ಕರಾವಳಿ

ಶಿಕ್ಷಣ ತಜ್ಞ ಪ್ರೊ.ಎಂ.ಅಬೂಬಕರ್ ತುಂಬೆ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಶಿಕ್ಷಣ ತಜ್ಞ, ಯುಎಇ ರಾಸ್ ಅಲ್ ಖೈಮಾದ ಸ್ಕಾಲರ್ಸ್ ಇಂಡಿಯನ್ ಹೈಸ್ಕೂಲ್ ಪ್ರಾಂಶುಪಾಲ ಪ್ರೊ.ಎಂ.ಅಬೂಬಕರ್ ತುಂಬೆ(59) ಅವರು ಮಂಗಳವಾರ ಮುಂಜಾನೆ ಯುಎಇಯ ರಾಸ್ ಅಲ್ ಖೈಮಾದಲ್ಲಿರುವ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.     1962ರ ಆಗಸ್ಟ್ 15ರಂದು ಜನಿಸಿದ ಇವರು 1982ರಲ್ಲಿ ಮಂಗಳೂರಿನ ಬದ್ರಿಯಾ ಪ್ರಾಥಮಿಕ‌ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ‌ ಆರಂಭಿಸಿದ್ದರು. 1987ರವರೆಗೆ ಅಲ್ಲಿ ಶಿಕ್ಷಕರಾಗಿದ್ದ ಇವರು ಕೆಲಕಾಲ ಬಿ.ಎ.ಗ್ರೂಪ್ ತುಂಬೆ ಇದರ ಎಕ್ಸಿಕ್ಯೂಟಿವ್ ಮ್ಯಾನೇಜರ್ […]

ಶಿಕ್ಷಣ ತಜ್ಞ ಪ್ರೊ.ಎಂ.ಅಬೂಬಕರ್ ತುಂಬೆ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.23. ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಕುಂಡಾಪು ನಿವಾಸಿ ಪದ್ಮ ಪಕ್ಕಳ ಎಂಬವರ ಪುತ್ರಿ ಶ್ರೇಯಾ ಪಕ್ಕಳ (16) ಎಂದು ಗುರುತಿಸಲಾಗಿದೆ. ಆರೋಗ್ಯದಿಂದಿದ್ದ ಶ್ರೇಯಾಳಿಗೆ ಇಂದು ಬೆಳಿಗ್ಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.    

ಪುತ್ತೂರು: ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ

ಕಡಬ: ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್ ಶುಭಾರಂಭ ➤ ಎಲ್ಇಡಿ ಲೈಟ್ಸ್ ಗಳ ತಯಾರಿ, ಮಾರಾಟ ಹಾಗೂ ರಿಪೇರಿ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮಾ.22. ಎಲ್ಇಡಿ ವಸ್ತುಗಳ ತಯಾರಿಕಾ ಸಂಸ್ಥೆ ‘ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್’ ಕಡಬದ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಕಮರ್ಷಿಯಲ್‌ ಕಾಂಪ್ಲೆಕ್ಸ್ ನಲ್ಲಿ ಸೋಮವಾರದಂದು ಶುಭಾರಂಭಗೊಂಡಿತು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ರಿಬ್ಬನ್ ತುಂಡರಿಸುವ‌ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಫಾ| ಅಲೆಕ್ಸ್ ಒಟ್ಟಪ್ಲಾಕಲ್, ಮೈಕೆಲ್ ಓ.ಎಂ. ಹಾಗೂ ತ್ರೇಸಿಯಮ್ಮ ದಂಪತಿ ದೀಪ‌ ಬೆಳಗಿಸಿ ಶುಭಹಾರೈಸಿದರು. ರೆ|ಫಾ| ದೇವಸ್ಯ ಪೈಕಾಟ್ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಮುಖ್ಯ ಅತಿಥಿಯಾಗಿ

