ಕರಾವಳಿ

ಕಡಬ: ಐತ್ತೂರು ರಕ್ಷಿತಾರಣ್ಯದಿಂದ ಅಕ್ರಮ ಮರ ಸಾಗಾಟದ ಕುರಿತು ದೂರು ನೀಡಿದ್ದ ಹಿನ್ನೆಲೆ ➤ ಪ್ರಸಾದ್ ಎಂಬವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಬಿಳಿನೆಲೆ ರಕ್ಷಿತಾರಣ್ಯದಲ್ಲಿದ್ದ ನೂರಾರು ಮರಗಳ ಅಕ್ರಮ ಸಾಗಾಟದ ಕುರಿತು ಅರಣ್ಯ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನೆಲೆ ಬಿಳಿನೆಲೆ ಪ್ರಸಾದ್ ಎಂಬವರ ಮನೆಗೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಮನೆಯಲ್ಲಿದ್ದ ಹಿರಿಯ ಜೀವಗಳ ಮೇಲೆ ಹಲ್ಲೆ ನಡೆಸಿದ ಘಟನೆ ಐತ್ತೂರು ಗ್ರಾಮದ ಮೂಜೂರು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಬಿಳಿನೆಲೆಯ ಪ್ರಸಾದ್ ಎಂಬವರು ಇಲ್ಲಿ‌ನ ರಕ್ಷಿತಾರಣ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರ ಸಾಗಾಟದ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ […]

ಕಡಬ: ಐತ್ತೂರು ರಕ್ಷಿತಾರಣ್ಯದಿಂದ ಅಕ್ರಮ ಮರ ಸಾಗಾಟದ ಕುರಿತು ದೂರು ನೀಡಿದ್ದ ಹಿನ್ನೆಲೆ ➤ ಪ್ರಸಾದ್ ಎಂಬವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಜಿಂಕೆಗೆ ಬೈಕ್ ಢಿಕ್ಕಿ ➤ ಸವಾರ ಗಂಭೀರ ಗಾಯ, ಜಿಂಕೆ ಸಾವು

(ನ್ಯೂಸ್ ಕಡಬ) newskadaba.com ಹೆಬ್ರಿ, ಮಾ. 03. ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕನ್ಯಾನ ಎಂಬಲ್ಲಿ ಬುಧವಾರದಂದು ನಡೆದಿದೆ. ಖಾಸಗಿ ಬಸ್ಸೊಂದರ ಚಾಲಕ ಹರೀಶ್ ಎಂಬವರು ಇಂದು ಬೆಳಗ್ಗೆ ಬೈಕ್‍ ನಲ್ಲಿ ಸಂಚರಿಸುತ್ತಿದ್ದ ವೇಳೆ ಜಿಂಕೆಯೊಂದು ಏಕಾಏಕಿ ರಸ್ತೆಗೆ ಜಿಗಿದ ಪರಿಣಾಮ, ನಿಯಂತ್ರಣ ಕಳೆದುಕೊಂಡ ಬೈಕ್ ಜಿಂಕೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಹರೀಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳೀಯರು

ಉಡುಪಿ: ಜಿಂಕೆಗೆ ಬೈಕ್ ಢಿಕ್ಕಿ ➤ ಸವಾರ ಗಂಭೀರ ಗಾಯ, ಜಿಂಕೆ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮತ್ತೆ ಚಿರತೆ ಪ್ರತ್ಯಕ್ಷ ➤ ಸಾಕುನಾಯಿಯ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ತಾಲೂಕಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾಕು ನಾಯಿಯೊಂದರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ರೆಂಜಿಲಾಡಿಯಲ್ಲಿ ರವಿವಾರ ರಾತ್ರಿ ನಡೆದಿದೆ. ಎಳುವಾಳೆ ಭಾಸ್ಕರ ಗೌಡ ಎಂಬವರ ಮನೆಯ ಸಾಕು ನಾಯಿಯ ಮೇಲೆ ಚಿರತೆ ದಾಳಿ ನಡೆಸಿದ್ದು ನಾಯಿಯು ಗಾಯಗೊಂಡಿದೆ. ಹೇಗೋ ತಪ್ಪಿಸಿಕೊಂಡ ನಾಯಿಯು ತನ್ನ ಜೀವವನ್ನು ಉಳಿಸಿಕೊಂಡಿದೆ. ಮನೆಯ ಅಂಗಳದಲ್ಲಿ ಚಿರತೆ ಗುರುತು ಪತ್ತೆಯಾಗಿದೆ. ಈ ಪರಿಸರದಲ್ಲಿ ಎರಡು ಚಿರತೆಗಳು ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕೆಲ

