ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರ ನೇಮಕಗೊಳಿಸಿ ಸರಕಾರ ಆದೇಶ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 06. ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 9 ಮಂದಿಯ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಈ ಹಿಂದೆ ನೇಮಿಸಲಾಗಿದ್ದ ಅಭಿವೃದ್ಧಿ ಸಮಿತಿಯ ಕೆಲ ಸದಸ್ಯರನ್ನು ಉಳಿಸಿಕೊಂಡು ಹೊಸದಾಗಿ ನಾಲ್ಕು ಮಂದಿಯನ್ನು ಸೇರ್ಪಡೆಗೊಳಿಸಿ ಒಟ್ಟು 9 ಮಂದಿಯ ವ್ಯವಸ್ಥಾಪನಾ ಸಮಿತಿ ರಚಿಸಿ ಧಾರ್ಮಿಕ ಸಂಸ್ಥೆ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮಾ.5 ರಂದು ಆದೇಶ ಹೊರಡಿಸಿದ್ದಾರೆ. ಈ ಹಿಂದೆ […]








