ಕರಾವಳಿ

ಮಂಗಳೂರು: ಖಾಸಗಿ ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 31. ಖಾಸಗಿ ಬಸ್ಸಿನ ಅಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರದಂದು ಬೆಳಗ್ಗೆ ನಗರದ ಮರಕಡ ಜಂಕ್ಷನ್ ನಲ್ಲಿ ನಡೆದಿದೆ.   ಮೃತ ವಿದ್ಯಾರ್ಥಿನಿಯನ್ನು ಚೆಲ್ಲಯ್ಯ ಅವರ ಪುತ್ರಿ, ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಸಿ.ಪವಿತ್ರ (21) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.  

ಮಂಗಳೂರು: ಖಾಸಗಿ ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಸ್ ಟ್ಯಾಂಕರ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಗಾಯಾಳುಗಳ ಪೈಕಿ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.30. ಇಂದು ಬೆಳಿಗ್ಗೆ ಪಾಣೆ ಮಂಗಳೂರಿನಲ್ಲಿ ಅನಿಲ ಸಾಗಾಟದ ಟ್ಯಾಂಕರೊಂದು ಮಾರುತಿ ಇಕೋ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿ ಗೋಪಾಲ್(41) ಎಂದು ಗುರುತಿಸಲಾಗಿದೆ. ಇನ್ನುಳಿದಂತೆ ರಘುನಾಥ್, ಶೇಖರ್, ಮುದರ, ರಾಜೇಶ್ ಹಾಗೂ ಸಂದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಕಳ ನಿವಾಸಿಗಳು ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ

ಗ್ಯಾಸ್ ಟ್ಯಾಂಕರ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಗಾಯಾಳುಗಳ ಪೈಕಿ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದುವರಿದ ಕೊರೋನಾ ಅಟ್ಟಹಾಸ ➤ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.30. ಕೊರೊನಾ ವೈರಸ್‌ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ. ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ

ಮುಂದುವರಿದ ಕೊರೋನಾ ಅಟ್ಟಹಾಸ ➤ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಫರಂಗಿಪೇಟೆ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 30. ಮಸೀದಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಮಸೀದಿಯ ಧರ್ಮಗುರುವಿಗೆ ಹಲ್ಲೆ ನಡೆಸಿರುವ ಘಟನೆ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ‌. ಹಲ್ಲೆಗೊಳಗಾದವರನ್ನು ಫರಂಗಿಪೇಟೆ- ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಧರ್ಮ ಗುರು, ಕುಂದಾಪುರ ನಿವಾಸಿ ಮುಸ್ತಾಕ್ ಎಂದು ಗುರುತಿಸಲಾಗಿದೆ. ಇವರು ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳುವ ಸಂದರ್ಭ ಕಾಲಿಗೆ ಗಾಯಗಳಾಗಿದ್ದು, ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ 12 ಗಂಟೆಯ

ಫರಂಗಿಪೇಟೆ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ➤ ಓರ್ವ ಅರೆಸ್ಟ್, ಮತ್ತೋರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 30. ಕಸ್ಬಾ ಗ್ರಾಮದ ಮಂಡಾಡಿ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸರು ಓರ್ವನನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.   ಬಂಧಿತನನ್ನು ಮೂಡನಡುಗೋಡು ಗ್ರಾಮದ ಮಜಲೋಡಿ ನಿವಾಸಿ ಸತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಸಜೀಪ ಕಾರಾಜೆ ನಿವಾಸಿ ಪ್ರದೀಪ್ ಕುಮಾರ್ ಎಂಬಾತ ಪರಾರಿಯಾಗಿದ್ದಾನೆ. ಆತನ ಬಂಧನಕ್ಕಾಗಿ ಇದೀಗ ಪೋಲೀಸರು ಬಲೆ ಬೀಸಿದ್ದಾರೆ. ಸತೀಶ್ ಎಂಬಾತ

ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ➤ ಓರ್ವ ಅರೆಸ್ಟ್, ಮತ್ತೋರ್ವ ಎಸ್ಕೇಪ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲ್ಪೆ, ಮಾ. 30. ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ ಕುಮಾರ್ (46) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಹೆಲ್ಪರ್ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಕುಡಿತದ ಚಟ ಹೊಂದಿದ್ದು, ಸರಿಯಾಗಿ ಕೆಲಸಕ್ಕೂ ಹೋಗದೆ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ಇವರು ಗುಜ್ಜರಬೆಟ್ಟುವಿನ ಸ್ಮಶಾನಕ್ಕೆ ಹೋಗುವ ದಾರಿಯ ಬದಿಯಲ್ಲಿನ ಮರದ ಕೊಂಬೆಗೆ ನೇಣು ಬಿಗಿದು