ಕಡಬ: ಮತ್ತೆ ಚಿರತೆ ಪ್ರತ್ಯಕ್ಷ ➤ ಸಾಕುನಾಯಿಯ ಮೇಲೆ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲೂಕು ಅಧ್ಯಕ್ಷ ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 03. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಇದರ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ರವರು ಎಸ್ಡಿಪಿಐ ಪಕ್ಷದ ತತ್ವ ಹಾಗೂ ಸಿದ್ದಾಂತವನ್ನು ಒಪ್ಪಿಕೊಂಡು ಮಂಗಳವಾರದಂದು ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆಯವರು ಪಕ್ಷದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಶಾಲು ಹಾಕುವ ಮೂಲಕ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಜಲೀಲ್ ಕೆ, ಆನಂದ

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲೂಕು ಅಧ್ಯಕ್ಷ ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಹೊಸ್ಮಠದ ಅಪಾಯಕಾರಿ ಹಂಪ್ ಗೆ ಕೊನೆಗೂ ಬಣ್ಣದ ಭಾಗ್ಯ ➤ ಮಾಧ್ಯಮ ವರದಿಗೆ ಎಚ್ಚೆತ್ತುಕೊಂಡ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಮಾ.02. ಓರ್ವ ಯುವಕ ಹಾಗೂ ಓರ್ವ ಮಹಿಳೆಯನ್ನು ಬಲಿಪಡೆದ ಹೊಸ್ಮಠ ಸೇತುವೆಯ ಸಮೀಪ ಅಳವಡಿಸಲಾಗಿರುವ ಹಂಪ್ ಗೆ ಕೊನೆಗೂ ಬಣ್ಣ ಬಳಿಯಲಾಗಿದೆ. ಹೊಸಮಠ ನೂತನ ಸೇತುವೆಯ ಬಳಿ ಉಪ್ಪಿನಂಗಡಿ-ಕಡಬ ರಾಜ್ಯರಸ್ತೆಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲಾಗಿರುವ ಹಂಪ್ (ರಸ್ತೆ ಉಬ್ಬು) ನಿಂದಾಗಿ ನಿರಂತರ ಅಪಘಾತಗಳು ನಡೆಯುತ್ತಿದ್ದು, ಜೀವ ಹಾನಿಯೂ ಆಗುತ್ತಿರುವುದು ವಾಹನ ಚಾಲಕರ ಆತಂಕಕ್ಕೆ ಕಾರಣವಾಗಿತ್ತು. ಒಂದೂವರೆ ವರ್ಷದ ಹಿಂದೆ ನೂತನ ಸೇತುವೆ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರಕ್ಕೆ ತೆರೆದುಕೊಂಡ ಬಳಿಕ ಸೇತುವೆಯ

ಹೊಸ್ಮಠದ ಅಪಾಯಕಾರಿ ಹಂಪ್ ಗೆ ಕೊನೆಗೂ ಬಣ್ಣದ ಭಾಗ್ಯ ➤ ಮಾಧ್ಯಮ ವರದಿಗೆ ಎಚ್ಚೆತ್ತುಕೊಂಡ ಇಲಾಖೆ Read More »

ಕರಾವಳಿ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಕಸ್ಟಮ್ಸ್ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಚಿನ್ನವನ್ನು ವೈರ್ ರೂಪಕ್ಕೆ ಇಳಿಸಿ ಟ್ರಾಲಿ ಬ್ಯಾಂಗ್ ವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದೆ. ಆರೋಪಿಯನ್ನು ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಇಂದು ದುಬೈನಿಂದ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ವೇಳೆ, ಆರೋಪಿಯ ಟ್ರಾಲಿ ಬ್ಯಾಗ್‍ ನಲ್ಲಿ ಚಿನ್ನವನ್ನು ಅಡಗಿಸಿಟ್ಟು, ಅಕ್ರಮ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಪ್ರಕರಣಕ್ಕೆ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಕಸ್ಟಮ್ಸ್ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಮ್ಮೆಮಾಡು ಉರೂಸ್ ಗೆ ಕೇರಳದಿಂದ ಜನರು ಆಗಮಿಸುತ್ತಿರುವ ಹಿನ್ನೆಲೆ ➤ ಸಂಪಾಜೆ ಗೇಟ್ ಬಳಿ ಬಿಗಿ ತಪಾಸಣೆ- ಸಾಲುಗಟ್ಟಿ ನಿಂತ ವಾಹನಗಳು

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 02. ಕೊರೋನಾ ಮುಂಜಾಗೃತಾ ಕ್ರಮವಾಗಿ ಹೊರ ರಾಜ್ಯದಿಂದ ಬರುತ್ತಿರುವ ಪ್ರಯಾಣಿಕರ ತಪಾಸಣಾ ಕಾರ್ಯವು ಬಿಗಿಯಾದ ಕಾರಣ ಸಂಪಾಜೆ ಗೇಟ್‍ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಕೇರಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಪಾಸಣೆ ಮಾಡುವಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ ಹಿನ್ನೆಲೆ ಸೋಮವಾರ ಬೆಳಗ್ಗೆಯಿಂದಲೇ ಸಂಪಾಜೆ ಗೇಟಿನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಕೊರೋನಾ ಪರೀಕ್ಷಾ ವರದಿ ತಂದ ಬಳಿಕ ಹೊರರಾಜ್ಯದ ವಾಹನಗಳಿಗೆ ಕೊಡಗಿಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಕೊಡಗಿನ ಎಮ್ಮೆಮಾಡು