ಕಡಬ: ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್ ಶುಭಾರಂಭ ➤ ಎಲ್ಇಡಿ ಲೈಟ್ಸ್ ಗಳ ತಯಾರಿ, ಮಾರಾಟ ಹಾಗೂ ರಿಪೇರಿ ಲಭ್ಯ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಉಳ್ಳಾಲ: ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 22. ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಟಯರ್ ಅಂಗಡಿ ಮಾಲೀಕ ಗಂಭಿರ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ ಸಂಭವಿಸಿದೆ.   ಗಂಭೀರ ಗಾಯಗೊಂಡವರನ್ನು ಸ್ಕೂಟರ್ ಸವಾರ ಉದ್ಯಾವರ ಮಾಡ ನಿವಾಸಿ ತುಳಸಿ (35) ಎಂದು ಗುರುತಿಸಲಾಗಿದೆ. ಇವರು ತಲಪಾಡಿಯಲ್ಲಿ ಟಯರ್ ಅಂಗಡಿ ಹೊಂದಿದ್ದು, ಮನೆಯಿಂದ ಸ್ಕೂಟರಿನಲ್ಲಿ ಅಂಗಡಿಗೆ ಬರುತ್ತಿದ್ದ ಸಂದರ್ಭ ಡಿವೈಡರ್ ಬಳಿ ಸ್ಕೂಟರ್ ತಿರುಗಿಸುತ್ತಿದ್ದ ವೇಳೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್

ಉಳ್ಳಾಲ: ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ನಿಡ್ಲೆ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 22. ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿಯೋರ್ವಳು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಿಡ್ಲೆ ಎಂಬಲ್ಲಿ ನಡೆದಿದೆ.   ಮೃತಳನ್ನು ಮಾನಸ (15) ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಂದಿನಿ‌ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ದೇಶದ ದೇವಸ್ಥಾನದಲ್ಲಿ ಹರಕೆ ಮುಡಿ ಒಪ್ಪಿಸಿ ಬಳಿಕ ಸ್ನಾನಕ್ಕೆಂದು ನೇತ್ರಾವತಿ ನದಿ ಘಟ್ಟಕ್ಕೆ ತೆರಳಿದ್ದು, ಅಲ್ಲಿ ಜನಸಂದಣಿ ಹೆಚ್ಚಿದ್ದರಿಂದ ನಿಡ್ಲೆ ಕುದ್ರಾಯ ಸಮೀಪದ

ಧರ್ಮಸ್ಥಳ: ನಿಡ್ಲೆ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ಇಂದೇ ನಿರ್ಧಾರವಾಗುತ್ತಾ ಲಾಕ್-ಡೌನ್..❓ ➤ ಲಾಕ್-ಡೌನ್ ಆದಲ್ಲಿ ಶಾಲಾ-ಕಾಲೇಜುಗಳಿಗೆ ಬೀಳಲಿದೆ ಬ್ರೇಕ್..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 22.‌ ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆ ಕೊರೋನಾ ನಿಯಂತ್ರಣಕ್ಕಾಗಿ ಸೆಮಿ ಲಾಕ್-ಡೌನ್ ಹೇರಿಕೆಯ ಮಾತುಗಳು ಕೇಳಿಬರುತ್ತಿರುವ ಕಾರಣ ಇಂದು ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಕೊರೊನಾ ನಿಯಂತ್ರಣಕ್ಕೆ ಶಾಲೆ- ಕಾಲೇಜುಗಳ ಬಂದ್ ಮಾಡುವುದು, ಒಳಾಂಗಣ ಕಾರ್ಯಕ್ರಮಗಳಿಗೆ ನಿರ್ಬಂಧ, ಈಜುಕೊಳ ಹಾಗೂ ಜಿಮ್ ಗಳಿಗೆ ನಿರ್ಬಂಧ ಹೇರಿಕೆ ಸೇರಿದಂತೆ ಹಲವು ಸಲಹೆಗಳನ್ನು ಕೋವಿಡ್ ತಾಂತ್ರಿಕ ಸಮಿತಿಯು ನೀಡಿದ್ದು, ಇದೀಗ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ

? ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ಇಂದೇ ನಿರ್ಧಾರವಾಗುತ್ತಾ ಲಾಕ್-ಡೌನ್..❓ ➤ ಲಾಕ್-ಡೌನ್ ಆದಲ್ಲಿ ಶಾಲಾ-ಕಾಲೇಜುಗಳಿಗೆ ಬೀಳಲಿದೆ ಬ್ರೇಕ್..‼️ Read More »