ಮಲ್ಪೆ: ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿವಿಯಲ್ಲಿ ಕೊರೋನಾ ಮಿತಿಮೀರಿದ ಹಿನ್ನೆಲೆ ➤ ಎ. 03ರ ವರೆಗೆ ತರಗತಿ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 30. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊರೋನಾ ಸೋಂಕು ಮಿತಿಮೀರಿದ ಹಿನ್ನೆಲೆಯಲ್ಲಿ ಸ್ನಾತಕೋತ್ತರ‌ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದ ತರಗತಿಗಳನ್ನು ಎಪ್ರಿಲ್ 3ರ ವರೆಗೆ ಬಂದ್ ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ‌ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಕೊರೊನಾ‌ ಸೋಂಕು ಕಾಣಿಸಿಕೊಂಡಿದ್ದು, ಹೀಗಾಗಿ ಮಾರ್ಚ್ 29ರ ವರೆಗೆ ತರಗತಿಗಳನ್ನು ಮುಚ್ಚಲಾಗಿತ್ತು, ಆದರೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಮತ್ತೆ 5 ದಿ‌‌ನಗಳ ಮುಚ್ಚಲಾಗಿದೆ. ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ವಸತಿ ನಿಲಯಗಳಲ್ಲಿ

ಮಂಗಳೂರು ವಿವಿಯಲ್ಲಿ ಕೊರೋನಾ ಮಿತಿಮೀರಿದ ಹಿನ್ನೆಲೆ ➤ ಎ. 03ರ ವರೆಗೆ ತರಗತಿ ಬಂದ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪೇಪರ್ ಸಾಗಾಟದ ಓಮ್ನಿ ಪಾದಚಾರಿಗೆ ಢಿಕ್ಕಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 30. ಪೇಪರ್ ಸಾಗಾಟದ ಓಮ್ನಿ ಕಾರೊಂದು ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪತ್ರಿಕೆ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ಮುಂಜಾನೆ 5:20ರ ಸುಮಾರಿಗೆ 34 ನೆಕ್ಕಿಲಾಡಿ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಅವರನ್ನು ಉಪ್ಪಿನಂಗಡಿ

ಉಪ್ಪಿನಂಗಡಿ: ಪೇಪರ್ ಸಾಗಾಟದ ಓಮ್ನಿ ಪಾದಚಾರಿಗೆ ಢಿಕ್ಕಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಮಹಿಳೆ ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 30. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಮಹಿಳೆ‌‌ಯೋರ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟವರನ್ನು ಉಡು‌ಪಿ ಜಿಲ್ಲೆಯ ಕೆಮ್ಮಣ್ಣು ಹೂಡೆಯ ನಿವಾಸಿ ಸುಹಾನಾ (30) ಎಂದು ಗುರುತಿಸಲಾಗಿದೆ. ಇವರ ಪತಿ ಸಿಬ್ಗತುಲ್ಲಾ, ಮಕ್ಕಳಾದ ಸಾಹಿಮ್, ಸಿದ್ರಾ, ಮನ್ಹಾ, ಮರಿಯಮ್ ಗಾಯಗೊಂಡಿದ್ದಾರೆ. ಭಟ್ಕಳದಿಂದ ಹೂಡೆಗೆ ಬರುತ್ತಿದ್ದ ವೇಳೆ ಸಿಬ್ಗತ್ತುಲ್ಲಾ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಮಹಿಳೆ ಮೃತ್ಯು, ನಾಲ್ವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಾರತೀಯ ಸೇನಾ ಗಡಿಭದ್ರತಾ ಪಡೆಗೆ ಕಾಣಿಯೂರಿನ ಯೋಗಿತಾ ಆಯ್ಕೆ

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 29. ಕಾಣಿಯೂರು ಗ್ರಾಮದ ಯುವತಿಯೋರ್ವಳು ಭಾರತೀಯ ಸೇನೆಯ ಗಡಿಭದ್ರತಾ ಪಡೆ(BSF) ಗೆ ಆಯ್ಕೆಯಾಗಿದ್ದಾರೆ. ಮಲೆಕುರ್ಚಿ ಮೇದಪ್ಪ ಗೌಡ ಮತ್ತು ದೇವಕಿ ದಂಪತಿಗಳ ಪುತ್ರಿ ಯೋಗಿತಾ ಎಂಬವರು ಬಿಎಸ್ಎಫ್ ಗೆ ಆಯ್ಕೆಯಾದವರು. ಇವರು ಎಪ್ರಿಲ್ 01 ರಂದು ಮಧ್ಯಪ್ರದೇಶದ ಗ್ವಾಲಿಯರ್ ನ ತೇಕನ್ಪುರ್ ಎಂಬಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ಇವರು ಪ್ರಾಥಮಿಕ ಶಿಕ್ಷಣವನ್ನು ಬೊಬ್ಬೆಕೇರಿ ಹಾಗೂ ಅಲಂಕಾರಿನಲ್ಲಿ ಪಡೆದು, ಬಳಿಕ ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಕಾಣಿಯೂರಿನಲ್ಲಿ ಪೂರೈಸಿದ್ದಾರೆ. ಬಳಿಕ ಕೆ.ಎಸ್

ಭಾರತೀಯ ಸೇನಾ ಗಡಿಭದ್ರತಾ ಪಡೆಗೆ ಕಾಣಿಯೂರಿನ ಯೋಗಿತಾ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top