ಎಮ್ಮೆಮಾಡು ಉರೂಸ್ ಗೆ ಕೇರಳದಿಂದ ಜನರು ಆಗಮಿಸುತ್ತಿರುವ ಹಿನ್ನೆಲೆ ➤ ಸಂಪಾಜೆ ಗೇಟ್ ಬಳಿ ಬಿಗಿ ತಪಾಸಣೆ- ಸಾಲುಗಟ್ಟಿ ನಿಂತ ವಾಹನಗಳು Read More »

ಕರಾವಳಿ

? ಕೊಣಾಜೆ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಕೊಣಾಜೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪಾನೇಲ ನಿವಾಸಿ ಇರ್ಷಾದ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಬೋಳಿಯಾರ್ ನಿವಾಸಿ ಶಾಂಭವಿ ಎಂಬವರು ತೋಟದಿಂದ ಸೋಗೆ ತರುತ್ತಿದ್ದ ವೇಳೆ ಹಿಂದಿನಿಂದ ಬಂದು ಸರ ಎಳೆದು ಪರಾರಿಯಾಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಇರ್ಷಾದ್ ಎಂಬಾತನನ್ನು ಬಂಧಿಸಿದ್ದಾರೆ.

? ಕೊಣಾಜೆ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಹಿಳಾ ಠಾಣಾ ಎಸ್.ಐ ಮೇಲೆ ಹಲ್ಲೆ ಆರೋಪ ➤ ಸಹೋದರಿಯರಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 02. ದೂರು ಅರ್ಜಿಯೊಂದರ ವಿಚಾರಣೆಯ ವೇಳೆ ಪುತ್ತೂರು ಮಹಿಳಾ ಠಾಣಾ ಎಸ್.ಐ ಸೇಸಮ್ಮ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿಸೋಜ ಅವರ ಪತ್ನಿ ಬೇಬಿ ಡಿಸೋಜ(34) ಹಾಗೂ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ(35) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಎಸ್.ಐ ಸೇಸಮ್ಮ ಅವರು ಆಸ್ಪತ್ರೆಗೆ

ಪುತ್ತೂರು: ಮಹಿಳಾ ಠಾಣಾ ಎಸ್.ಐ ಮೇಲೆ ಹಲ್ಲೆ ಆರೋಪ ➤ ಸಹೋದರಿಯರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೀಟ್ ಪರೀಕ್ಷಾ ಶುಲ್ಕ ಹೆಚ್ಚಳ ➤ ಉಪ್ಪಿನಂಗಡಿ ಕ್ಯಾಂಪಸ್ ಫ್ರಂಟ್ ವತಿಯಿಂದ ಕಡಬ ತಹಶೀಲ್ದಾರ್ ಗೆ ಮನವಿ ಮತ್ತು ಪ್ಲೇಕಾರ್ಡ್ ಪ್ರದರ್ಶನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 02. ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ಇದರ ವತಿಯಿಂದ ನೀಟ್ ಪ್ರವೇಶ ಪರೀಕ್ಷೆಯ ಶುಲ್ಕ ಹೆಚ್ಚಳ ವಿರೋಧಿಸಿ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳಿಗಾದ ಸಂಕಷ್ಟವನ್ನು ಸಂಪೂರ್ಣವಾಗಿ ವಿವರಿಸಲಾಯಿತು ಬಳಿಕ ಕಡಬ ಜ್ಯೂನಿಯರ್ ಕಾಲೇಜು ಪಕ್ಕದಲ್ಲಿ ವಿದ್ಯಾರ್ಥಿಗಳಿಂದ ಪ್ಲೇಕಾರ್ಡ್ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಏರಿಯಾ ಉಪಾಧ್ಯಕ್ಷರಾದ ಅಫ್ಸಲ್ ಕಡಬ ಹಾಗೂ ಕಡಬ ಯುನಿಟ್ ಮುಖಂಡರಾದ ಆಸಿರ್ ಕಡಬ ಮತ್ತು ಸದಸ್ಯರು ಉಪಸ್ಥಿತರಿದ್ದರು.

ನೀಟ್ ಪರೀಕ್ಷಾ ಶುಲ್ಕ ಹೆಚ್ಚಳ ➤ ಉಪ್ಪಿನಂಗಡಿ ಕ್ಯಾಂಪಸ್ ಫ್ರಂಟ್ ವತಿಯಿಂದ ಕಡಬ ತಹಶೀಲ್ದಾರ್ ಗೆ ಮನವಿ ಮತ್ತು ಪ್ಲೇಕಾರ್ಡ್ ಪ್ರದರ್ಶನ Read More »

ಕರಾವಳಿ, ಕರ್ನಾಟಕ
Scroll to Top