ಕರಾವಳಿ

ಪುತ್ತೂರು: ಬೈಕ್ ಸ್ಕಿಡ್ ಆಗಿ ಓರ್ವ ವಿದ್ಯಾರ್ಥಿ ಮೃತ್ಯು- ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 22. ಬೈಕ್ ಸ್ಕಿಡ್ ಆದ ಪರಿಣಾಮ ಕಾಲೇಜ್ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟು, ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಅವರ ಸ್ನೇಹಿತ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್ ಅವರು ಪುತ್ತೂರು ಪಿಜಿಯಲ್ಲಿದ್ದು ಭಾನುವಾರದಂದು ಮಾಣಿ ಸಾದಿಕುಕ್ಕು ಜಾತ್ರೆಗೆ

ಪುತ್ತೂರು: ಬೈಕ್ ಸ್ಕಿಡ್ ಆಗಿ ಓರ್ವ ವಿದ್ಯಾರ್ಥಿ ಮೃತ್ಯು- ಮತ್ತೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಕಬಡ್ಡಿ ಪಂದ್ಯಾಟ- ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 22. ಕ್ಲಾಸಿಕ್ ಅರಂತೋಡು ಇದರ ಅಶ್ರಯದಲ್ಲಿ ಪ್ರಥಮ ವರ್ಷದ 60 ಕೆ.ಜಿ ವಿಭಾಗದ ಪುರುಷರ ಸೂರ್ಯ ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಭಾನುವಾರದಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಗಮಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮೊಗೇರ ಸಂಘದ ಗೌರವಾಧ್ಯಕ್ಷರಾದ ಡಾ.ಬಿ.ರಘು

ಅರಂತೋಡು: ಕಬಡ್ಡಿ ಪಂದ್ಯಾಟ- ಸಮಾರೋಪ ಸಮಾರಂಭ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಭಾನುವಾರ ಸಂಜೆ ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ನಡೆದಿದೆ. ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ಸಿನಲ್ಲಿ ಯುವತಿಯ ಮೈ ಮುಟ್ಟಿದವನಿಗೆ ಬಿತ್ತು ಧರ್ಮದೇಟು ➤ ಸಾರ್ವಜನಿಕರ ಎದುರೇ ರುಬ್ಬಿದ ಯುವತಿ

(ನ್ಯೂಸ್ ಕಡಬ) newskadaba.com ಹಾಸನ, ಮಾ.21. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದಾತನಿಗೆ ಯುವತಿಯೋರ್ವಳು ಸಾರ್ವಜನಿಕವಾಗಿ ಹೊಡೆದಿರುವ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರಿನಿಂದ ಹಾಸಕ್ಕೆ ತೆರಳುತ್ತಿದ್ದ ಬಸ್​ ಹತ್ತಿದ್ದ ವ್ಯಕ್ರಿಯೋರ್ವ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬಸ್ ಹಾಸನ ನಿಲ್ದಾಣ ತಲುಪುತ್ತಿದ್ದಂತೆ ಯುವತಿಯು ವ್ಯಕ್ತಿಯ ಮೇಲೆ ಮುಗಿಬಿದ್ದಿದ್ದು, ಸಾರ್ವಜನಿಕವಾಗಿ ಚೆನ್ನಾಗಿ ಬಾರಿಸಿದ್ದಾಳೆ. ಬಳಿಕ ಸ್ಥಳದಲ್ಲಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ಹಿಡಿದು ಹಾಸನ ಪೊಲೀಸರಿಗೆ ಒಪ್ಪಿಸಿದ್ದಾರೆ.    

ಬಸ್ಸಿನಲ್ಲಿ ಯುವತಿಯ ಮೈ ಮುಟ್ಟಿದವನಿಗೆ ಬಿತ್ತು ಧರ್ಮದೇಟು ➤ ಸಾರ್ವಜನಿಕರ ಎದುರೇ ರುಬ್ಬಿದ ಯುವತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top