್ಲಿ ಕಟ್ಟಿದ್ದ ದನವನ್ನು ಕಳ್ಳತನ ಮಾಡಿರುವ ಘಟನೆ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ. ಸುನೀಲ್ ಕೋಟ್ಯಾನ್ ಎಂಬವರ ಮನೆಯಿಂದ ದನ ಕಳವುಗೈಯ್ಯಲಾಗಿದೆ. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಜೀವನ ನಿರ್ವಹಣೆಗಾಗಿ 6 ದನಗಳನ್ನು ಸಾಕಿಕೊಂಡಿದ್ದರು. ಎ.12 ರಂದು ರಾತ್ರಿ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಇವರು, ಮರುದಿನ ಬೆಳಿಗ್ಗೆ ಹಾಲು ಕರೆಯಲೆಂದು ಹೋದ ಸಂದರ್ಭ ಕಟ್ಟಿ ಹಾಕಿದ್ದ 6ದನಗಳ ಪೈಕಿ ಐದು ದನ ಮಾತ್ರ ಇದ್ದು 1 ದನ ಕಳವಾಗಿರುವುದು

ಕಾರ್ಕಳ: ಹಟ್ಟಿಯಲ್ಲಿ ಕಟ್ಟಿ ಹಾಕಲಾಗಿದ್ದ ದನ ಕಳ್ಳತ‌ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 17. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದ್ದು, ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ. ನನಗೆ ಕೋವಿಡ್- 19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಈ ವೇಳೆ ಶೀತ, ಜ್ವರ ಕಾಣಿಸಿಕೊಂಡ

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ವಿಟ್ಲ: ಅಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ ➤ 30 ಕೆಜಿ ಮಾಂಸದ ಸಹಿತ ಅಟೋ ರಿಕ್ಷಾ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 17. ಆಟೋ ರಿಕ್ಷಾದಲ್ಲಿ ಅಕ್ರಮವಾಗಿ 30ಕೆಜಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಪೊಲೀಸ್ ಠಾಣೆಯ ಸಾರಡ್ಕ ಚೆಕ್ ಪೋಸ್ಟ್‌ ನಲ್ಲಿ ನಡೆದಿದೆ. ಬಂಧಿತನನ್ನು ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ ಜಾರ್ಜ್ (35) ಎಂದು ಗುರುತಿಸಲಾಗಿದೆ. ಪೊಲೀಸರು ಕೇಪು ಗ್ರಾಮದ ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ತಪಾಸಣಾ ನಿರತರಾಗಿದ್ದ ಸಂದರ್ಭ ಪೆರ್ಲ ಕಡೆಯಿಂದ ಅಡ್ಯನಡ್ಕ ಕಡೆಗೆ ಆಟೋರಿಕ್ಷಾದಲ್ಲಿ ದಾಖಲಾತಿ ಇಲ್ಲದೆ ಅಕ್ರಮವಾಗಿ ದನದ

ವಿಟ್ಲ: ಅಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ ➤ 30 ಕೆಜಿ ಮಾಂಸದ ಸಹಿತ ಅಟೋ ರಿಕ್ಷಾ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಚ್ಚುತ್ತಿರುವ ಕೊರೊನಾ‌ ಹಿನ್ನೆಲೆ ➤ ಇಂದಿನಿಂದ ಕೊರೋನಾ ಸೋಂಕಿತರ ಕೈಗೆ ಬೀಳಲಿದೆ ಸೀಲ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 17. ಕೊರೋನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಬಿಬಿಎಂಪಿ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯದಲ್ಲಿ ಸೋಂಕು ದೃಢಪಟ್ಟವರ ಕೈಗಳಿಗೆ ಕೋವಿಡ್ ದೃಢಪಟ್ಟಿದೆ ಎಂಬ ಸೀಲ್ ಹಾಕಲು ನಿರ್ಧರಿಸಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆ ಮನೆಯಲ್ಲಿಯೇ ಐಸೋಲೇಟ್ ಆಗಿರುವವರು ಮನೆಯಿಂದ ಹೊರಗೆ ಸಂಚರಿಸದಂತೆ ಮುದ್ರೆ ಹಾಕಲಾಗುತ್ತದೆ. ಮುದ್ರೆ ಹಾಕಿಸಿಕೊಂಡವರು ಹೊರಗಡೆ ತಿರುಗಾಡುವುದು ಕಂಡಲ್ಲಿ ಮಾರ್ಷಲ್

ಹೆಚ್ಚುತ್ತಿರುವ ಕೊರೊನಾ‌ ಹಿನ್ನೆಲೆ ➤ ಇಂದಿನಿಂದ ಕೊರೋನಾ ಸೋಂಕಿತರ ಕೈಗೆ ಬೀಳಲಿದೆ ಸೀಲ್…! Read More »

ಕರಾವಳಿ

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ. 17. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಶುಕ್ರವಾರದಂದು ರಾತ್ರಿ ಪತ್ತೆಯಾಗಿದೆ. ಬಸ್ ನಿಲ್ದಾಣದ ಸಿಬ್ಬಂದಿಯೋರ್ವರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹದ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಮೃತರ ಆಧಾರ್ ಕಾರ್ಡ್ ಸಿಕ್ಕಿದೆ. ಮೃತ ವ್ಯಕ್ತಿ ಮಂಗಳೂರಿನ ಅಚ್ಚುತ ಎನ್ನಲಾಗಿದೆ. ಸದ್ಯ ಮೃತದೇಹವನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪೊಲೀಸರು

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಾರಾಷ್ಟ್ರದ ನಿರುದ್ಯೋಗಿ ಕಾರ್ಮಿಕರಿಗೆ ನೆರವಾದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 17. ಕೆಲಸಕ್ಕಾಗಿ ಬಂದು ಮೋಸ ಹೋದ ಮಹಾರಾಷ್ಟ್ರದ 24 ಕಾರ್ಮಿಕರು ಮೂಡಿಗೆರೆಯಿಂದ ಉಜಿರೆಗೆ ಬಂದು, ಕಾಲ್ನಡಿಗೆ ಮೂಲಕ ಲಾಯಿಲ ಪ್ರದೇಶಕ್ಕೆ ತಲುಪಿದ್ದರು. ಊರಿಗೆ ಹಿಂದಿರುಗಲು ಲಾಯಿಲ ಬಳಿ ನಾಗರಿಕರಲ್ಲಿ ಸಹಾಯ ಯಾಚಿಸುತ್ತಿರುವ ವಿವರ ತಿಳಿದ ಪಾಪ್ಯುಲರ್ ಫ್ರಂಟ್ ಲಾಯಿಲ ಕಾರ್ಯಕರ್ತರಾದ ಲಾಯಿಲ ಸಲೀಂ, ಇರ್ಫಾನ್, ಆಸೀಫ್ ಹಾಗೂ ಸಫ್ವಾನ್ ಒಳಗೊಂಡ ತಂಡವು ಅವರಿಗೆ ಊಟ ಉಪಚಾರ ಮಾಡಿಸಿ, ಧನ ಸಹಾಯವನ್ನು ನೀಡಿ ತಮ್ಮ ಊರಿಗೆ ಹಿಂತಿರುಗುವ ವ್ಯವಸ್ಥೆ ಮಾಡಿದರು.

ಮಹಾರಾಷ್ಟ್ರದ ನಿರುದ್ಯೋಗಿ ಕಾರ್ಮಿಕರಿಗೆ ನೆರವಾದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ

ಹನುಮಾನ್ ಸ್ಮರಣೆ ಮಾಡುತ್ತ ನಿತ್ಯ ಭವಿಷ್ಯ ತಿಳಿಯೋಣ

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಹಣದ ಲೆಕ್ಕಾಚಾರ ಸರಿಯಾಗಿ ಇಟ್ಟುಕೊಳ್ಳಿ . ಇದರಿಂದ ನೀವು ಯಾವುದೇ ರೀತಿಯ ಆರ್ಥಿಕ ಬಿಕ್ಕಟ್ಟಿನಿಂದ ತಪ್ಪಿಸಬಹುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ನಿರುದ್ಯೋಗಿಗಳು ಒಂದು ಸ್ಥಿರವಾದ್ ಉದ್ಯೋಗವನ್ನು ಪಡೆಯುವ ಸಾಧ್ಯತೆ ಪ್ರಬಲವಾಗಿದೆ. ಶಿಕ್ಷಣದ ಕ್ಷೇತ್ರದಲ್ಲಿ

ಹನುಮಾನ್ ಸ್ಮರಣೆ ಮಾಡುತ್ತ ನಿತ್ಯ ಭವಿಷ್ಯ ತಿಳಿಯೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಳ್ತಂಗಡಿ: ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 16. ಬೈಕ್ ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮಂದಡ್ಕ ಗ್ರಾಮದ ಸೀಟ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತರನ್ನು ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಸುದೀಪ್ ಭಂಡಾರಿ (34) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಸಹ ಸವಾರ ಕೂಡಾ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಸುದೀಪ್ ಭಂಡಾರಿ ಅವರ ತಲೆಗೆ ಗಂಭೀರ

ಬೆಳ್ತಂಗಡಿ: ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಖಾಲಿ ಸಿಲಿಂಡರ್ ಗೆ ಅಡುಗೆ ಅನಿಲ ತುಂಬಿಸಿ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ. 16. ಗ್ಯಾಸ್ ಏಜೆನ್ಸಿಯ ಡೆಲಿವರಿ ಸಿಬಂದಿಯೋರ್ವ ಡೆಲಿವೆರಿ ಮಾಡಬೇಕಾಗಿದ್ದ ಗ್ಯಾಸ್ ಸಿಲಿಂಡರ್ ನಿಂದ ಅನಿಲವನ್ನು ಖಾಲಿ ಸಿಲಿಂಡರಿಗೆ ತುಂಬಿಸಿ ಮಾರಾಟ ಮಾಡುತ್ತಿದ್ದುದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾವಳಪಡೂರು ಗ್ರಾಮದ ಅಲಂಪುರಿ ಎಂಬಲ್ಲಿ ನಡೆದಿದೆ. ಬಂಧಿತನನ್ನು ಉತ್ತರ ಭಾರತ ಮೂಲದ ಕಾರ್ಮಿಕ ಜಯಪ್ರಕಾಶ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಖಾಲಿ ಸಿಲಿಂಡರಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುವ ಕುರಿತು ಅನುಮಾನಗೊಂಡ ಗ್ರಾಮಸ್ಥರು

ಬಂಟ್ವಾಳ: ಖಾಲಿ ಸಿಲಿಂಡರ್ ಗೆ ಅಡುಗೆ ಅನಿಲ ತುಂಬಿಸಿ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top